ಮಂಗಳೂರಿನ ಸಿಟಿ ಬಸ್‌ಗಳಿಗೆ ಬೇಕಿದೆ ಸಿಸಿ ಕೆಮರಾ ಕಣ್ಗಾವಲು

ಪ್ರಯಾಣ ಸ್ನೇಹಿ ಉದ್ದೇಶಕ್ಕಾಗಿ ಸಾರ್ವಜನಿಕರಿಂದ ಒತ್ತಾಯ

Team Udayavani, Jan 20, 2021, 7:45 AM IST

ಮಂಗಳೂರಿನ ಸಿಟಿ ಬಸ್‌ಗಳಿಗೆ ಬೇಕಿದೆ ಸಿಸಿ ಕೆಮರಾ ಕಣ್ಗಾವಲು

ಮಹಾನಗರ: ಮಂಗಳೂರು ನಗರದಲ್ಲಿ ಸಂಚರಿಸುವ ಸಿಟಿ ಬಸ್‌ಗಳನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿ ಮಾಡುವ ಉದ್ದೇಶದಿಂದ ಬಸ್‌ಗಳ ಒಳಗೆ ಸಿಸಿ ಕೆಮರಾ ಅಳವಡಿಸಬೇಕು ಎಂಬ ಒತ್ತಾಯ ಪ್ರಯಾಣಿಕರಿಂದ ಕೇಳಿ ಬರುತ್ತಿದೆ. ಇದಕ್ಕೆ ಸ್ಪಂದಿಸಿರುವ ಪೊಲೀಸ್‌ ಇಲಾಖೆ ಸದ್ಯದಲ್ಲೇ ಬಸ್‌ ಮಾಲಕರ ಸಭೆ ಕರೆದು ಈ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರಲು ನಿರ್ಧರಿಸಿದೆ.

ಬೆಂಗಳೂರಿನಲ್ಲಿನ ಹೆಚ್ಚಿನ ಬಿಎಂಟಿಸಿ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮ ರಾವನ್ನು ಹಂತ ಹಂತವಾಗಿ ಅಳವಡಿಸಲಾಗಿದೆ. ಇದರಿಂದ ಅಪಘಾತ ಪ್ರಮಾಣ, ಚಾಲಕ-ನಿರ್ವಾಹಕನ ನಿರ್ಲಕ್ಷ್ಯ ಕಡಿಮೆಯಾಗಿದೆ. ಜತೆಗೆ ಪ್ರಯಾಣಿಕರ ಜತೆ ನಿರ್ವಾಹಕರ ನಡವಳಿಕೆ ಕೂಡ ಸುಧಾರಿಸಿದೆ ಎನ್ನುತ್ತದೆ ನಿಗಮ. ಈ ನಿಟ್ಟಿನಲ್ಲಿ ನಗರದಲ್ಲಿ ಸಂಚರಿಸುವ ಸಿಟಿ ಬಸ್‌ಗಳಿಗೂ ಹಂತ ಹಂತವಾಗಿ ಸಿಸಿ ಕೆಮ ರಾ ಅಳವಡಿಸಬೇಕು ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಕೆಲ ದಿನಗಳ ಹಿಂದೆ ದೇರಳಕಟ್ಟೆಯಿಂದ ಪಂಪ್‌ವೆಲ್‌ ಕಡೆಬರುತ್ತಿರುವ ಖಾಸಗಿ ಬಸ್‌ನಲ್ಲಿ ಸಹ ಪ್ರಯಾಣಿಕನೋರ್ವ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ತೊಂದರೆಗೊಳಗಾದ ಯುವತಿ ಸಾಮಾಜಿಕ ಜಾಲತಾಣದಲ್ಲಿ ದೂರಿ ಕೊಂಡಿದ್ದು ಇದು ವೈರಲ್‌ ಆಗಿತ್ತು. ಅದೇ ರೀತಿ ಬಸ್‌ ಟ್ರಿಪ್‌ ಸಮಯದ ವಿಚಾರವಾಗಿಯೂ ಖಾಸಗಿ ಬಸ್‌ ಚಾಲಕರ ನಡುವೆ ಮಾತಿನ ಚಕಮಕಿಗೆ ಕಾರಣವಾಗ ವೀಡಿಯೋ ಕೂಡ ವೈರಲ್‌ ಆಗಿತ್ತು. ಈ ರೀತಿಯ ಸನ್ನಿವೇಶಗಳನ್ನು ತಡೆಯುವ ನಿಟ್ಟಿನಲ್ಲಿಯೂ ಸಿಸಿ ಕೆಮ ರಾ ಸಹಕಾರಿಯಾಗಲಿದೆ.

