“ಸಿಟಿ ಗ್ಯಾಸ್‌’: ಮಂಗಳೂರಿನಲ್ಲಿ ಡಿವಿಎಸ್‌ ಚಾಲನೆ


Team Udayavani, Nov 23, 2018, 9:49 AM IST

city.jpg

ಮಂಗಳೂರು: ಗೇಲ್‌ ಗ್ಯಾಸ್‌ ಸಂಸ್ಥೆಯಿಂದ ಮಂಗಳೂರು ಸಹಿತ ದೇಶದ 129 ನಗರ ಕೇಂದ್ರಗಳ ಬಹು ನಿರೀಕ್ಷಿತ “ಸಿಟಿ ಗ್ಯಾಸ್‌’ ಪೈಪ್‌ ಅನಿಲ ಪೂರೈಕೆ ಯೋಜನೆಗೆ ಗುರುವಾರ ದಿಲ್ಲಿಯಲ್ಲಿ ಪ್ರಧಾನಿ ಮೋದಿ- ಅದೇ ಕಾಲಕ್ಕೆ (ಸಂಜೆ 4.18ಕ್ಕೆ) ಮಂಗಳೂರಿನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಶಿಲಾನ್ಯಾಸಗೈದು,  ನಾಮಫಲಕ ಅನಾವರಣಗೊಳಿಸಿದರು.

ಮುಂದುವರಿದ ದೇಶಗಳಲ್ಲಿರುವಂತೆ ಅತ್ಯಾಧುನಿಕ ಅನಿಲ ಸಂಪರ್ಕ ಸೌಲಭ್ಯ ಈ ಮೂಲಕ ಕರಾವಳಿಯ ಈ ಪ್ರದೇಶದ ಜನತೆಗೆ  ದೊರೆಯು ವಂತಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸಂತಸ ವ್ಯಕ್ತಪಡಿಸಿದರು. ಪ್ರಧಾನಿಯವರ ಈ ಮಹತ್ವಾಕಾಂಕ್ಷಿ ಯೋಜನೆ ಆಧುನಿಕ ಭಾರತದ ನಿರ್ಮಾಣಕ್ಕೆ ವರದಾನವಾಗಲಿದೆ. ಮುಂದಿನ 8 ವರ್ಷಗಳಲ್ಲಿ ಜಿಲ್ಲೆಯ 4,861 ಚ.ಕಿ.ಮೀ. ವ್ಯಾಪ್ತಿಯಲ್ಲಿ ಈ ಪೈಪ್‌ಲೈನ್‌ ಸೌಲಭ್ಯವಿರುತ್ತದೆ. ಕೊಚ್ಚಿಯಿಂದ ಗ್ಯಾಸ್‌ ಪೈಪ್‌ಲೈನ್‌ ಅಂತಿಮ ಹಂತದಲ್ಲಿದೆ ಎಂದರು.

ಗೇಲ್‌ಗಾÂಸ್‌ ಮೂಲಕ ಮುಂದಿನ 25 ವರ್ಷಗಳಲ್ಲಿ ಇಲ್ಲಿ 1,972 ಕೋಟಿ ರೂ. ಹೂಡಿಕೆಯಾಗಲಿದೆ. ಪೈಪ್ಡ್ ನೈಸರ್ಗಿಕ ಅನಿಲದ ಸೌಲಭ್ಯವು ವಾಹನ, ಮನೆ, ಕೈಗಾರಿಕೆ, ವಾಣಿಜ್ಯ ಕ್ಷೇತ್ರಗಳಿಗೆ ದೊರೆಯಲಿದೆ ಎಂದು ತಿಳಿಸಿದರು.
ವಿಶೇಷ ಅತಿಥಿಯಾಗಿದ್ದ ಸಂಸದ ನಳಿನ್‌ ಕುಮಾರ್‌ ಕಟೀಲು, ಮಂಗಳೂರು ಕೇಂದ್ರವಾಗಿ ಜಿಲ್ಲೆಯ ಈ ಯೋಜನೆ ಬಗ್ಗೆ ವಿಶೇಷ ಆಸಕ್ತಿ ತಾಳಿರುವ ಪ್ರಧಾನಿ ಮೋದಿಗೆ ಕೃತಜ್ಞತೆ ವ್ಯಕ್ತಪಡಿಸಿದರು. 

