Ullal ವಿಜಯೋತ್ಸವ ಸಂದರ್ಭ ಚಕಮಕಿ: ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಇರಿತ
Team Udayavani, Jun 10, 2024, 7:10 AM IST
ಉಳ್ಳಾಲ: ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಬೋಳಿಯಾರು ಸಮೀಪ ರವಿವಾರ ರಾತ್ರಿ ನಡೆದಿದೆ.
ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನೋಳಿ ಧರ್ಮನಗರದ ಹರೀಶ್ ಹಾಗೂ ನಂದನ್ ಕುಮಾರ್ ಗಾಯ ಗೊಂಡವರು.
ಘಟನೆಯ ವಿವರ
ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಮತ್ತು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ವಿಜಯೋತ್ಸವದ ಅಂಗವಾಗಿ ಬೋಳಿಯಾರು ಬಿಜೆಪಿ ಗ್ರಾಮಸಮಿತಿ ವತಿಯಿಂದ ಚೇಳೂರು, ಬೋಳಿಯಾರು ಮಾರ್ಗವಾಗಿ ಧರ್ಮನಗರದ ವರೆಗೆ ವಿಜಯೋತ್ಸವ ಮೆರವಣಿಗೆ ಆಯೋಜಿಸಲಾಗಿತ್ತು.
ರ್‍ಯಾಲಿ ಮುಗಿಸಿ ಮನೆಗೆ ತೆರಳಿದ್ದ ಹರೀಶ ಮತ್ತು ನಂದನ್ ಅಂಗಡಿಯಿಂದ ಯಾವುದೋ ಸಾಮಗ್ರಿ ಖರೀದಿಸಿ ತರಲೆಂದು ಬೋಳಿಯಾರು ಕ್ರಾಸ್‌ನತ್ತ ಮರಳಿ ಬಂದಿದ್ದರು. ಮನೆಗೆ ಮರಳು ವಾಗ ಅವರು ಕೇಸರಿ ಶಾಲು ಧರಿಸಿದ್ದನ್ನು ನೋಡಿದ ತಂಡವೊಂದು ತಡೆದು ಬೆದರಿಸಿದ್ದಲ್ಲದೆ ಬೈಕಿನ ಮುಂದೆ ಹರೀಶ್ ಅವರ ಹೊಟ್ಟೆಗೆ ಮತ್ತು ನಂದನ್ ಅವರ ಬೆನ್ನಿಗೆ ಚೂರಿಯಿಂದ ಇರಿಯಿತು. ಬಳಿಕ ಕೃತ್ಯ ಎಸಗಿದ ತಂಡ ಪರಾರಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಸಿದೆ.
ಬೋಳಿಯಾರು ನಿವಾಸಿ ಪಿಕಪ್ ಚಾಲಕ ಕೃತ್ಯ ಎಸಗಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿದಿದೆ.
ಕೊಣಾಜೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.