ವಸತಿ ರಹಿತ ದ್ವೀಪಗಳ ಮೇಲೆ ಕೋಸ್ಟ್‌ಗಾರ್ಡ್ ವಿಶೇಷ ಕಣ್ಗಾವಲು
Team Udayavani, Mar 17, 2020, 1:05 AM IST
ಪಣಂಬೂರು: ಕರಾವಳಿ ಕರ್ನಾಟಕ, ಕೇರಳ, ಲಕ್ಷದ್ವೀಪ ಸಹಿತ ವಿವಿಧೆಡೆಳಲ್ಲಿರುವ ಜನ ವಸತಿ ಮತ್ತು ವಸತಿ ರಹಿತ ದ್ವೀಪಗಳ ಮೇಲೆ ಕೋಸ್ಟ್ ಗಾರ್ಡ್ ಮಾ. 13ರಿಂದ 16ರ ವರೆಗೆ ವಿಶೇಷ ಕಣ್ಗಾವಲು ಕಾರ್ಯಾಚರಣೆ ನಡೆಸಿತು.
ಕೋಸ್ಟ್‌ಗಾರ್ಡ್‌ನ ಡಾರ್ನಿಯರ್ 761 ಬಹೂಪಯೋಗಿ ಕಣ್ಗಾವಲು ವಿಮಾನವನ್ನು ಇದಕ್ಕೆ ಬಳಸಲಾಯಿತು. ದ್ವೀಪಗಳ ಮೇಲೆ ಹಾರಾಟ ನಡೆಸಿದ ವಿಮಾನವು ಬಹು ಮುಖ್ಯವಾದ ಛಾಯಾಚಿತ್ರಗಳನ್ನು ತೆಗೆಯಿತಲ್ಲದೆ, ಅಲ್ಲಿನ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿತು.
ಸಮುದ್ರದಲ್ಲಿ ಆಗಬಹುದಾದ ಜೀವ ಹಾನಿ, ಹುಡುಕಾಟ, ರಕ್ಷಣೆ ಮತ್ತು ಸಮನ್ವಯ ಕಾರ್ಯಾಚರಣೆಯ ಕುರಿತು ಕೋಸ್ಟ್‌ಗಾರ್ಡ್ ನಿಯಮಿತವಾಗಿ ಹಾರಾಟ ನಡೆಸುತ್ತ ಪರಿಶೀಲಿಸುತ್ತಿದೆ.
ಡಾರ್ನಿಯರ್ ವೈಶಿಷ್ಟ್ಯಗಳು
ಎರಡು ಲಘು ಎಂಜಿನ್‌ಗಳ ಡಾರ್ನಿಯರ್ ವಿಮಾನ ಸುಧಾರಿತ ರಾಡಾರ್, ಅತ್ಯಾಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು ಹೊಂದಿದೆ. ಸಮುದ್ರದಲ್ಲಿನ ಏರಿಳಿತ, ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ, ವೈದ್ಯಕೀಯ ನೆರವು ನೀಡಲು ಬೇಕಾದ ಪೂರಕ ವ್ಯವಸ್ಥೆ ಮಾಡಲು ಮತ್ತು ಮಾಹಿತಿ ಸಂಗ್ರಹಕ್ಕೆ ಬಳಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.