ಗರಿಗಳ ರವಿವಾರ ಆಚರಣೆ, ಕ್ರೈಸ್ತರ ಪವಿತ್ರ ಸಪ್ತಾಹ ಆರಂಭ
Team Udayavani, Apr 10, 2017, 3:06 PM IST
ಮಂಗಳೂರು/ಉಡುಪಿ: ಎರಡು ಸಾವಿರ ವರ್ಷಗಳ ಹಿಂದೆ ಯೇಸು ಕ್ರಿಸ್ತರು ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ಸಂಭ್ರಮದಿಂದ ಸ್ವಾಗತಿಸಿದ ಘಟನೆಯನ್ನು ಸ್ಮರಿಸಿ ಕ್ರೈಸ್ತರು ಎ. 9ರಂದು ಗರಿಗಳ ರವಿವಾರ ಆಚರಿಸಿದರು.
ಮಂಗಳೂರಿನಲ್ಲಿ ಬಿಷಪ್ ರೈ| ರೆ| ಡಾ| ಅಲೋಶಿಯಸ್ ಪಾವ್É ಡಿ’ಸೋಜಾ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಮತ್ತು ಉಡುಪಿ ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ತೊಟ್ಟಂ ಸಂತ ಅನ್ನಮ್ಮ ಮಾತೆ ಚರ್ಚ್‌ನಲ್ಲಿ ನಡೆದ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಯಲ್ಲಿ ಪಾಲ್ಗೊಂಡು ಸಂದೇಶ ನೀಡಿದರು.
ಮಂಗಳೂರಿನಲ್ಲಿ ಕೆಥೆಡ್ರಲ್‌ನ ಧರ್ಮಗುರು ಫಾ| ಜೆ.ಬಿ. ಕ್ರಾಸ್ತಾ, ತೊಟ್ಟಂನಲ್ಲಿ ಧರ್ಮಗುರು ಫಾ| ಫ್ರಾನ್ಸಿಸ್ ಕರ್ನೆಲಿಯೊ, ಇತರ ಗುರುಗಳು ಉಪಸ್ಥಿತರಿದ್ದರು. ಎಲ್ಲ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ಆಚರಣೆ ಹೀಗೆ ನಡೆಯಿತು
ಬಲಿ ಪೂಜೆಗೆ ಮೊದಲು ತೆಂಗಿನ ಗರಿಗಳನ್ನು ಚರ್ಚ್ ಆವರಣದಲ್ಲಿ ಧರ್ಮಗುರುಗಳು ಆಶೀರ್ವಚಿಸಿದರು. ಬಳಿಕ ಅವುಗಳನ್ನು ಭಾಗವಹಿಸಿದ್ದ ಎಲ್ಲ ಕ್ರೈಸ್ತರಿಗೆ ವಿತರಿಸಲಾಯಿತು. ಅವುಗಳನ್ನು ಹಿಡಿದು ಕ್ರೈಸ್ತರು ಯೇಸು ಕ್ರಿಸ್ತರಿಗೆ ಜೈಕಾರ ಹಾಕುತ್ತಾ ಮೆರವಣಿಗೆಯಲ್ಲಿ ಚರ್ಚ್ ಒಳಗೆ ಪ್ರವೇಶಿಸಿದರು. ಅಲ್ಲಿ ಬಲಿ ಪೂಜೆ ನಡೆಯಿತು.
ಯೇಸು ಕ್ರಿಸ್ತರಿಗೆ ಶಿಲುಬೆಯ ಶಿಕ್ಷೆ ವಿಧಿಸುವಲ್ಲಿಂದ ಹಿಡಿದು ಅವರು ಶಿಲುಬೆಗೇರಿ ಮರಣ ಹೊಂದಿ, ದೇಹವನ್ನು ಸಮಾಧಿ ಮಾಡುವ ವರೆಗಿನ ಕಥಾನಕವನ್ನು ಬೈಬಲ್‌ನಿಂದ ವಾಚಿಸಲಾಯಿತು. ಧರ್ಮಗುರು ಪ್ರವಚನ ನೀಡಿದರು.
ಹಿನ್ನೆಲೆ: ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು “ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರಮಾಡಿಕೊಂಡಿದ್ದರು ಎಂಬ ಉಲ್ಲೇಖ ಬೈಬಲ್‌ನಲ್ಲಿದೆ. ಈ ಹಿನ್ನೆಲೆಯಲ್ಲಿ ಗರಿಗಳ ರವಿವಾರ ಆಚರಿಸಲಾಗುತ್ತದೆ. ಪ್ರಸ್ತುತ ಇಲ್ಲಿ ಒಲಿವ್ ಮರದ ಗರಿಗಳ ಬದಲು ತೆಂಗಿನ ಗರಿಗಳನ್ನು ಸಾಂಕೇತಿಕವಾಗಿ ಹಿಡಿದು ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಗರಿಗಳ ರವಿವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ.
ಕಾಸರಗೋಡು: ಮಂಗಳೂರು ಧರ್ಮಪ್ರಾಂತಕ್ಕೆ ಒಳಪಟ್ಟ ಕಾಸರಗೋಡು ವಲಯದ ಎಲ್ಲ ಚರ್ಚ್ ಹಾಗೂ ಜಿಲ್ಲೆಯ ಇತರ ಚರ್ಚ್‌ಗಳಲ್ಲಿ ಗರಿಗಳ ರವಿವಾರ ವಿಶೇಷ ಪ್ರಾರ್ಥನೆ, ಬಲಿಪೂಜೆಯೊಂದಿಗೆ ನಡೆಯಿತು. ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ಬಲಿ ಪೂಜೆಯಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.