ವಾಯುಭಾರ ಕುಸಿತ: ದೋಣಿಗಳು ದಡ ಸೇರಲು ಸೂಚನೆ
Team Udayavani, Dec 14, 2022, 12:15 AM IST
ಮಂಗಳೂರು: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಈ ಹಿನ್ನೆಲೆಯಲ್ಲಿ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.
ಡಿ. 14ರಿಂದ 17ರ ವರೆಗೆ ಕಡಲು ಪ್ರಕ್ಷುಬ್ಧವಾಗಿರಲಿದೆ. ಈ ಅವಧಿಯಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಆದುದರಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯದೇ ಇರುವುದು ಉತ್ತಮ. ಅದರಲ್ಲೂ ಡಿ. 16ರಂದು ಗಾಳಿಯ ವೇಗ ಅತೀ ಹೆಚ್ಚು ಇರುವ ಸಾಧ್ಯತೆ ಇದೆ. ಈ ವೇಳೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ಉದ್ದೇಶದಿಂದ ಯಾವುದೇ ದೋಣಿ ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ತೆರಲಿರುವ ಎಲ್ಲ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮಂಗಳೂರು ಕೋಸ್ಟ್ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.