ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಜಾತಿನಿಂದನೆ ದೂರು
Team Udayavani, Apr 11, 2018, 8:30 AM IST
ಬೆಳ್ತಂಗಡಿ: ಕಲ್ಲಡ್ಕ ಪ್ರಭಾಕರ ಭಟ್ ಅವರು ದೈವ ನರ್ತನದಲ್ಲಿ ತೊಡಗಿರುವ ನಲಿಕೆ ಸಮುದಾಯವನ್ನು ಸಾರ್ವಜನಿಕವಾಗಿ ನಿಂದಿಸಿ, ಅವಮಾನಗೈದು ಜಾತಿನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ನಲಿಕೆ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ಎಸ್. ಪ್ರಭಾಕರ್ ಶಾಂತಿಗೋಡು ಮಂಗಳವಾರ ದೂರು ದಾಖಲಿಸಿದ್ದಾರೆ.
ಬಳಿಕ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನಲಿಕೆಯವರ ಸಮಾಜ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷ ಸೇಸಪ್ಪ ನಲಿಕೆ ಮಾತನಾಡಿದರು. ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಭೂತ ಕಟ್ಟುವವನಿಗೆ ತಲೆ ಸರಿ ಇಲ್ಲ ಎಂದು ಸಾರ್ವಜನಿಕವಾಗಿ ನಿಂದಿಸಿ, ಅವಮಾನಿಸಿದ್ದು, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖ ಲಿಸಿ ಜೈಲಿಗಟ್ಟಬೇಕು ಎಂದರು.
ದೈವ ನರ್ತನ ಸಂದರ್ಭ ಯಾರೇ ಬಂದರೂ ಭಕ್ತಿಯಿಂದ ಪ್ರಸಾದ ಹಾಗೂ ಬೂಳ್ಯ ನೀಡುವುದು ತುಳುನಾಡಿನ ಸಂಪ್ರದಾಯ. ಜನರ ನಂಬಿಕೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದವರು ಹೇಳಿದರು.
ಪ್ರಭಾಕರ ಭಟ್ ನೇತೃತ್ವದಲ್ಲಿರುವ ಕಲ್ಲಡ್ಕದ ಶ್ರೀರಾಮ ಮಂದಿರಕ್ಕೂ ಮುಸ್ಲಿಮರು ಭಕ್ತಿಯಿಂದ ಹೋಗಿದ್ದಾರೆ. ಮೊದಲು ಈ ಶ್ರೀರಾಮ ಮಂದಿರಕ್ಕೆ ಬ್ರಹ್ಮಕಲಶ ಮಾಡಲಿ. ಸಂವಿಧಾನ ವಿರೋಧಿ ಹೇಳಿಕೆ ನೀಡುವ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಎಲ್ಲ ದಲಿತ ಸಂಘಟನೆಗಳೊಂದಿಗೆ ಸೇರಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಕೀಳು ಮಟ್ಟದ ಹೇಳಿಕೆ ಸರಿಯಲ್ಲ
ಅಧ್ಯಕ್ಷ ಎಸ್. ಪ್ರಭಾಕರ ಶಾಂತಿಕೋಡಿ ಮಾತನಾಡಿ, ಸಂಕುಚಿತ ಮನಸ್ಸಿನವರಿಂದಾಗಿ ಬುದ್ಧಿವಂತರ ಜಿಲ್ಲೆಯೆಂದು ಹೆಸರಾದ ಜಿಲ್ಲೆಗೆ ಕಳಂಕ ಬರುತ್ತಿದೆ. ಅವರು ರಾಜಕೀಯ ಮಾಡಲಿ, ಆದರೆ ಒಂದು ಸಮುದಾಯದ ಕುರಿತು ಕೀಳು ಮಟ್ಟದ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಶ್ಯಾಮ್‌ಸುಂದರ್, ದೈವ ನರ್ತಕ ಜನಾರ್ದನ ಬಳ್ಳಮಂಜ, ಯುವ ವೇದಿಕೆ ಅಧ್ಯಕ್ಷ ಹರೀಶ್ ನಾವೂರು, ಉಪಾಧ್ಯಕ್ಷ ರಾಮ್ ಶಿಶಿಲ ಸದಸ್ಯರಾದ ವಿನಯಕುಮಾರ್ ಎರುಕಡಪು, ಸೀತಾರಾಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.