ಕರಾವಳಿ: ತೀವ್ರಗೊಂಡ ಚಳಿ
Team Udayavani, Feb 10, 2020, 6:42 AM IST
ಸಾಂದರ್ಭಿಕ ಚಿತ್ರ.
ಮಂಗಳೂರು/ಉಡುಪಿ: ಕರಾವಳಿಯಲ್ಲಿ ಚಳಿ ತೀವ್ರಗೊಂಡಿದೆ. ರವಿವಾರ 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಈ ಋತುವಿನಲ್ಲಿ ಇದೇ ಮೊದಲ ಬಾರಿಗೆ ತಾಪಮಾನ 19 ಡಿಗ್ರಿ ಸನಿಹಕ್ಕೆ ಇಳಿದಿದೆ.
ಈ ಬಾರಿ ಮಳೆ ಜನವರಿಯವರೆಗೂ ಸುರಿದಿದ್ದರಿಂದ ಚಳಿಯ ಪ್ರಮಾಣ ಕಡಿಮೆಯಾಗಿತ್ತು. ಶನಿವಾರ ಬಳಿಕ ಮತ್ತೆ ಚಳಿಯ ವಾತಾವರಣ ಕಂಡು ಬಂದಿತ್ತು. ಮಂಗಳೂರಿನಲ್ಲಿ ರವಿವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕನಿಷ್ಠ ತಾಪಮಾನ 19.3 ಡಿ.ಸೆ. ದಾಖಲಾಗಿತ್ತು. ಇದು ಸಾಮಾನ್ಯ ತಾಪಮಾನಕ್ಕಿಂತ ಮೂರು ಡಿ.ಸೆ. ಕಡಿಮೆಯಾಗಿತ್ತು. ಗ್ರಾಮಾಂತರ ಪ್ರದೇಶಗಳಲ್ಲಿ ಬೆಳಗ್ಗೆ 9 ಗಂಟೆಯವರೆಗೂ ಚಳಿಯ ವಾತಾವರಣವಿತ್ತು. ದಿನದ ಗರಿಷ್ಠ ತಾಪಮಾನ 34.3 ಡಿ.ಸೆ. ದಾಖಲಾಗಿತ್ತು.
ಉಡುಪಿಯಲ್ಲಿ
ರವಿವಾರ 19 ಡಿ.ಸೆ. ಕನಿಷ್ಠ ತಾಪಮಾನ ಮತ್ತು 33 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿತ್ತು. ಸುಳ್ಯದಲ್ಲಿ ಕನಿಷ್ಠ ತಾಪಮಾನ 18 ಡಿ.ಸೆ.ಗೆ ಇಳಿದಿತ್ತು.
ಕೊಡಗು: ಭಾರೀ ಚಳಿ
ಕೊಡಗಿನಲ್ಲಿ ಕಳೆದ ಕೆಲವು ದಿನಗಳಿಂದ ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಡಿಕೇರಿಯಲ್ಲಿ ರವಿವಾರ 10.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಇಲ್ಲಿನ ಕನಿಷ್ಠ ತಾಪಮಾನ ಇನ್ನೂ ಕುಸಿಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಗುಂಬೆಯಲ್ಲಿ ರವಿವಾರ 11.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಇನ್ನೂ ಕೆಲವು ದಿನ ಚಳಿ
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇನ್ನೂ ಮೂರ್ನಾಲ್ಕು ದಿನ ಚಳಿ ಮುಂದುವರಿಯಲಿದೆ. ಮಂಗಳೂರಿನಲ್ಲಿ ಫೆ. 10, 11, 12ರಂದು ಕನಿಷ್ಠ ತಾಪಮಾನ 20 ಡಿ.ಸೆ. ಆಸುಪಾಸಿನಲ್ಲಿರುವ ಸಾಧ್ಯತೆ ಇದ್ದರೆ, ಫೆ. 13, 14ರಂದು 19 ಡಿ.ಸೆ.ಗೆ ಇಳಿಯುವ ಸಂಭವ ಇದೆ. ಉಡುಪಿ ಜಿಲ್ಲೆಯಲ್ಲಿಯೂ ಬಹುತೇಕ ಇದೇ ವಾತಾವರಣ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.