ಅವೈಜ್ಞಾನಿಕ ಕಾಮಗಾರಿ ಕೊಚ್ಚಿಹೋದ ಕಾಂಕ್ರೀಟ್ ರಸ್ತೆ
Team Udayavani, Jun 13, 2018, 2:10 AM IST
ವೇಣೂರು: ವೇಣೂರು ಮುಖ್ಯಪೇಟೆಯ ಕೆಲವೇ ಮೀಟರ್ ಅಂತರದ ಪರಪ್ಪು ರಸ್ತೆಗೆ ಹಾಕಲಾದ ಕಾಂಕ್ರೀಟ್ ಕಾಮಗಾರಿ ಮಳೆಗೆ ಕೊಚ್ಚಿ ಹೋಗಿದ್ದು, ಅವೈಜ್ಞಾನಿಕವಾಗಿ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕೆಲವು ಸಮಯಗಳ ಹಿಂದೆಯಷ್ಟೇ ಈ ರಸ್ತೆಗೆ ಭಾರೀ ಪ್ರಮಾಣದಲ್ಲಿ ಮಣ್ಣು ತುಂಬಿಸಿ ದುರಸ್ತಿ ಕಾರ್ಯ ನಡೆಸಲಾಗಿತ್ತು. ಬಳಿಕ ಅದೇ ರಸ್ತೆಗೆ ಈ ಹಿಂದಿನ ಬೆಳ್ತಂಗಡಿ ಶಾಸಕರ ವಿಶೇಷ ಅನುದಾನದಡಿ ಕಾಂಕ್ರೀಟ್ ನಿರ್ಮಾಣ ಮಾಡಲಾಗಿತ್ತು.
ಬಿರುಸಿನಿಂದ ಸುರಿದ ಮುಂಗಾರು ಮಳೆಗೆ ಈಗ ರಸ್ತೆಯೇ ಕೊಚ್ಚಿ ಹೋಗಿದ್ದು, ಲಕ್ಷಾಂತರ ರೂ. ಹಣ ಪೋಲಾಗಿದೆ. ಮಣ್ಣು ತುಂಬಿಸಿದ ರಸ್ತೆಯನ್ನು ಗಟ್ಟಿಗೊಳಿಸದೆ ಅವೈಜ್ಞಾನಿಕವಾಗಿ ಕಾಂಕ್ರಿಟ್ ಹಾಕಿದ್ದರಿಂದ ಕೊಚ್ಚಿ ಹೋಗಿ ಸಂಪರ್ಕವೇ ಕಡಿತಗೊಂಡಿದೆ. ಈ ಬಗ್ಗೆ ವೇಣೂರು ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣರಾಜ ಅವರನ್ನು ಕೇಳಿದರೆ, ರಸ್ತೆ ಕೊಚ್ಚಿಹೋಗಿರುವ ಬಗ್ಗೆ ಮಾಹಿತಿ ಇಲ್ಲವಾಗಿದ್ದು, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಅವಸರದ ಕಾಮಗಾರಿ
ಹೊಸದಾಗಿ ಮಣ್ಣು ತುಂಬಿಸಿ ಮಾಡಲಾದ ಪರಪ್ಪು ರಸ್ತೆಗೆ ಒಂದು ಮಳೆಗಾಲ ಕಳೆದ ಬಳಿಕ ಕಾಂಕ್ರೀಟ್ ಹಾಕಬಹುದು ಎಂದು ಗುತ್ತಿಗೆದಾರರಿಗೆ ತಿಳಿಸಿದ್ದೆ. ಆದರೆ ಅವಸರದ ಕಾಮಗಾರಿಯಿಂದ ಕಾಂಕ್ರೀಟ್ ರಸ್ತೆ ಕೊಚ್ಚಿಹೋಗುವಂತಾಗಿದೆ.
– ಧರಣೇಂದ್ರ ಕುಮಾರ್, ಜಿ.ಪಂ. ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.