ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಉಜಿರೆಗೆ
Team Udayavani, Dec 8, 2019, 5:21 AM IST
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗೆ ಡಿ. 8ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಾಲೂಕಿಗೆ ಆಗಮಿಸಲಿದ್ದಾರೆ.
ಉಜಿರೆ ರತ್ನವರ್ಮ ಹೆಗ್ಗಡೆ ಕ್ರಿಡಾಂಗಣದಲ್ಲಿ ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ವಿವಿಧ ಇಲಾಖೆಯ 347 ಕೋ.ರೂ. ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸುವರು. ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸಿ.ಎನ್., ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಹಾಗೂ ಸಹಕಾರ ಸಚಿವ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು.
ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯದ ವಿವಿಧ ಇಲಾಖೆ ಸಚಿವರಾದ ಆರ್. ಅಶೋಕ, ಕೆ.ಎಸ್. ಈಶ್ವರಪ್ಪ , ಎಸ್. ಸುರೇಶ್ ಕುಮಾರ್, ಸಿ.ಟಿ. ರವಿ, ಸಿ.ಸಿ. ಪಾಟೀಲ್, ಜಿ.ಸಿ. ಮಾಧುಸ್ವಾಮಿ, ಪ್ರಭು ಚೌಹಾಣ್, ಶಶಿಕಲಾ ಜೊಲ್ಲೆ ಉಪಸ್ಥಿತರಿರುವರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಬಿ.ಎಂ. ಫಾರುಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‌ಸಾರ್, ಲಕ್ಷ್ಮೀನಾರಾಯಣ ಕಜೆಗದ್ದೆ, ಡಾ| ಕೆ. ಜಗದೀಶ್ ಪೈ, ರಹೀಂ ಉಚ್ಚಿಲ, ರಾಜ್ಯ ವಿದ್ಯುತ್ ಪ್ರಸರಣ ನಿಗಮ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಪ್ರಾದೇಶಿಕ ಆಯುಕ್ತ ವಿ.ಯಶವಂತ, ಉಜಿರೆ ಗ್ರಾ.ಪಂ. ಅಧ್ಯಕ್ಷ ಶ್ರೀಧರ ಪೂಜಾರಿ ಕೆ. ಭಾಗವಹಿಸುವರು ಎಂದು ಜಿಲ್ಲಾಡಳಿತ ಪ್ರಕಟನೆ ತಿಳಿಸಿದೆ.
ಬೆಳಗ್ಗೆ 11.30ಕ್ಕೆ ಸಂಗೀತ ಕಾರ್ಯಕ್ರಮ ಜರಗಲಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.