ನಗರದಲ್ಲಿನ ಸಿಟಿ ಬಸ್‌ಗಳಲ್ಲಿ ಹಣ ಕೊಟ್ಟರೂ, ಟಿಕೆಟ್‌ ನೀಡುತ್ತಿಲ್ಲ ಎಂಬ ದೂರು ಹಲವು ವರ್ಷಗಳಿಂದ ಕೇಳಿ ಬರುತ್ತಿದೆ. ಪೊಲೀಸ್‌ ಫೋನ್‌ ಇನ್‌ ಕಾರ್ಯ ಕ್ರಮಗಳಲ್ಲಿಯೂ ಹತ್ತಾರು ಕರೆಗಳು ಬಂದಿದ್ದವು. ಈ ಬಗ್ಗೆ “ಸುದಿನ’ ಕೂಡ ಅನೇಕ ಬಾರಿ ವಿಸ್ತೃತ ವಿಶೇಷ ವರದಿ ಪ್ರಕಟಿಸಿತ್ತು. ಟ್ರಾಫಿಕ್‌ ಪೊಲೀಸರು ಮತ್ತು ಸಾರಿಗೆ ಇಲಾಖೆ ಕೆಲವು ಕಡೆಗಳಲ್ಲಿ ಕಾರ್ಯಚರಣೆ ನಡೆಸಿ ದಂಡ ವಿಧಿಸಿತ್ತು. ಇನ್ನು, ಸಾಮಾನ್ಯವಾಗಿ ಶಾಲಾ-ಕಾಲೇಜು ವಿದ್ಯಾ ರ್ಥಿಗಳು ಬಸ್‌ನ ಫುಟ್‌ಬೋರ್ಡ್‌ನಲ್ಲಿ ನೇತಾಡುವ ಪ್ರಮೇಯ ಕೂಡ ನಗರದಲ್ಲಿ ಇರುತ್ತದೆ ಹೀಗೆಲ್ಲಾ ಇರುವಾಗ ಬಸ್‌ಗಳಲ್ಲಿ ಸಿಸಿ ಕೆಮ ರಾ ಅಳವಡಿಸಿದರೆ ಇದನ್ನು ಕೊಂಚ ಮಟ್ಟಿಗಾದರೂ ತಡೆಯಲು ಸಾಧ್ಯವಾದೀತು.

ಖಾಸಗಿ ಬಸ್‌ಗಳ ಸಿಬಂದಿ ತಪ್ಪು ಮಾಡಿದರೆ ಬಸ್‌ಗಳ ಮಾಲಕರು ಕೂಡ ಜವಾಬ್ದಾರರು. ಕೂಡಲೇ ಬಸ್‌ ಮಾಲಕರ ಸಭೆ ಕರೆದು ಮಹಿಳೆಯರು ಸಹಿತ ಸಾರ್ವಜನಿಕರ ಸುರಕ್ಷತೆಗಾಗಿ ಸರಕಾರ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗುವುದು. ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಸುವ ಬಗ್ಗೆಯೂ ಸೂಚಿಸಲಾಗುವುದು. –ಎನ್‌. ಶಶಿಕುಮಾರ್‌,  ಮಂಗಳೂರು ಪೊಲೀಸ್‌ ಆಯುಕ್ತ

 

ನಗರದ ಕೆಲವು  ಖಾಸಗಿ ಬಸ್‌ಗಳಲ್ಲಿ ಮಾಲಕರು ಸ್ವಂತ ಆಸಕ್ತಿಯಲ್ಲಿ ತಮ್ಮ ಬಸ್‌ಗಳಲ್ಲಿ ಸಿಸಿ ಕೆಮ ರಾ ಅಳವಡಿಸಿದ್ದಾರೆ. ಇದೀಗ ಪೊಲೀಸ್‌ ಇಲಾಖೆ ಕೂಡ ಈ ಬಗ್ಗೆ ಆಸಕ್ತಿ ವಹಿಸಿದ್ದು, ನಮ್ಮ ಬಸ್‌ ಮಾಲಕರ ಅಭಿಪ್ರಾಯ ತೆಗೆದು ಕೊಂಡು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ದಿಲ್‌ರಾಜ್‌ ಆಳ್ವ,   ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.