ಮಕ್ಕಳ ಆರೋಗ್ಯ ಕಾಳಜಿ ಬಹು ಮುಖ್ಯ


Team Udayavani, Feb 5, 2019, 12:30 AM IST

d-44.jpg

ಮಂಗಳೂರು: ಮನೆಯಲ್ಲಿ ಮಗು ಅನಾರೋಗ್ಯವಾಗಿದ್ದರೆ ಇಡೀ ಮನೆ ಮಂದಿ ಅನಾರೋಗ್ಯವಾಗುವ ಮನಸ್ಥಿತಿ ನಿರ್ಮಾಣವಾಗುತ್ತದೆ. ಈ ಕಾರಣದಿಂದಾಗಿ ಮಕ್ಕಳ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಿಕೊಳ್ಳುವ ಕಾಳಜಿಯನ್ನು ಹೆತ್ತವರು ಬೆಳೆಸಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ಹೇಳಿದರು. ಅತ್ತಾವರ ಕೆಎಂಸಿ ಆಸ್ಪತ್ರೆಯ ಸಾಮಾಜಿಕ ಕಳಕಳಿಯ ಅಂಗವಾಗಿ 3ನೇ ಹಂತದ ಬಾಲಶಲ್ಯ ಕ್ರಿಯಾ ಅಭಿಯಾನ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಆರೋಗ್ಯದ ಬಗ್ಗೆ ಹೆತ್ತವರು ಯಾವುದೇ ಕಾರಣಕ್ಕೂ ನಿರಾಸಕ್ತಿ ತೋರಬಾರದು. ತಜ್ಞ ವೈದ್ಯರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸುತ್ತಿದ್ದರೆ ಎಲ್ಲವೂ ಪರಿಪೂರ್ಣವಾಗುತ್ತದೆ. ವೈದ್ಯಕೀಯ ಕ್ಷೇತ್ರದಲ್ಲಿ ಮಣಿಪಾಲ ಸಮೂಹ ಸಂಸ್ಥೆಯ ಸೇವೆ ದೇಶಕ್ಕೆ ಮಾದರಿ. ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ನೀಡುವಲ್ಲಿ ಕೆಎಂಸಿ ಪಾತ್ರ ಮಹತ್ವದ್ದು ಎಂದು ಶ್ಲಾಘಿಸಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಕೆಎಂಸಿ ಆಸ್ಪತ್ರೆಯು ಲಕ್ಷಾಂತರ ಜನರಿಗೆ ಪುನರಪಿ ಜೀವನ ಕಲ್ಪಿಸಿಕೊಟ್ಟಿದೆ. ಸರಕಾರ ಮಾಡಬೇಕಾದ ಸಮಾಜಮುಖೀ ಕಾರ್ಯಗಳನ್ನು ಕೆಎಂಸಿ ಆಸ್ಪತ್ರೆಯು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಅಂತಾರಾಷ್ಟ್ರೀಯ ಮಾದರಿಯಲ್ಲಿ ಚಿಕಿತ್ಸೆ ಒದಗಿಸಿಕೊಡುವಲ್ಲಿ ಕೆಎಂಸಿ ಪಾತ್ರ ಹಿರಿದು ಎಂದರು.

ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಸಹಕುಲಾಧಿಪತಿ ಡಾ| ಎಚ್.ಎಸ್‌. ಬಲ್ಲಾಳ್‌ ಅಧ್ಯಕ್ಷತೆ ವಹಿಸಿದ್ದರು. ಬಾಲಶಲ್ಯ ಕ್ರಿಯಾ ಅಭಿಯಾನ ಯೋಜನೆ ಅತ್ಯಂತ ಯಶಸ್ವಿ ಯೋಜನೆಯಾಗಿದ್ದು, ಇದನ್ನು ಎರಡೂ ಜಿಲ್ಲೆಗಳಿಗೂ ವಿಸ್ತರಿಸಬಹುದಾಗಿದೆ. ಈ ಬಗ್ಗೆ ಮಣಿಪಾಲ ಸಂಸ್ಥೆ ಅತ್ಯಂತ ಮುತುವರ್ಜಿಯಿಂದ ನೇತೃತ್ವ ವಹಿಸಿಕೊಳ್ಳಲಿದೆ ಎಂದರು.

ಶಸ್ತ್ರಚಿಕಿತ್ಸೆಗೆ ಗುರುತಿಸಲ್ಪಟ್ಟ ಮಕ್ಕಳಿಗೆ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗುವುದು. ಅನಂತ ಮಲ್ಯ ಚಾರಿಟೆಬಲ್‌ ಟ್ರಸ್ಟ್‌ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮಕ್ಕಳಿಗೆ ಅವಶ್ಯ ಔಷಧ, ಆಹಾರ, ಪೋಷಣಾ ವೆಚ್ಚ ಭರಿಸಲಿದೆ. ಜ. 21ರ ವರೆಗೆ ಉಚಿತ ಶಸ್ತ್ರಚಿಕಿತ್ಸಾ ಸಮಾಲೋಚನೆಯನ್ನೂ ಹಮ್ಮಿಕೊಳ್ಳಲಾಗಿದೆ. ಪೋಷಕರು ರೋಗ ಲಕ್ಷಣ ಉಳ್ಳ ತಮ್ಮ ಮಕ್ಕಳನ್ನು ಪರಿಶೀಲನೆಗಾಗಿ ಕರೆತರಬಹುದು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌, ಅಮೆರಿಕದ ಪೀದ್‌ ಪರಾಯಿ ಫೌಂಡೇಶನ್‌ ಸ್ಥಾಪಕ ಅಧ್ಯಕ್ಷ ಡಾ| ಅಶ್ವಿ‌ನ್‌ ಪಿಂಪಲ್ವರ್‌, ಅನಂತ ಮಲ್ಯ ಚಾರಿಟೇಬಲ್‌ ಟ್ರಸ್ಟ್‌ನ ಟ್ರಸ್ಟಿ ಜಿತೇಂದ್ರ ನಾಯಕ್‌, ಮಾಹೆ ಮಂಗಳೂರು ಕ್ಯಾಂಪಸ್‌ನ ಪ್ರೊ ವೈಸ್‌ ಚಾನ್ಸಿಲರ್‌ ಡಾ| ವಿ. ಸುರೇಂದ್ರ ಶೆಟ್ಟಿ, ಕೆಎಂಸಿ ಮಂಗಳೂರು ಡೀನ್‌ ಡಾ| ಎಂ. ವೆಂಕಟ್ರಾಯ ಪ್ರಭು, ಕೆಎಂಸಿಯ ರೀಜಿನಲ್‌ ಚೀಫ್‌ ಆಪರೇಟಿಂಗ್‌ ಆಫೀಸರ್‌ ಸಾಘಿರ್‌ ಸಿದ್ದಿಕಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.