ಜಿಲ್ಲಾ ಗೃಹರಕ್ಷಕ ದಳ ತರಬೇತಿ ಶಿಬಿರ ಸಮಾರೋಪ
Team Udayavani, Jan 12, 2018, 10:58 AM IST
ಮಹಾನಗರ: ಶಿಸ್ತು, ಸಂಯಮ ಮತ್ತು ಸೇವೆಯಲ್ಲಿ ಜಿಲ್ಲಾ ಗೃಹರಕ್ಷಕ ದಳ ಹೆಸರುಪಡೆದಿದೆ ಎಂದು ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಹೇಳಿದರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆದ ಜಿಲ್ಲಾ ಗೃಹರಕ್ಷಕ ದಳ ವಾರ್ಷಿಕ ತರಬೇತಿ ಶಿಬಿರದ ಸಮಾರೋಪದಲ್ಲಿ ಮಾತನಾಡಿದ ಅವರು, ನಾಗರಿಕ ಸಮಾಜದ ರಕ್ಷಣೆಗೆ ಪೊಲೀಸ್ ಇಲಾಖೆಯ ಜತೆ ಗೃಹರಕ್ಷಕ ದಳ ಕೂಡ ಕೈಜೋಡಿಸುವ ಅಗತ್ಯವಿದೆ ಎಂದು ಹೇಳಿದರು.
ಸಮಾಜದ ರಕ್ಷಣೆಯಲ್ಲಿ ಪೊಲೀಸ್ ಮತ್ತು ಗೃಹರಕ್ಷಕ ದಳ ಎರಡು ಚಕ್ರವಿದ್ದಂತೆ. ಗೃಹರಕ್ಷಕ ದಳದ ಸಿಬಂದಿ ಯಾವುದೇ ಫಲಾಪೇಕ್ಷೆ ಇಲ್ಲದೆ, ಸರಕಾರದ ಗೌರವ ಧನಕ್ಕೆ ತೃಪ್ತಿಪಟ್ಟು ಕೆಲಸ ನಿರ್ವಹಿಸುತ್ತಾರೆ. ಪ್ರಾಮಾಣಿಕ ಪ್ರಯತ್ನ ಮತ್ತು ಶ್ರಮ ಇದ್ದರೆ ಯಾವ ಕೆಲಸವೂ ಅಸಾಧ್ಯವಲ್ಲ ಎಂದು ಹೇಳಿದರು. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೈ. ಶಿವರಾಮಯ್ಯ, ಉಡುಪಿ ಜಿಲ್ಲೆ ಗೃಹರಕ್ಷಕದಳ ಕಮಾಂಡೆಂಟ್ ಡಾ| ಕೆ. ಪ್ರಶಾಂತ್ ಶೆಟ್ಟಿ, ದ.ಕ. ಜಿಲ್ಲೆ ಗೃಹರಕ್ಷಕ ದಳ ಕಮಾಂಡೆಂಟ್ ಡಾ| ಮುರಲೀ ಮೋಹನ ಚೂಂತಾರು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.