ಟೀಕೆ ಮಾಡಬಹುದು, ಆದರೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಮಂಗಳೂರಿನಲ್ಲಿ ಸಿದ್ದರಾಮಯ್ಯ
Team Udayavani, Aug 1, 2023, 12:30 PM IST
ಮಂಗಳೂರು: ಟೀಕೆ ಮಾಡುಬಹುದು ಎಂದರೆ ಏನೋ ಬೇಕಾದರೂ ಹೇಳಬಹುದು ಎಂದರ್ಥವಲ್ಲ. ಟೀಕೆ ಬೇರೆ, ಸುಳ್ಳು ಸುದ್ದಿ ಹರಡುವುದು ಬೇರೆ, ವೈಯಕ್ತಿಕ ತೇಜೋವಧೆ ಬೇರೆ. ಟೀಕೆ ಮಾಡಿದರೆ ಕ್ರಮ ಕೈಗೊಳ್ಳುವುದಿಲ್ಲ. ಆದರೆ ಸುಳ್ಳು ಸುದ್ದಿ ಹರಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಕ್ಕಾಗಿ ಬಜಪೆ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಉಡುಪಿ ಕಾಲೇಜು ಘಟನೆಯ ಬಗ್ಗೆ ಪ್ರತಿಕ್ರಯಿಸಿದ ಅವರು, ಪೊಲೀಸರು ಸುಮೋಟೋ ಎಫ್ ಐಆರ್ ಮಾಡಿದ್ದಾರೆ, ಡಿವೈಎಸ್ಪಿ ತನಿಖೆ ಆಗುತ್ತಿದೆ. ಅದು ಮೊದಲು ನಡೆಯಲಿ. ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ. ತನಿಖಾ ವರದಿ ಬರಲಿ, ಆಮೇಲೆ ಈ ಬಗ್ಗೆ ಮಾತನಾಡುವ ಎಂದರು.
ಗೃಹ ಸಚಿವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಲೇಜ್ ನಲ್ಲಿ ಇರುವ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದು ಗೃಹ ಸಚಿವರು ಹೇಳಿರಬಹುದು. ಎಫ್ಐಆರ್ ಆಗಿ ತನಿಖೆ ಆಗುತ್ತಿದೆ. ಡಿವೈಎಸ್ಪಿ ಮಟ್ಟದ ತನಿಖೆ ಆಗುತ್ತಿರುವವಾಗ ಎಸ್ ಐಟಿ ಪ್ರಶ್ನೆ ಉದ್ಭವಿಸಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ಬಂದ ಬಳಿಕವೂ ನೈತಿಕ ಪೊಲೀಸ್ ಗಿರಿ ಮುಂದುವರಿಯುತ್ತಿರುವ ಬಗ್ಗೆ ಉತ್ತರಿಸಿದ ಸಿಎಂ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳಲು ಇಲ್ಲಿ ಯಾರಿಗೂ ಅವಕಾಶ ಇಲ್ಲ. ಪೊಲೀಸರಿಗೆ ಇದಕ್ಕೆ ಅವಕಾಶ ಕೊಡಬೇಡಿ ಎಂದಿದ್ದೇನೆ ಎಂದರು.
ಧರ್ಮಸ್ಥಳದ ಸೌಜನ್ಯ ಕೇಸ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕೇಸ್ ಸಿಬಿಐಗೆ ಕೊಟ್ಟಿತ್ತು, ಕೋರ್ಟಲ್ಲಿ ಇತ್ತು. ಅವರ ಪೋಷಕರು ಮರು ತನಿಖೆಗೆ ಮನವಿ ಮಾಡಿದ್ದಾರೆ. ಕಾನೂನು ಪ್ರಕಾರ ಏನಾಗಬೇಕೆಂದು ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ. ನಾನು ಲಾಯರ್ ಆಗಿ ಹೇಳುವುದಾದರೆ ಇದರ ಬಗ್ಗೆ ಹೈಕೋರ್ಟ್ ಗೆ ಮೇಲ್ಮನವಿ ಹಾಕಬೇಕು. ನಾನು ಸಿಬಿಐ ಕೋರ್ಟ್ ಜಡ್ಜ್ ಮೆಂಟ್ ನೋಡಿಲ್ಲ. ಅದರ ಜಡ್ಜ್ ಮೆಂಟ್ ಓದಿ ನೋಡ್ತೇನೆ, ಅಪೀಲ್ ಗೆ ಅವಕಾಶ ಇದೆಯಾ ಎಂದು ನೋಡುತ್ತೇನೆ ಎಂದರು.
ಕಸ್ತೂರಿ ರಂಗನ್ ವರದಿಯ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಅದು ಕೇಂದ್ರ ಸರ್ಕಾರ ನಿರ್ಧಾರ ಮಾಡಬೇಕು. ಆದರೆ ಪರಿಸರ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು. ಸಿದ್ದರಾಮಯ್ಯ ಅವರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಆಗಮಿಸಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.