ಜನವರಿಯೊಳಗೆ ಮನೆ ಕಾಮಗಾರಿ ಪೂರ್ಣಗೊಳಿಸಿ
Team Udayavani, Nov 17, 2017, 10:08 AM IST
ಮಹಾನಗರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ 8,300 ಮನೆಗಳ ನಿರ್ಮಾಣ ಗುರಿ ನೀಡಲಾಗಿದ್ದು, ಈ ಪೈಕಿ 3,000 ಮಾತ್ರ ಪೂರ್ಣಗೊಂಡಿವೆ. ಜನವರಿಯೊಳಗೆ ಎಲ್ಲ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಯೋಜನಾಧಿಕಾರಿ ಲೋಕೇಶ್ ಅವರು ಅಧಿಕಾರಿಗಳು ಹಾಗೂ ಫಲಾನುಭವಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತಿನ ನೇತ್ರಾವತಿ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು ಅಧ್ಯಕ್ಷತೆಯಲ್ಲಿ ಗುರುವಾರ ಜರಗಿದ ತಾಲೂಕು ಮಟ್ಟದ ವಸತಿ ಅದಾಲತ್‌ನಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 5,000ಕ್ಕೂ ಅಧಿಕ ಮನೆಗಳು ವಿವಿಧ ಹಂತಗಳಲ್ಲಿ ಬಾಕಿ ಇವೆ. ಮಂಗಳೂರು ತಾ.ಪಂ.ಗೆ ಸಂಬಂಧಿಸಿ 1,283 ವಸತಿ ನಿರ್ಮಾಣದ ಗುರಿ ಹೊಂದಲಾಗಿದೆ. 480 ಮನೆಗಳು ಪೂರ್ಣಗೊಂಡಿದ್ದು, 803 ನಿರ್ಮಾಣ ಹಂತದಲ್ಲಿವೆ. ಜನವರಿ ವೇಳೆಗೆ ಎಲ್ಲ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.
ಫಲಾನುಭವಿಗಳಿಗೆ 700 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಾಣಕ್ಕೆ ಅವಕಾಶವಿದೆ. ಆದರೆ 1.20 ಲಕ್ಷ ರೂ.ಗಳಲ್ಲಿ ಅಷ್ಟು ವಿಸ್ತೀರ್ಣದ ಮನೆ ನಿರ್ಮಾಣ ಸಾಧ್ಯವಾಗದಿರುವುದರಿಂದ ಕೆಲವೊಮ್ಮೆ ಅರ್ಧದಲ್ಲಿಯೇ ಬಾಕಿಯಾಗುತ್ತಿದೆ. ಇದನ್ನು ನಿರ್ದಿಷ್ಟಗೊಳಿಸಿದರೆ ಬಡ ಫಲಾನುಭವಿಗಳು ಲಭ್ಯವಿರುವ ಅನುದಾನದಲ್ಲಿಯೇ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗಬಹುದು ಎಂದು ಕಿನ್ನಿಗೋಳಿಯ ತಾಲೂಕು ಪಂಚಾಯತ್ ಸದಸ್ಯರೊಬ್ಬರು ಹೇಳಿದರು.
ಬೆಳುವಾಯಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲಾನುಭವಿಯೊಬ್ಬರು 2016ರಲ್ಲಿ ಮನೆ ನಿರ್ಮಾಣಕ್ಕೆ ಅರ್ಜಿ ನೀಡಿದ್ದಾರೆ. ಅವರಿಗೆ ಹಣ ಮಂಜೂರಾಗಿದೆ. ಆದರೆ ಸಂಬಂಧಪಟ್ಟವರಿಂದ ಅನುಮೋದನೆ ಸಿಗದ ಕಾರಣ ಒಂದೂವರೆ ವರ್ಷದಿಂದ ಮನೆ ನಿರ್ಮಾಣ ಸಾಧ್ಯವಾಗಿಲ್ಲ. ಈ ಬಗ್ಗೆ 20ಕ್ಕೂ ಅಧಿಕ ಬಾರಿ ದೂರವಾಣಿ ಕರೆ, 10ಕ್ಕೂ ಅಧಿಕ ಪತ್ರ ವ್ಯವಹಾರ ನಡೆಸಲಾಗಿದ್ದರೂ ಪ್ರಯೋಜನವಾಗಿಲ್ಲ ಎಂದು ಫಲಾನುಭವಿ ಪರವಾಗಿ ಪಿಡಿಒ ಅವರೇ ಗಮನ ಸೆಳೆದರು. ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಮರಳಿನ ಸಮಸ್ಯೆ
ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ತೀವ್ರವಾಗುತ್ತಿದೆ. ಮರಳು ಕೊರತೆಯಿಂದಾಗಿ ವಸತಿ ಯೋಜನೆ ಫಲಾನುಭವಿಗಳಿಗೆ ಮನೆ ನಿರ್ಮಾಣ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾ.ಪಂ. ಪ್ರತಿನಿಧಿಗಳು ತಿಳಿಸಿದರು.
ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು ಮಾತನಾಡಿ, ಸರಕಾರವು ಬಡವರ ಕಲ್ಯಾಣಕ್ಕಾಗಿ ಬಸವ ವಸತಿ ಯೋಜನೆ ಜಾರಿಗೆ ತಂದಿದೆ. ಈಗಾಗಲೇ ಮರಳಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ತಾಲೂಕು ಮಟ್ಟದಲ್ಲಿ ವಸತಿ ಯೋಜನೆಗಳಡಿ ಬಾಕಿ ಇರುವ ಮನೆಗಳನ್ನು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಫಲಾನುಭವಿಗಳು ಮುಂದಾಗಬೇಕು ಎಂದರು. ತಾ.ಪಂ. ಉಪಾಧ್ಯಕ್ಷೆ ಪೂರ್ಣಿಮಾ ಗಣೇಶ್, ಜಿ.ಪಂ. ಸದಸ್ಯರಾದ ಜನಾರ್ದನ ಗೌಡ, ಸುಚರಿತ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!
IRACON:ಸಂಧಿವಾತ ಸಮಸ್ಯೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ.ಶರಣಪ್ರಕಾಶ ಪಾಟೀಲ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.