ಕಾಲನಿ ನಿವಾಸಿಗಳ ಸಮಸ್ಯೆ ಶೀಘ್ರ ಪರಿಹಾರ: ಶಾಸಕ ಬಂಗೇರ


Team Udayavani, Aug 24, 2017, 7:45 AM IST

2308ble11ph.jpg

ಬೆಳ್ತಂಗಡಿ : ಶತಮಾನಗಳ ಹಿಂದಿನಿಂದ ಕಾಡಿನ ಮಧ್ಯೆ ವಾಸವಾಗಿ ಕಷ್ಟಪಟ್ಟು ಕೃಷಿ ಮಾಡಿ ಜೀವನ ಸಾಗಿಸಲು ಯತ್ನಿಸಿದರೂ ಕಾಡು ಪ್ರಾಣಿಗಳ ಹಾವಳಿಯಿಂದ ನಷ್ಟಕ್ಕೊಳಗಾದರೂ ಜೀವನ ನಿರ್ವಹಿಸುತ್ತಿದ್ದ ನೆರಿಯ ಕಾಲನಿ ನಿವಾಸಿಗಳು ಸುಖದಿಂದ ಬದುಕಬೇಕು ಎಂಬ ಉದ್ದೇಶದಿಂದ ಸುಮಾರು 11.65 ಕೋ.ರೂ. ಗಳ ಅನುದಾನವನ್ನು  ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದ್ದಾರೆ.

ಅವರು ಮಂಗಳವಾರ ನೆರಿಯದ ಕೋಲೋಡಿಯಲ್ಲಿ 5.30 ಕಿ.ಮೀ. ಕಾಂಕ್ರೀಟ್‌ ರಸ್ತೆ ಹಾಗೂ 7 ಸೇತುವೆಗಳ ನಿರ್ಮಾಣದ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಮಂಜೂರಾದ 11.65 ಕೋ.ರೂ.ಗಳ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಇಲ್ಲಿನ ಸುಮಾರು 88 ಕುಟುಂಬಗಳು ಶತಮಾನಗಳಿಂದ ವಾಸವಾಗಿ ದ್ದರೂ 1974ರ ಭೂ ಮಸೂದೆ ಕಾಯ್ದೆಯಿಂದ ಜಾಗ ಪಡೆದರೂ ಮೂಲ ಸೌಕರ್ಯಗಳಿಂದ ವಂಚಿತ ರಾಗಿದ್ದರು. ಅನಾರೋಗ್ಯಕ್ಕೊಳಗಾದರೆ 7.5 ಕಿಲೋ ಮೀಟರ್‌ ದೂರಕ್ಕೆ ಹೆಗಲಲ್ಲೇ ಹೊತ್ತು ತರಬೇಕಾದ ಪರಿಸ್ಥಿತಿ ಇತ್ತು. ಕಾಡುಪ್ರಾಣಿಗಳ ಹಾವಳಿ, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಎದುರಿಸುತ್ತಿದ್ದು ಇದೆಲ್ಲಕ್ಕೆ ಪರಿಹಾರ ಸಿಗಬೇಕೆಂಬ ಉದ್ದೇಶ ನನ್ನದಾಗಿದ್ದು ಅದಕ್ಕಾಗಿ ವಿಶೇಷ ಮುತುವರ್ಜಿಯಿಂದ ಅನುದಾನ ಮಂಜೂರುಗೊಳಿಸಿದ್ದೇನೆ ಎಂದು  ಅವರು ಹೇಳಿದರು.

ಜಿಲ್ಲೆಯ ಇತಿಹಾಸದಲ್ಲಿ ಇದು ಈ ಬಾರಿಯ ಹೆಚ್ಚಿನ ಅನುದಾನ ಈ ಪ್ರದೇಶಕ್ಕೆ ಸಿಕ್ಕಿದ್ದು ಇನ್ನಿತರ ಮೂಲಸೌಕರ್ಯಕ್ಕಾಗಿ ಸಂಬಂಧಪಟ್ಟ ಇಲಾಖೆಗಳೊಂದಿಗೆ  ಸಂಪರ್ಕಿಸುವುದಾಗಿ  ತಿಳಿಸಿದರು.

