![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 27, 2023, 12:06 AM IST
ಸುರತ್ಕಲ್: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಪ್ರಮುಖವಾದ ಕೊಟ್ಟಾರ ಚೌಕಿ ಜಂಕ್ಷನ್ ಸರ್ಕಲ್ ಗೆ ಹೆಸರು ಇಡಲಾಗುವುದು ಎಂದು ಶಾಸಕ ಡಾ| ಭರತ್ ಶೆಟ್ಟಿ ವೈ. ಹೇಳಿದ್ದಾರೆ.
ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜತೆಗೆ ಸರ್ಕಲ್‌ಗೆ ಮಂಗಳೂರಿನಲ್ಲಿ ಕಲಿತು, ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ| ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೈನ್ಯ ಸೇರಿ ದೇಶ ಸೇವೆ ಮಾಡುವ ಕ್ಯಾ| ಪ್ರಾಂಜಲ್ ಅವರ ನಿರ್ಧಾರ, ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ. ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿದಾಯಕ್ಕೆ ಜನಸಾಗರ
ಕುಟುಂಬದಿಂದ ಕೃತಜ್ಞತೆ
ಸುರತ್ಕಲ್: ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಕ್ಯಾ|ಪ್ರಾಂಜಲ್ ಅವರು ಹುತಾತ್ಮರಾಗಿದ್ದು, ಅವರ ಭಾವಪೂರ್ಣ ವಿದಾಯದ ವೇಳೆ ಭಾರೀ ಜನಸ್ತೋಮ ಸೇರಿ ಪ್ರೀತಿ ಅಭಿಮಾನ, ಗೌರವ ತೋರಿದ್ದು, ಮನತುಂಬಿ ಬಂದಿದೆ. ಪ್ರಾಂಜಲ್ ಕುಟುಂಬವು ಪ್ರತೀ ಭಾರತೀಯರಿಗೂ ಆಭಾರಿಯಾಗಿದೆ ಪ್ರಾಂಜಲ್ ಅವರ ತಂದೆ ಎಂ. ವೆಂಕಟೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.