ಸಚಿವ ರಮಾನಾಥ ರೈ ವಿರುದ್ಧ ಲೋಕಾಯುಕ್ತಗೆ ದೂರು
Team Udayavani, Nov 16, 2017, 8:05 AM IST
ಮಂಗಳೂರು: “ದ.ಕ.ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ರಬ್ಬರ್ ತೋಟ ಮಾಡಿದ್ದು, ಈ ಬಗ್ಗೆ ಸದ್ಯದಲ್ಲೇ ಲೋಕಾಯುಕ್ತ ಮತ್ತು ಎಸಿಬಿಗೆ ದೂರು ನೀಡುವುದಾಗಿ’ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈ ಅವರು ತಮ್ಮ ವಿರುದ್ಧದ ಆರೋಪಗಳ ಬಗ್ಗೆ ನುಣುಚಿಕೊಳ್ಳುವ
ಯತ್ನ ಮಾಡುತ್ತಿದ್ದಾರೆ. 28 ಎಕರೆ ಸರಕಾರಿ ಜಾಗದಲ್ಲಿ 10 ಎಕರೆ ಸರಕಾರಿ ಜಾಗ ಕಬಳಿಸಿ ರಬ್ಬರ್ ಬೆಳೆದಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸರ್ವೆ ನಡೆಸಿದರೆ ಸತ್ಯ ಬಯಲಾಗುತ್ತದೆ ಎಂದರು. ಸರಕಾರ ಅಕ್ರಮ ಸಕ್ರಮ ಪದ್ಧತಿ ಜಾರಿಗೆ ತಂದದ್ದು ಸಣ್ಣ ರೈತರಿಗೋಸ್ಕರ. ಆದರೆ, ರಮಾನಾಥ ರೈ ಅವರ ಪತ್ನಿ ಹೆಸರಲ್ಲಿ 6 ಸಾವಿರ ರೂ.ಆದಾಯ ದಾಖಲು ಮಾಡಿ ಮಾಣಿ ಗ್ರಾಮದಲ್ಲಿ 4 ಎಕರೆ ಜಮೀನನ್ನು ಅಕ್ರಮ ಸಕ್ರಮ ಮೂಲಕ ಪಡೆದಿದ್ದಾರೆ. ಬಂಟ್ವಾಳ ಬಳಿಯ ರಾಜರಾಜೇಶ್ವರಿ ಭಜನಾ ಮಂದಿರದ ಪಕ್ಕದಲ್ಲಿನ ರೈ ಅವರ ಸರಕಾರಿ ಜಮೀನಿನಲ್ಲಿ ಪಂಪ್ ಸೆಟ್ ಇದ್ದು, ಇದು ಅಕ್ರಮವಾಗಿದೆ ಎಂದು ಆರೋಪಿಸಿದರು. ಅಲ್ಲದೆ, ತಮಗೆ ಈಗಾಗಲೇ 5 ಬೆದರಿಕೆ ಪತ್ರಗಳು ಬಂದಿವೆ ಎಂದರು.
ಮಾನನಷ್ಟ ಮೊಕದ್ದಮೆ
ಮಂಗಳೂರು: ಭೂ ಅತಿಕ್ರಮಣ ಮಾಡಲಾಗಿದೆ ಎಂದು ಆರೋಪಿಸಿ ಹರಿಕೃಷ್ಣ ಬಂಟ್ವಾಳ ಅವರು ತಮ್ಮ ವಿರುದ್ಧ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಅಲ್ಲದೆ, ಹರಿಕೃಷ್ಣ ಬಂಟ್ವಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಸಚಿವರು “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ
ಮೂರು ದಿನವಾದರೂ ದಾಖಲಾಗದ ಎಫ್‌ಐಆರ್ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!
ಡಾ| ವೀರಪ್ಪ ಮೊಯ್ಲಿ ಕೃತಿ “ವಿಶ್ವ ಸಂಸ್ಕೃತಿಯ ಮಹಾಯಾನ’ ಭಾಗ-2 ನಾಳೆ ಬಿಡುಗಡೆ
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.