ನಗರದ ಬೀದಿದೀಪಗಳ ದುರಸ್ತಿ !
Team Udayavani, Jul 10, 2018, 10:05 AM IST
ಮಹಾನಗರ: ನಗರ ವ್ಯಾಪ್ತಿಯ ಹಲವು ಭಾಗದಲ್ಲಿ ಬೀದಿ ದೀಪ ಉರಿಯದೆ ಸಮಸ್ಯೆ ಆಗುತ್ತಿರುವುದನ್ನು ಕೊನೆಗೂ ಗಮನಿಸಿದ ಮಹಾನಗರ ಪಾಲಿಕೆ ಈಗ ರಿಪೇರಿಗೆ ಮುಂದಾಗಿದೆ. ಜೂ. 9ರಂದು ಉದಯವಾಣಿ ಸುದಿನದಲ್ಲಿ ಪ್ರಕಟವಾದ ವರದಿಯಿಂದ ಎಚ್ಚೆತ್ತ ಪಾಲಿಕೆ ಬೀದಿ ದೀಪಗಳನ್ನು ಸರಿಪಡಿಸಲು ಆರಂಭಿಸಿದೆ. ನಗರದ ಎಂ.ಜಿ.ರಸ್ತೆ ವ್ಯಾಪ್ತಿಯಲ್ಲಿ ಹಾಳಾಗಿರುವ ಬೀದಿದೀಪಗಳನ್ನು ಸೋಮವಾರ ಬೆಳಗ್ಗೆಯೇ ಪಾಲಿಕೆ ತಂಡ ಸರಿಪಡಿಸಿದೆ. ಬೃಹತ್ ವಾಹನದ ಮೂಲಕ ಹಳೆಯ ದೀಪ ತೆರವುಗೊಳಿಸಿ ಹೊಸ ದೀಪಗಳನ್ನು ಅಳವಡಿಸಲಾಯಿತು.
ಮಳೆ ಬರುವುದಕ್ಕೂ ಮುಂಚಿತವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ವಿದ್ಯುತ್ ನಿರ್ವಹಣೆ ಕಾಮಗಾರಿ ನಡೆಸಬೇಕಿತ್ತು. ಆದರೆ ಇದು ಸಮರ್ಪಕವಾಗಿ ನಡೆಯಲಿಲ್ಲ. ಈ ಕಾರಣಕ್ಕೆ ಮೇ ತಿಂಗಳ ಕೊನೆಯ ವಾರದಲ್ಲಿ ಬಂದಂತಹ ಭಾರೀ ಮಳೆಗೆ ಇಲ್ಲಿನ ಸುಮಾರು 250 ಮೀಟರ್ ನಷ್ಟು ವಿದ್ಯುತ್ ಕೇಬಲ್‌ಗಳಿಗೆ ಹಾನಿಯಾಗಿದೆ. ಇದರಿಂದಾಗಿ ಹೆಚ್ಚಿನ ಬೀದಿ ದೀಪಗಳು ಉರಿಯುವುದಿಲ್ಲ ಎಂಬುದು ಪಾಲಿಕೆ ಮೂಲಗಳ ಅಭಿಪ್ರಾಯ.
ಮಳೆ, ಗಾಳಿ ಬಂದರೆ ಸಾಕು. ನಗರದ ಎಲ್ಲ ಭಾಗಗಳಲ್ಲಿ ಬೀದಿ ದೀಪಗಳು ಕೆಟ್ಟು ಹೋಗುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿಯೂ ಜನರು ಪಾಲಿಕೆಯನ್ನು ಪ್ರಶ್ನಿಸಿದ್ದರು. ಕೊನೆಗೂ ಎಚ್ಚೆತ್ತುಕೊಂಡ ಪಾಲಿಕೆ ಬೀದಿದೀಪಗಳ ಸಮರ್ಪಕ ನಿರ್ವಹಣೆಗೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.