ಭೂಗತ ಚರಂಡಿ ನವೀಕರಣ, ಸ್ಮಾರ್ಟ್‌ಸಿಟಿಯ ಮೂಲಕ ಸಮಗ್ರ ಆಧುನೀಕರಣ, ಅತ್ಯಾಧುನಿಕ ತಂತ್ರಜ್ಞಾನ ಇತ್ಯಾದಿಗಳ ಮೂಲಕ ಮಂಗಳೂರು ಮಹಾನಗರವು ದೇಶಕ್ಕೆ ಮಾದರಿಯಾಗಿದೆ ಎಂದರು. ಶಾಸಕ ವೇದವ್ಯಾಸ ಕಾಮತ್‌, ಮೇಯರ್‌ ಭಾಸ್ಕರ್‌ ಕೆ., ಅಪರ ಜಿಲ್ಲಾಧಿಕಾರಿ ಕುಮಾರ್‌ ಮುಖ್ಯ ಅತಿಥಿಗಳಾಗಿದ್ದರು. ಗೇಲ್‌ನ ಕಾರ್ಯ ನಿರ್ವಾಹಕ ನಿರ್ದೇಶಕ ಮುರುಗೇಶನ್‌ ಅತಿಥಿಗಳನ್ನು ಸಮ್ಮಾನಿಸಿದರು. ಹಿರಿಯ ಮಹಾ ಪ್ರಬಂಧಕ ವಿವೇಕ್‌ ವಾಥೋಡ್ಕರ್‌ ಸ್ವಾಗತಿಸಿದರು. 

ಅತೀ ಸುರಕ್ಷಿತ
ಅತೀ ಸುರಕ್ಷಿತ ಮತ್ತು ಮಿತವ್ಯಯಕಾರಿ ಎಂಬ ವಿಶೇಷಣಗಳ ಪಿಎನ್‌ಜಿ ಮತ್ತು ಸಿಎನ್‌ಜಿಗಳು ಮನೆಗಳು ಮತ್ತು ಉದ್ಯಮ, ವಾಹನಗಳಿಗೆ ವರದಾಯಕ ಎಂದು ಗೇಲ್‌ ಗ್ಯಾಸ್‌ ಅಧಿಕಾರಿಗಳು ತಿಳಿಸಿದ್ದಾರೆ.  

ನೇರಪ್ರಸಾರ ವ್ಯವಸ್ಥೆ
ಮಂಗಳೂರು ಸಹಿತ ದೇಶದ 129 ಕೇಂದ್ರಗಳಲ್ಲಿ ಸಿಟಿಗ್ಯಾಸ್‌ ಪೂರೈಕೆ ಯೋಜನೆಗೆ ಪ್ರಧಾನಿ ಮೋದಿ ಅವರು ದಿಲ್ಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್‌, ಡಾ| ಹರ್ಷವರ್ಧನ್‌ ಅವರ ಉಪಸ್ಥಿತಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಂಗಳೂರು ಪುರಭವನದಲ್ಲಿ ಸಚಿವ ಡಿ.ವಿ. ಸದಾನಂದ ಗೌಡ ಅವರು ನಳಿನ್‌ ಕುಮಾರ್‌ ಕಟೀಲು, ವೇದವ್ಯಾಸ ಕಾಮತ್‌, ಭಾಸ್ಕರ ಮೊಲಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ಪ್ರಧಾನಿ ಶಂಕುಸ್ಥಾಪನೆ- ಭಾಷಣದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. 

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.