ಬಂದ್‌ಗೆ ಕರೆ ಖಂಡನೀಯ: ಕೋಮು ಸೌಹಾರ್ದ ವೇದಿಕೆ
Team Udayavani, Feb 23, 2017, 1:01 PM IST
ಮಂಗಳೂರು: ಕೋಮು ಸೌಹಾರ್ದ ರ್ಯಾಲಿ ಹಿನ್ನೆಲೆಯಲ್ಲಿ ಫೆ. 25ರಂದು ಮಂಗಳೂರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸುವುದನ್ನು ವಿರೋಧಿಸಿ ಸಂಘಪರಿವಾರ ಸಂಘಟನೆ ಗಳು ಮಂಗಳೂರು ಬಂದ್‌ಗೆ ಕರೆ ನೀಡಿರುವುದು ಖಂಡನೀಯ ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ದ.ಕ. ಜಿಲ್ಲಾ ಘಟಕ ಅಭಿಪ್ರಾಯಪಟ್ಟಿದೆ.
ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ದೇಶದ ರಾಜ್ಯವೊಂದರ ಮುಖ್ಯಮಂತ್ರಿ ನಮ್ಮ ರಾಜ್ಯಕ್ಕೆ ಆಗಮಿಸುವುದನ್ನು ವಿರೋಧಿಸಿ ಬಂದ್‌ಗೆ ಕರೆ ಕೊಟ್ಟ ಸಂಘಪರಿವಾರದ ನಡೆ ಅದರ ಅಸಹಿಷ್ಣುತೆ ಮತ್ತು ಹತಾಶೆಯನ್ನು ಬಿಂಬಿಸುತ್ತದೆ. ಪ್ರತಿಭಟಿಸುವ ಹಕ್ಕು ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಇದೆ. ಆದರೆ ಯಾವುದೇ ಕಾರಣಕ್ಕೂ ಜಿಲ್ಲೆಗೆ ಬರಲು ಬಿಡಲಾರೆವು ಎಂಬ ಅವರ ವಾದ ಅಕ್ಷಮ್ಯ ಎಂದಿದೆ.
ಮಂಗಳೂರು ಕೇವಲ ಸಂಘ ಪರಿವಾರದವರಿಗೆ ಸೇರಿದ್ದಲ್ಲ. ಇಲ್ಲಿಗೆ ಯಾರಾದರೂ ಬರದಂತೆ ತಡೆಯುವ ಹಕ್ಕು ಯಾರಿಗೂ ಇಲ್ಲ ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.