“ಕ್ರೀಡೆಯಲ್ಲಿ ಆತ್ಮವಿಶ್ವಾಸ ವಿಕಸನಗೊಳಿಸುವ ಶಕ್ತಿ’
Team Udayavani, Feb 28, 2019, 12:30 AM IST
ಬೆಳ್ತಂಗಡಿ: ಹತೋಟಿಗೆ ಸಿಗದ ಮನಸ್ಸಿನ ವೇಗವನ್ನು ನಿಯಂತ್ರಿಸಬಲ್ಲ ಶಕ್ತಿ ಕ್ರೀಡೆಗಿದೆ. ಆತ್ಮವಿಶ್ವಾಸ ಉದ್ದೀಪನಗೊಳಿಸಬಲ್ಲ ಸಾಮರ್ಥ್ಯ ಕೂಡ ಕ್ರೀಡೆಗಿದೆ ಎಂದು ಧರ್ಮಪ್ರಾಂತದ ಧರ್ಮಾಧ್ಯಕ್ಷ, ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿ ಅಧ್ಯಕ್ಷ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅಭಿಪ್ರಾಯಪಟ್ಟರು.
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬುಧವಾರ ನೂತನವಾಗಿ ನಿರ್ಮಾಣಗೊಂಡ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿದ ಅವರು ಶಾಲೆಯ ಪ್ರತಿ ಅಭಿವೃದ್ಧಿ ಕಾರ್ಯಗಳು ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿರುತ್ತವೆ. ಕಾಲೇಜು ಆವರಣದಲ್ಲಿ ಸಾಧನೆಗೆ ಪೂರಕ ಅವಕಾಶ ಒದಗಿಸಲಾಗಿದ್ದು, ಸದುಪಯೋಗಿಸುವ ಕೆಲಸ ನಿಮ್ಮದು ಎಂದು ಕಿವಿಮಾತು ಹೇಳಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರುವ ಕ್ರಿಯಾತ್ಮಕತೆಯನ್ನು ಪ್ರಾಮಾಣಿಕವಾಗಿ ಗುರುತಿಸುವ ಕೆಲಸ ಕಾಲೇಜು ಮಾಡುತ್ತಿದೆ. ಶಾಸಕ ಅನುದಾನದಲ್ಲಿ ಕ್ರೀಡಾಂಗಣಕ್ಕೆ 5 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದ ಅವರು ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡುವ ಭರವಸೆಯಿತ್ತರು.
ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಮಾತನಾಡಿ, ಕ್ರೀಡಾಭ್ಯಾಸದಿಂದ ಮನಃಸ್ಥಿತಿ ಸುಧಾರಣೆ ಜತೆಗೆ ಆರೋಗ್ಯ ಕಾಪಾಡಲು ಸಾಧ್ಯ ಎಂದರು. ಶಾಸಕ ಅನುದಾನದಲ್ಲಿ 5ಲಕ್ಷ ರೂ. ನೀಡುವುದಾಗಿ ತಿಳಿಸಿದರು. ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಫಾ| ಆ್ಯಂಟೊನಿ ಸೇರಾ ಶುಭಹಾರೈಸಿದರು.
ಸಮ್ಮಾನ
ಕಾಲೇಜು ವತಿಯಿಂದ ಧರ್ಮಾಧ್ಯಕ್ಷ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಹಾಗೂ ಒಳಾಂಗಣ ಕ್ರೀಡಾಂಗಣ ರೂವಾರಿಗಳಾದ ಎಂಜಿನಿಯರ್, ವಿನ್ಯಾಸಕಾರರು ಸಹಿತ ಪ್ರಮುಖ ಕೆಲಸಗಾರರು, ಪೋಷಕ ಪ್ರತಿನಿಧಿಗಳು, ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಎಲಿಯಾಸ್ ಪಿಂಟೋ, ದಾನಿಗಳನ್ನು ಸಮ್ಮಾನಿಸಲಾಯಿತು.
ಅಮ್ಮೆಂಬಳ ಸೈಂಟ್ ತೋಮಸ್ ಚರ್ಚ್‌ನ ಧರ್ಮಗುರು ವಂ| ಲಾರೆನ್ಸ್ ಮಸ್ಕರೇನ್ಹಸ್, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಂ| ಜೊರೋಮ್ ಡಿ’ಸೋಜಾ, ಮಡಂತ್ಯಾರು ಗ್ರಾ. ಪಂ. ಅಧ್ಯಕ್ಷ ಗೋಪಾಲಕೃಷ್ಣ ಕೆ., ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾ, ಮಾಧವ ಗೌಡ, ರಾಜಶೇಖರ್ ಶೆಟ್ಟಿ, ರೊನಾಲ್ಡ್ ಸಿಕ್ವೇರಾ ಉಪಸ್ಥಿತರಿದ್ದರು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಯ ಸಂಚಾಲಕ ವಂ| ಬೇಸಿಲ್ ವಾಸ್ ಸ್ವಾಗತಿಸಿದರು. ಕಾಲೇಜು ಶಿಕ್ಷಕ ಜೋಸೇಫ್ ನಿರೂಪಿಸಿದರು.
ಆಸ್ಪತ್ರೆ ಬದಲು ಕ್ರೀಡಾಂಗಣಕ್ಕೆ ಸಿಗಲಿ ಪ್ರಾಶಸ್ತ್ಯ
ಸಾವಿರಾರು ಆಸ್ಪತ್ರೆ ನಿರ್ಮಿಸುವ ಹೊರತಾಗಿ ಹತ್ತಾರು ಕ್ರೀಡಾಂಗಣ ತೆರೆಯುವ ಕೆಲಸ ಸಮಾಜದಿಂದ ಆಗಬೇಕಿದೆ. ಆರೋಗ್ಯ ಸಂರಕ್ಷಣೆಗಾಗಿ ಜನ ಸಮಯ ಮೀಸಲಿರಿಸದ ಪರಿಣಾಮ ಸಣ್ಣ ವಯಸ್ಸಿಗೇ ಕಾಯಿಲೆ ಆಕ್ರಮಿಸುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕ್ರೀಡಾಂಗಣ ಅತ್ಯವಶ್ಯ. ಕರಾವಳಿ ಪ್ರದೇಶದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಕುರಿತು ಸರಕಾರ ಗಮನಹರಿಸಬೇಕಿದೆ ಎಂದು ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಕಿಶೋರ್ ಕುಮಾರ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.