Ammembala ಸಾಹಿತ್ಯ ಪ್ರಶಸ್ತಿಗೆ ಆಯ್ಕೆ; ಜನವರಿ 24ರಂದು ಮಂಗಳೂರು ವಿ.ವಿ.ಯಲ್ಲಿ ಪ್ರದಾನ
Team Udayavani, Jan 21, 2024, 11:51 PM IST
ಮಂಗಳೂರು: ಹಿರಿಯ ನವೋದಯ ಕವಿ, ಸಂಸ್ಕೃತ-ಕನ್ನಡ ಭಾಷಾ ಪಂಡಿತರಾದ ವಿದ್ವಾನ್ ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ ವತಿಯಿಂದ 2020, 2021, 2022 ಹಾಗೂ 2023ನೇ ಸಾಲಿನ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರಕಟಿಸಲಾಗಿದೆ.
ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಜಾನಪದ ತಜ್ಞ, ಸಂಶೋಧಕ ಡಾ| ಹಿ.ಚಿ. ಬೋರಲಿಂಗಯ್ಯ (2020), ಬೆಂಗಳೂರು ವಿ.ವಿ. ವಿಶ್ರಾಂತ ಪ್ರಾಧ್ಯಾಪಕ, ವಿಮರ್ಶಕ ಡಾ| ಬಸವರಾಜ ಕಲ್ಗುಡಿ, (2021), ಹಿರಿಯ ಸಂಶೋಧಕ, ನಿವೃತ್ತ ಪ್ರಾಂಶುಪಾಲ ಡಾ| ಪಾದೇಕಲ್ಲು ವಿಷ್ಣು ಭಟ್ಟ (2022) ಹಾಗೂ ಹಿರಿಯ ಸಂಶೋಧಕ ಹಾಗೂ ನಿವೃತ್ತ ಪ್ರಾಂಶುಪಾಲ ಡಾ| ಬಿ. ಜನಾರ್ದನ ಭಟ್ (2023) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ರೂ. ನಗದು, ಫಲಕ ಸಂಪುಟವನ್ನು ಒಳಗೊಂಡಿದೆ.
ಮಂಗಳೂರು ವಿ.ವಿ.ಯ ಪ್ರೊ| ಎಸ್.ವಿ. ಪರಮೇಶ್ವರ ಭಟ್ಟ ಕನ್ನಡ ಅಧ್ಯಯನ ಕೇಂದ್ರದಲ್ಲಿ ಜ. 24ರಂದು ಬೆಳಗ್ಗೆ 10.30 ಪ್ರಶಸ್ತಿ ಪ್ರದಾನ ನಡೆಯಲಿದೆ.
ಕಸಾಪ ಮಾಜಿ ಅಧ್ಯಕ್ಷ ಡಾ| ಹರಿಕೃಷ್ಣ ಪುನರೂರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿ.ವಿ. ಕುಲಪತಿ ಡಾ| ಜಯರಾಜ್‌ಅಮೀನ್ ಅಧ್ಯಕ್ಷತೆ ವಹಿಸಲಿದ್ದು, ಕರ್ಣಾಟಕ ಬ್ಯಾಂಕ್ ಮಾಜಿ ಎಂಡಿ ಡಾ| ಮಹಾಬಲೇಶ್ವರ ಎಂ.ಎಸ್. ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ| ಅಜಕ್ಕಳ ಗಿರೀಶ್ ಭಟ್ ಅಭಿನಂದನ ಭಾಷಣ ಮಾಡುವರು ಎಂದು ಪ್ರತಿಷ್ಠಾನದ ಅಧ್ಯಕ್ಷ, ಹಂಪಿ ಕನ್ನಡ ವಿ.ವಿ. ನಿವೃತ್ತ ಪ್ರಾಧ್ಯಾಪಕ ಪ್ರೊ| ಎ.ವಿ. ನಾವಡ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.