‘ಮನೆಗಳಲ್ಲಿ ತುಳು ಗ್ರಂಥಗಳ ಸಂಗ್ರಹವಾಗಲಿ’

Team Udayavani, Jun 8, 2018, 10:57 AM IST

8-june-2.jpg

ಮಹಾನಗರ : ತುಳು ಭಾಷೆ, ಸಾಹಿತ್ಯ ಕ್ಷೇತ್ರದ ಬೆಳವಣಿಗೆಗಾಗಿ ಗ್ರಂಥಗಳ ಪ್ರಕಟನೆ ಹಾಗೂ ಮಾರಾಟದ ವ್ಯವಸ್ಥೆಯನ್ನು ಬಲಪಡಿಸಬೇಕು ಹಾಗೂ ತುಳುವರು ತಮ್ಮ ಮನೆ ಮನೆಗಳಲ್ಲಿ ತುಳು ಗ್ರಂಥಗಳ ಸಂಗ್ರಹದ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ ಹೆಗ್ಡೆ ಅವರು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ತುಳುನಾಡಿನ ಪ್ರಮುಖ ದೇವಸ್ಥಾನ, ದೈವಸ್ಥಾನಗಳಲ್ಲಿ ತುಳು ಪುಸ್ತಕ ಪ್ರದರ್ಶನ ಮತ್ತು ಮಾರಾಟ ಅಭಿಯಾನಕ್ಕೆ ಮಂಗಳಾದೇವಿ ದೇವಸ್ಥಾನದಲ್ಲಿ ದೀಪ ಬೆಳಗಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ಸಂಸ್ಕೃತಿಯ ಅಭಿವೃದ್ಧಿಗಾಗಿ ವಿಶೇಷ ಪ್ರಯತ್ನ
ಇತ್ತೀಚೆಗಿನ ವರ್ಷಗಳಲ್ಲಿ ಅಕಾಡೆಮಿ ವತಿಯಿಂದ ಅನೇಕ ಮೌಲಿಕ ಕಾರ್ಯಕ್ರಮಗಳು ಜರಗುತ್ತಿದ್ದು ತುಳುಭಾಷೆ – ಸಂಸ್ಕೃತಿಯ ಅಭಿವೃದ್ಧಿಗಾಗಿ ವಿಶೇಷ ಪ್ರಯತ್ನಗಳಾಗುತ್ತಿವೆ. ಜಗತ್ತಿನಾದ್ಯಂತ ನೆಲೆಸಿರುವ ತುಳುವರು ತಮ್ಮ ಸಂಸ್ಕೃತಿ ಉಳಿವಿಗಾಗಿ ಕೊಡುಗೆ ನೀಡುತ್ತಿದ್ದಾರೆ. ತುಳು ಜನರು ಎಲ್ಲರೊಂದಿಗೆ ಬೆರೆತು ಎಲ್ಲ ಭಾಷೆಗಳನ್ನು ಕಲಿತು ಸರ್ವರನ್ನೂ ಪ್ರೀತಿಸುವ ಗುಣ ಹೊಂದಿದ್ದಾರೆ ಎಂದು ತಿಳಿಸಿದರು.

ಅಕಾಡೆಮಿಯು ತುಳು ಗ್ರಂಥಗಳ ಪ್ರಕಟನೆಗೆ ವಿಶೇಷ ಅನುಕೂಲ ಕಲ್ಪಿಸುತ್ತಿದೆ. ಇದರ ಪ್ರಯೋಜನ ಪ್ರತಿಯೊಬ್ಬ ತುಳುವರಿಗೂ ದೊರಕಬೇಕೆಂಬ ಪ್ರಯತ್ನದ ಭಾಗವಾಗಿ ತುಳು ಪುಸ್ತಕಗಳ ಮಾರಾಟ ಅಭಿಯಾನ ಕೈಗೊಂಡಿದೆ. 12 ದಿನಗಳ ಕಾಲ ಮಂಗಳಾದೇವಿಯಲ್ಲಿ ಮಾರಾಟ ಮಳಿಗೆ ಇರುವುದು. ತುಳು ಪುಸ್ತಕಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ ಎಂದು ಅವರು ನುಡಿದರು.

ಅಕಾಡೆಮಿ ಸದಸ್ಯ ಶಿವಾನಂದ ಕರ್ಕೇರ, ಬೆನೆಟ್‌ ಅಮ್ಮನ್ನ, ತಾರಾನಾಥ್‌ ಕಾಪಿಕಾಡ್‌, ಮಾಜಿ ಸದಸ್ಯ ಡಿ.ಎಂ. ಕುಲಾಲ್‌, ಪುಸ್ತಕ ಮಾರಾಟ ವ್ಯವಸ್ಥೆಯ ಪ್ರಮುಖರಾದ ದೀಪಕ್‌ ಮಂಜೇಶ್ವರ ಉಪಸ್ಥಿತರಿದ್ದರು

ತುಳು ಅಳವಡಿಸಿ ಪ್ರೋತ್ಸಾಹ 
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಮಾತನಾಡಿ, ರಾಜ್ಯ ಸರಕಾರ ತುಳುಭಾಷೆಗಾಗಿ ಅಕಾಡೆಮಿ ಮಾನ್ಯತೆ ನೀಡಿದೆ. ಶಾಲೆ ಗಳಲ್ಲಿ ತುಳು ಕಲಿಕೆಗಾಗಿ ಅವಕಾಶ ಕಲ್ಪಿಸಿದೆ. ಮಂಗಳೂರು ವಿಶ್ವವಿದ್ಯಾಲಯದ ಮೂಲಕ ಪದವಿ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ತುಳುವನ್ನು ಅಳವಡಿಸಿ ಪ್ರೋತ್ಸಾಹ ನೀಡಲಾಗುತ್ತಿದೆ. ತುಳು ಭಾಷೆ – ಸಂಸ್ಕೃತಿಯ ಬಗ್ಗೆ ಅಧ್ಯಯನಕಾರರು ಹೆಚ್ಚುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.