ಡಿ.16ರಂದು ಸಮ್ಮೇಳನ: ನಾ. ಕಾರಂತರಿಗೆ ಆಹ್ವಾನ


Team Udayavani, Dec 13, 2017, 3:54 PM IST

13-Dec-12.jpg

ಕಡಬ: ಕನ್ನಡ ಸಾಹಿತ್ಯ ಪರಿಷತ್‌ ನೇತೃತ್ವದಲ್ಲಿ ಕಡಬ ಸರಕಾರಿ ಪ.ಪೂ. ಕಾಲೇಜು ಆವರಣದಲ್ಲಿ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಪತ್ರಕರ್ತ, ಯಕ್ಷಗಾನ ಕಲಾವಿದ, ಅಂಕಣಕಾರ ನಾ.ಕಾರಂತ ಪೆರಾಜೆ ಅಧ್ಯಕ್ಷತೆಯಲ್ಲಿ ಡಿ. 16ರಂದು ಜರಗಲಿದೆ.

ಆ ಪ್ರಯುಕ್ತ ಸಾಹಿತ್ಯ ಪರಿಷತ್ತು ವತಿಯಿಂದ ನಾ.ಕಾರಂತ ಅವರ ಮನೆಗೆ ತೆರಳಿ ಆಮಂತ್ರಣ ಪತ್ರಿಕೆ ನೀಡಿ ಗೌರವಿಸಿ ಆಹ್ವಾನ ಮಾಡಲಾಯಿತು. ಪರಿಷತ್‌ನ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷ ಬಿ. ಐತಪ್ಪ ನಾೖಕ, ಗೌರವ ಕಾರ್ಯದರ್ಶಿಗಳಾದ ಡಾ| ಶ್ರೀಧರ ಎಚ್‌.ಜಿ., ಸರೋಜಿನಿ ಮೇನಾಲ, ಸಮ್ಮೇಳನದ ಸಲಹಾ ಸಮಿತಿ ಸದಸ್ಯರಾದ ಪ್ರೊ| ವಿ.ಬಿ. ಅರ್ತಿಕಜೆ, ಎನ್‌. ಸುಬ್ರಹ್ಮಣ್ಯಂ, ಪ್ರಮುಖರಾದ ಪ್ರೊ| ಹರಿನಾರಾಯಣ ಮಾಡಾವು, ಪ್ರೊ| ಎ.ವಿ. ನಾರಾಯಣ, ಪ್ರಕಾಶ್‌ ಕೊಡೆಂಕಿರಿ ಹಾಗೂ ನಾ. ಕಾರಂತ ಅವರ ಕುಟುಂಬ ಸದಸ್ಯರು ಹಾಜರಿದ್ದರು.

ಉದ್ಘಾಟನ ಸಮಾರಂಭ
ಬೆಳಗ್ಗೆ 9.45ರಿಂದ ನಾ. ಕಾರಂತ ಪೆರಾಜೆ ಅವರ ಅಧ್ಯಕ್ಷತೆಯಲ್ಲಿ ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ| ಮಹೇಶ್‌ ಜೋಷಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. 

ಕಸಾಪ ತಾಲೂಕು ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ ಪ್ರಸ್ತಾವನೆ ಮಾಡಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಆಶಯ ಭಾಷಣ ಮಾಡಲಿರುವರು. ಸುಳ್ಯ ಶಾಸಕ ಎಸ್‌. ಅಂಗಾರ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪುಸ್ತಕ ಪ್ರದರ್ಶನ ಉದ್ಘಾಟಿಸುವರು. ವಸ್ತು ಪ್ರದರ್ಶನವನ್ನು ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಲಾ ಪ್ರದರ್ಶನವನ್ನು ಪ.ಪೂ. ಕಾಲೇಜಿನ ಕಾರ್ಯಾಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಉದ್ಘಾಟಿಸಲಿದ್ದಾರೆ. 

ನಿಕಟಪೂರ್ವ ಅಧ್ಯಕ್ಷ ಪ್ರೊ| ಹರಿನಾರಾಯಣ ಮಾಡಾವು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ವೈ. ಶಿವರಾಮಯ್ಯ, ತಾ.ಪಂ. ಇಒ ಜಗದೀಶ್‌ ಎಸ್‌., ಕಡಬ ವಿಶೇಷ ತಹಶೀಲ್ದಾರ್‌ ಜಾನ್‌ ಪ್ರಕಾಶ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಕಡಬ ಪರಿಸರದ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆ ಕುರಿತು ಪತ್ರಕರ್ತ ಎನ್‌.ಕೆ. ನಾಗರಾಜ್‌ ಉಪನ್ಯಾಸ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ ಗೌರವ ಉಪಸ್ಥಿತರಿರುವರು.

