ಸಾಮರಸ್ಯ ಜೀವನಕ್ಕೆ ಪೂರಕ ಕ್ರಮ ಕೈಗೊಳ್ಳಲು ಆಗ್ರಹ
Team Udayavani, Jul 15, 2017, 2:20 AM IST
ಮಹಾನಗರ: ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಧರ್ಮಪ್ರಾಂತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಂ.ಪಿ.ನೊರೊನ್ಹಾ ನೇತೃತ್ವದಲ್ಲಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪ್ ಕುಮಾರ್ ದತ್ತ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ ಹಾಗೂ ಸೌಹಾರ್ದ ಜೀವನ ನಡೆಸಲು ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿತು.
ರಾಜ್ಯ ಮಟ್ಟದಿಂದ ಜಿಲ್ಲಾ, ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಶಾಂತಿ ಸಮಿತಿ ರಚಿಸಿ, ಇದರಲ್ಲಿ ಸಮುದಾಯದ ಮೇಲೆ ನಿಯಂತ್ರಣ ಇರುವ ಸಮುದಾಯದ ಸದಸ್ಯರನ್ನು ಸೇರಿಸಬೇಕು ಮತ್ತು ಸಮಿತಿಗೆ ಶಾಸನಾತ್ಮಕ ಅಧಿಕಾರ ನೀಡಿ ನಡವಳಿಕೆಗಳನ್ನು ಕಾರ್ಯತಗೊಳಿಸುವಂತಿರಬೇಕು. ಗುಪ್ತಚರ ಇಲಾಖೆ ಚುರುಕುಗೊಳಿಸಿ ಕಾನೂನು ಭಂಗ ಮಾಡುವ ವ್ಯಕ್ತಿಗಳನ್ನು ಗುರುತಿಸಿ ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 106ರಿಂದ 110ರಲ್ಲಿ ನಮೂದಿಸಿದಂತೆ ಮುಚ್ಚಳಿಕೆ ಬರೆದು ತೆಗೆದುಕೊಳ್ಳಬೇಕು. ಪೊಲೀಸ್ ಠಾಣೆಗಳಲ್ಲಿ ಸ್ಥಳೀಯ ಅಧಿಕಾರಿಗಳನ್ನು ನೇಮಿಸಿದಲ್ಲಿ ಸಾಮರಸ್ಯ ಕಾಪಾಡಲು ಸಹಕಾರಿಯಾಗಲಿದೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಸ್ಥಳೀಯರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಯಿತು. ಪ್ರಚೋದನಕಾರಿ ಸಂದೇಶ ನೀಡುವ ಹಾಗೂ ಕಳುಹಿಸುವ ವ್ಯಕ್ತಿಗಳ ಮೇಲೆ ರಾಜಕೀಯ ಪ್ರಭಾವವನ್ನು ಪರಿಗಣಿಸದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಲ್ಲಿ ಮಂಗಳೂರು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಹೊಂದಲು ಪೂರಕವಾಗಲಿದೆ ಎಂದು ಮನವಿ ಮಾಡಿದರು.
ಎಡಿಜಿಪಿ ಅಲೋಕ್ ಮೋಹನ್, ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಧರ್ಮಪ್ರಾಂತ್ಯದ ನಾಗರಿಕ ಮತ್ತು ಪ್ರಗತಿ ಸಮಿತಿ ಸಂಚಾಲಕ ವಂ| ಜೆ.ಬಿ.ಕ್ರಾಸ್ತ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ವಿಲಿಯಂ ಮಿನೇಜಸ್, ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನ ನಿರ್ದೇಶಕ ವಂ|ರಿಚರ್ಡ್ ಕುವೆಲ್ಲೊ, ಕೆಥೋಲಿಕ್ ರಾಷ್ಟ್ರೀಯ ಪರಿಷತ್ತಿನ ಸದಸ್ಯರಾದ ಸುಶೀಲ್ ನೊರೊನ್ಹಾ ಮತ್ತು ಪ್ರೊ| ಎಡ್ವರ್ಡ್ ಡಿ’ಸಿಲ್ವ, ಕೆಥೋಲಿಕ್ ಸಭಾ ಅಧ್ಯಕ್ಷ ಅನಿಲ್ ಲೋಬೋ, ಧರ್ಮಪ್ರಾಂತ್ಯದ ಮಾಧ್ಯಮ ಸಲಹೆಗಾರ ಇ. ಫೆರ್ನಾಂಡಿಸ್, ಕಾರ್ಯಕಾರಿ ಸಮಿತಿ ಸದಸ್ಯರಾದ ಹಿಲ್ಡಾ ಆಳ್ವ ಮತ್ತು ಎಲಿಜಬೆತ್ ರೋಚ್ ಹಾಗೂ ಶಾಲೆಟ್ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.