ಜಿ.ಪಂ. ಸದಸ್ಯೆ ನಮಿತಾ, ತಾ. ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ತಾ. ಪಂ. ಸದಸ್ಯೆ ವಿ. ಟಿ.ಸೆಬಾಸ್ಟಿಯನ್‌, ಪೂವಪ್ಪ  ಪೂಜಾರಿ ಶುಭಹಾರೈಸಿದರು. ನೆರಿಯ ತಾ. ಪಂ. ಅಧ್ಯಕ್ಷೆ ಪಿ. ಮಹಮ್ಮದ್‌ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಸದಸ್ಯ ಗಫ‌ೂರ್‌, ಗ್ರೇಸಿಯನ್‌ ವೇಗಸ್‌, ಗುತ್ತಿಗೆದಾರ ಸುಧಾಕರ ಶೆಟ್ಟಿ, ಎಂಜಿನಿಯರ್‌ ಜಯಾನಂದ, ಬಿ. ಕರಿಯಾ,  ಪೂವಪ್ಪ  ಪುದುವೆಟ್ಟು, ಗ್ರಾ.ಪಂ. ಅಧ್ಯಕ್ಷೆ ನೀಲಮ್ಮ ಹಾಗೂ ನೆರಿಯ ಹಾಗೂ ಪುದುವೆಟ್ಟು ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೊಲೋಡಿ ಕುಟುಂಬಗಳು ಶಾಸಕ ಕೆ. ವಸಂತ ಬಂಗೇರ ಅವರನ್ನು ಸಮ್ಮಾನಿಸಿದರು.  ಕೊಲೋಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಧಾಕರ್‌ ಸ್ವಾಗತಿಸಿ, ಎಲ್ಯಣ್ಣ ಮಲೆಕುಡಿಯ ವಂದಿಸಿದರು. ನೆರಿಯ ಗ್ರಾ.ಪಂ. ಸದಸ್ಯ ಅಶ್ರಫ್‌ ಕಾರ್ಯಕ್ರಮ ನಿರೂಪಿಸಿದರು.

ಶಾಸಕರಿಂದ ಸ್ಪಂದನೆ 
1975ರಿಂದ ಇಲ್ಲಿ ಬದುಕುತ್ತಿದ್ದು ಗೌರವಯುತ ಬದುಕಿಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದು ಯಾರೂ ಸ್ಪಂದಿಸಿರಲಿಲ್ಲ. ಶಾಸಕರು ಎರಡು ವರ್ಷಗಳ ಹಿಂದೆ ರಸ್ತೆಯ ಭರವಸೆ ನೀಡಿದ್ದರು. ಇದೀಗ ಈಡೇರಿಸಿದ್ದಾರೆ. ಬಡವರ ನೋವನ್ನು ಅರಿತು ಪರಿಹಾರ ಒದಗಿಸಿದ್ದಾರೆ .
– ಸುಧಾಕರ ಮಲೆಕುಡಿಯ, ಕೋಲೋಡಿ.

ವರ್ಷದಲ್ಲಿ ಪೂರ್ಣ
ಬೆಳ್ತಂಗಡಿ ತಾಲೂಕಿನಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ ಈ ಬಾರಿ 20.89  ಕಿ.ಮೀ. ರಸ್ತೆ ನಿರ್ಮಾಣಕ್ಕೆ 38.56 ಕೋ.ರೂ. ಅನುದಾನ ಮಂಜೂರಾಗಿ ಕಾಮಗಾರಿ ಆರಂಭಗೊಂಡಿದ್ದು ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ.
 – ಕೆ. ವಸಂತ ಬಂಗೇರ,
ಶಾಸಕ,ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿನಿಗ ಮದ ಅಧ್ಯಕ್ಷ

ಟಾಪ್ ನ್ಯೂಸ್

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.