ಸ್ವಚ್ಛತಾ ಆಂದೋಲನ, ಪರಿಸರ ಜಾಗೃತಿ
Team Udayavani, Jan 20, 2018, 12:56 PM IST
ಕೆಂಚನಕೆರೆ: ವಿದ್ಯಾರ್ಥಿಗಳು ಶಾಲಾ ದಿನಗಳಲ್ಲಿ ಸ್ವಚ್ಛತೆ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಕಾಂತ್ ರಾವ್ ಹೇಳಿದರು.
ಅವರು ಜ. 19 ರಂದು ಕಾರ್ನಾಡು ಸಿ.ಎಸ್.ಐ. ಪ್ರೌಢಶಾಲೆ, ಕಿಲ್ಪಾಡಿ ಗ್ರಾಮ ಪಂಚಾಯತ್, ರಾಮಕೃಷ್ಣ ಮಿಷನ್ ಮಂಗಳೂರು ಇದರ ಆಶ್ರಯದಲ್ಲಿ ಸ್ವಚ್ಛತಾ ದಿವಸ್ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೆಂಚನಕೆರೆಯ ಅಂಗರಗುಡ್ಡೆಯ ಬಳಿಯಲ್ಲಿ ಕಸದ ತೊಟ್ಟಿ ನಿರ್ಮಿಸುವ ಬಗ್ಗೆ ಪ್ರಸ್ತಾವ ಇದ್ದು, ಗ್ರಾಮ ಪಂಚಾಯತ್
ವ್ಯಾಪ್ತಿಯಲ್ಲಿ ಕಸ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಬಗ್ಗೆ ಜಾಗದ ವ್ಯವಸ್ಥೆ ದೊರಕದೆ ಹಿನ್ನಡೆಯಾಗಿದೆ ಎಂದರು. ಪಿಡಿಒ ಹರಿಶ್ಚಂದ್ರ, ಕಿನ್ನಿಗೋಳಿ ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ದೇವಾಡಿಗ, ನಿವೃತ್ತ ಬ್ಯಾಂಕ್ ಅಧಿಕಾರಿ ಮಾಧವ್ ರಾವ್, ಗಣೇಶ್ ಶೆಟ್ಟಿ, ಶಿಕ್ಷಕರಾದ ಹರಿಶ್ಚಂದ್ರ ಯು., ಪುಷ್ಪಲತಾ, ಜಯಶ್ರೀ ನಾರಾಯಣ ಕಾಮತ್ ಕೆಂಚನಕೆರೆ ಮತ್ತಿತರರಿದ್ದರು. ಶಾಲಾ ವತಿಯಿಂದ ಅಂಗರಗುಡ್ಡೆ ಹಾಗೂ ಪುನರೂರು ಕುಕ್ಕುದ ಕಟ್ಟೆಯ ಬಳಿಯಲ್ಲಿ ಕಸದ ತೊಟ್ಟಿ ರಚಿಸುವ ಬಗ್ಗೆ ಉಭಯ ಪಂಚಾಯತ್‌ಗಳಿಗೆ ಮನವಿ ನೀಡಲಾಯಿತು. 100ಕ್ಕೂ ಅಧಿಕ ಮಕ್ಕಳು ರಸ್ತೆಯ ಇಕ್ಕಲಗಳಲ್ಲಿ ಬಿದ್ದ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿದರು. ಸುರೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.