ಕವಿಗೋಷ್ಠಿ
ಹಿರಿಯ ಕವಿ ಟಿ.ಜಿ. ಮುಡೂರು ಅಧ್ಯಕ್ಷತೆಯಲ್ಲಿ ಸಮ್ಮೇಳನದ ಕವಿಗೋಷ್ಠಿ ನಡೆಯಲಿದ್ದು, ಕವಿಗಳಾದ ಕವಿತಾ ಅಡೂರು, ನಾರಾಯಣ ರೈ ಕುಕ್ಕುವಳ್ಳಿ, ಪಿ.ಎಸ್‌. ನಾರಾಯಣ ಕೊಯಿಲ, ಅಪೂರ್ವಾ ಕೊಲ್ಯ, ಕಾವ್ಯಾ ಶೆಟ್ಟಿ, ಅನಘಾ, ರತ್ನಶ್ರೀ, ಮಾನಸಾ ಕೆ., ಸಬಿತಾ ಕೆ., ಅನ್ವಿತಾ ಎಸ್‌. ಡಿ., ಸುಪ್ರೀತಾ ಎ., ವೈಷ್ಣವಿ ರಾಜೇಶ್‌ ಕವನಗಳನ್ನು ವಾಚಿಸಲಿದ್ದಾರೆ.

ಪುಸ್ತಕಗಳ ಬಿಡುಗಡೆ
ಸಮ್ಮೇಳನಾಧ್ಯಕ್ಷ ನಾ. ಕಾರಂತ ಪೆರಾಜೆ ಹೊಸ ಪುಸ್ತಕಗಳ ಬಿಡುಗಡೆ ಗೊಳಿಸಲಿದ್ದಾರೆ. ಶತಮಾನದ ನೆನಪು; ವಾಣಿಯವರ ಕುರಿತು ಡಾ| ಶೋಭಿತಾ ಸತೀಶ್‌ ಉಪನ್ಯಾಸ ನೀಡಲಿದ್ದಾರೆ. ಡಾ| ಕೆ.ಎಂ .ಮ್ಯಾಥ್ಯೂ, ಡಾ| ಸಿ.ಕೆ. ಶಾಸ್ತ್ರಿ ಪಾಲ್ಗೊಳ್ಳಲಿದ್ದಾರೆ. ಪಣೆಮಜಲು ಜನಾರ್ದನ ಗೌಡ ಅವರು ಸಾಹಿತಿ ಗೋಪಾಲ ರಾವ್‌ ಕಡಬ ಅವರ ಸಂಸ್ಮ ರಣೆ ಮಾಡಲಿದ್ದಾರೆ. ಸಮಾರೋಪ ಪೂರ್ವಭಾವಿಯಾಗಿ ಉದ್ಯಮಿ ಸಿ. ಫಿಲಿಪ್‌ ಉಪಸ್ಥಿತಿಯಲ್ಲಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಅವರು ವಿವಿಧ ಕ್ಷೇತ್ರಗಳ ಸಾಧಕರಾದ ಟಿ.ಜಿ. ಮ್ಯಾಥ್ಯೂ, ಬಲ್ನಾಡು ಸುಬ್ಬಣ್ಣ ಭಟ್‌, ಕರುಣಾಕರ ಉಪಾಧ್ಯಾಯ, ಎಸ್‌.ಜಿ. ಕೃಷ್ಣ, ಪ್ರೊ| ಎಂ. ವತ್ಸಲಾ ರಾಜ್ಮೀ, ಕುಂಬಳೆ ಶ್ರೀಧರ್‌ ರಾವ್‌, ಕಡಮಜಲು ಸುಭಾಷ್‌ ರೈ, ಪ್ರಕಾಶ್‌ ಕೊಡೆಂಕಿರಿ, ಬಿ.ಎಂ. ಲಿಂಗಪ್ಪ ಗೌಡ, ಜನಾರ್ದನ ಪರವ, ಜಿನ್ನಪ್ಪ ಕುಂಬಾರ ಅವರನ್ನು ಸಮ್ಮಾನಿಸಲಿದ್ದಾರೆ.

ಸಮಾರೋಪ ಸಮಾರಂಭ
ಕಸಾಪ ಜಿಲ್ಲಾಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಡಾ| ಸದಾನಂದ ಪೆರ್ಲ ಸಮಾರೋಪ ಭಾಷಣ ಮಾಡಲಿದ್ದಾರೆ. ಸಮ್ಮೇಳನಾಧ್ಯಕ್ಷ ನಾ| ಕಾರಂತ ಪೆರಾಜೆ ಸಮ್ಮೇಳನದ ವಿಮರ್ಶೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸ್ವರ್ಣೋದ್ಯಮಿ ಮುಳಿಯ ಶ್ಯಾಮ ಭಟ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕನ್ನಡ ಭುವನೇಶ್ವರಿ ದಿಬ್ಬಣ
ಬೆಳಗ್ಗೆ 8ಕ್ಕೆ ನಡೆಯುವ ಕನ್ನಡ ಭುವನೇಶ್ವರಿಯ ದಿಬ್ಬಣವನ್ನು ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ ಉದ್ಘಾಟಿಸಲಿದ್ದಾರೆ. ತಾ.ಪಂ. ಸದಸ್ಯ ಫಝಲ್‌ ಕೋಡಿಂಬಾಳ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ 9.15ಕ್ಕೆ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌ ರಾಷ್ಟ್ರ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಪರಿಷತ್‌ ಧ್ವಜಾರೋಹಣ, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ ಸಮ್ಮೇಳನದ ಧ್ವಜಾರೋಹಣ ಮಾಡಲಿದ್ದಾರೆ.

ಟಾಪ್ ನ್ಯೂಸ್

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.