ಕರಾವಳಿ: ಇಂದು ಬಿಸಿ ಗಾಳಿ ಸಾಧ್ಯತೆ
ಕರಾವಳಿಗೆ ಇಂಥದ್ದೊಂದು ಎಚ್ಚರಿಕೆ ಅಪರೂಪ
Team Udayavani, Mar 4, 2023, 7:10 AM IST
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಕರಾವಳಿ ಭಾಗದಲ್ಲಿ ಮಾ. 4ರಂದು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ದ.ಕ., ಉಡುಪಿ ಭಾಗದಲ್ಲಿ ಬಿಸಿ ಗಾಳಿ ಎಚ್ಚರಿಕೆಯನ್ನು ಐಎಂಡಿಯು ನೀಡಿದ್ದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲು ಎನ್ನುತ್ತಾರೆ ಹವಾಮಾನ ವಿಶ್ಲೇಷಕರು.
ಯಾಕೆ ಈ ಎಚ್ಚರಿಕೆ?
ಸದ್ಯ ಉತ್ತರ ಭಾರತ ಭಾಗಗಳಲ್ಲಿ ತಾಪಮಾನ ಏರಿಕೆ ಕಂಡಿದೆ. ಪುಣೆ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ. ಆ ಭಾಗದಿಂದ ಕರಾವಳಿ ಕಡೆಗೆ ಗಾಳಿ ಬೀಸುತ್ತಿದ್ದು, ಇದು ಬಿಸಿಯಾಗಿರುತ್ತದೆ. ಇದೇ ಕಾರಣಕ್ಕೆ ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗಿದೆ ಎನ್ನುತ್ತಾರೆ ಐಎಂಡಿ ಅಧಿಕಾರಿ ಪ್ರಸಾದ್.
ಹವಾಮಾನ ತಜ್ಞ ಡಾ| ರಾಜೇಗೌಡ ಪ್ರಕಾರ, “ಮೆಡಿಟರೇನಿಯನ್ ಪ್ರದೇಶದಲ್ಲಿ ಡಸ್ಟ್ಸ್ಟಾರ್ಮ್ (ಧೂಳುಮಿಶ್ರಿತ ಬಿರುಗಾಳಿ) ಆರಂಭ ವಾಗಿದೆ. ವಾತಾವರಣದಲ್ಲಿ ಒತ್ತಡ ಕಡಿಮೆ ಯಾದರೆ ಡಸ್ಟ್ ಸ್ಟಾರ್ಮ್ ದಕ್ಷಿಣದ ಕಡೆಗೂ ಬೀಸುವ ಸಾಧ್ಯತೆ ಇರುತ್ತದೆ ಎನ್ನುತ್ತಾರೆ.
ಇನ್ನೆರಡು ವಾರ ಇದೇ ಪರಿಸ್ಥಿತಿ
ಸದ್ಯದ ಮಾಹಿತಿಯಂತೆ ಮಾರ್ಚ್ ಮೂರನೇ ವಾರದವರೆಗೆ ಗರಿಷ್ಠ ಉಷ್ಣಾಂಶ ಇದೇ ರೀತಿ ಇರಲಿದೆ. ಕರಾವಳಿಯಲ್ಲಿ ವಾಡಿಕೆ ಅಥವಾ ಅದಕ್ಕಿಂತ ಒಂದೆರಡು ಡಿ.ಸೆ. ಹೆಚ್ಚಿನ ತಾಪಮಾನ ದಾಖಲಾಗಲಿದ್ದು, ಬಳಿಕ ಪೂರ್ವ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎನ್ನುತ್ತಾರೆ ಹವಾಮಾನ ಇಲಾಖೆ ತಜ್ಞರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.