ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಅವರಿಗೆ ಪೌರ ಸಮ್ಮಾನ
Team Udayavani, Dec 31, 2017, 10:14 AM IST
ಮಂಗಳೂರು: ಉಡುಪಿ ಶ್ರೀಕೃಷ್ಣ ಮಠದ ಭಾವೀ ಪರ್ಯಾಯ ಪೀಠಾಧಿಪತಿ, ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಅವರಿಗೆ ಶನಿವಾರ ನಗರದ ಪುರಭವನದಲ್ಲಿ ಮಂಗಳೂರು ಜನತೆಯ ಪರವಾಗಿ ಪೌರ ಸಮ್ಮಾನ ಮತ್ತು ಅಭಿನಂದನ ಸಭೆ ನಡೆಯಿತು. ಸಮ್ಮಾನ ಸ್ವೀಕರಿಸಿದ ಬಳಿಕ ಶ್ರೀಗಳು ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಸಚಿವ ಬಿ. ರಮಾನಾಥ ರೈ ಮಾತನಾಡಿ, ಪರಧರ್ಮ ಸಹಿಷ್ಣುತೆ ಹಿಂದೂ ಧರ್ಮದ ಸಾರವಾಗಿದ್ದು, ಮನುಷ್ಯ ಮನುಷ್ಯರ ನಡುವೆ ನಮ್ಮ ವರು ಎಂಬ ಭಾವನೆ ಬಂದಾಗ ಜಗತ್ತನ್ನು ಗೆಲ್ಲಲು ಸಾಧ್ಯ. ಸನಾತನ ಹಿಂದೂ ಧರ್ಮದ ಘೋಷಣೆ ಯಾದ ವಸುಧೈವ ಕುಟುಂಬಕಂ ಎಂಬ ಮಾತು ಕೇವಲ ಘೋಷಣೆಗೆ ಸೀಮಿತವಾಗಬಾರದು ಎಂದರು.
ಹಣ ಗಳಿಸಲು ರಾಜಕೀಯಕ್ಕೆ ಬಂದಿಲ್ಲ ತಾನು ಪ್ರಾಮಾಣಿಕ ವ್ಯಕ್ತಿಯಾಗಿದ್ದು, ದುಡ್ಡು ಗಳಿಸಬೇಕೆಂಬ ಆಕಾಂಕ್ಷೆಯೂ ಇಲ್ಲ. ನನಗೆ ಯಾವುದೇ ವ್ಯಾಪಾರವಿಲ್ಲ. ಹಣ ಮಾಡುವುದಕ್ಕೆ ರಾಜಕೀಯಕ್ಕೆ ಬಂದಿಲ್ಲ. ತಾನು ಸಮಾಜಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದರು.
ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್ ಮಾತನಾಡಿ, ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಈ ಶತಮಾನ ಕಂಡ ಅಪ ರೂಪದ ವ್ಯಕ್ತಿ. ಅವರದ್ದು ನಿರಂತರ ಅಧ್ಯಯನ. ಸನ್ಯಾಸ ಎನ್ನುವುದು ಸುಖದ ಸುಪತ್ತಿಗೆಯಲ್ಲ. ನಮಗೆ ವಿಶ್ರಾಂತಿ ಇದೆ. ಆದರೆ ಸನ್ಯಾಸ ದೀಕ್ಷೆ ತೊಟ್ಟವರು ನಿರಂತರ ವ್ರತ, ನಿಯಮ ಪಾಲನೆ ಮಾಡಬೇಕಿದೆ ಎಂದರು.
ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಸ್. ಗಣೇಶ್ ರಾವ್ ಮಾತನಾಡಿ, ಉಡುಪಿ ಪರ್ಯಾಯವು ಪ್ರಪಂಚದ ಶ್ರೇಷ್ಠ ಪ್ರಜಾಪ್ರಭುತ್ವಕ್ಕೆ ಉದಾಹರಣೆ. ಸ್ವಾಮೀಜಿಗಳ ಮೂಲಕ ಕಲಿಯುಗದಲ್ಲಿ ದೇವರನ್ನು ಕಾಣುತ್ತೇವೆ. ಅವರನ್ನು ಕಂಡಾಗ ವಿನೀತ ಭಾವ ಮೂಡುತ್ತದೆ ಎಂದರು.
ಸಚಿವ ರಮಾನಾಥ ರೈ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್., ಎ.ಜೆ. ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ ಅಧ್ಯಕ್ಷ ಡಾ| ಎ.ಜೆ. ಶೆಟ್ಟಿ, ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಶಾರದಾ ಸಮೂಹ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಕೆ.ಎಸ್. ಕಲ್ಲೂರಾಯ, ಸುಧಾಕರ ರಾವ್ ಪೇಜಾವರ, ಕೃಷ್ಣಮೂರ್ತಿ, ದಿಯಾ ಸಿಸ್ಟಮ್‌ನ ರವಿಚಂದ್ರನ್ ಉಪಸ್ಥಿತರಿದ್ದರು
ಮೇಯರ್ ಎಲ್ಲಿ ?
ಸಚಿವ ರಮಾನಾಥ ರೈ ಅವರು ಭಾಷಣ ಪ್ರಾರಂಭಿಸುತ್ತಿದ್ದಂತೆ, ಮೇಯರ್ ಕವಿತಾ ಸನಿಲ್ ಅವರನ್ನು ಏಕೆ ಕರೆದಿಲ್ಲ ಎಂದು ಪ್ರಶ್ನಿಸಿದರು. ತನ್ನನ್ನು ಸಮಾರಂಭಕ್ಕೆ ಕರೆದಿಲ್ಲ ಎಂದು ಮೇಯರ್ ಕರೆ ಮಾಡಿದ್ದಾರೆ. ಪೌರ ಸಮ್ಮಾನದಲ್ಲಿ ಮೇಯರ್ ಇರಬೇಕಿತ್ತು. ಈ ಹಿಂದೆ ಪೇಜಾವರ ಶ್ರೀಗಳಿಗೆ ನಡೆದ ಪೌರ ಸಮ್ಮಾನ
ನಡೆದ ವೇಳೆ ಅಂದಿನ ಮೇಯರ್ ಉಪಸ್ಥಿತರಿದ್ದರು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯಕ್ರಮ ಆಯೋಜಕರು, 3 ಬಾರಿ ಮೇಯರ್ ಅವರನ್ನು ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದು, ತಾನು ಆಗಮಿಸುತ್ತೇನೆ ಎಂದು ಹೇಳಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Train; ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ?
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.