ಚುನಾವಣೆ ಸಂದರ್ಭದ ಭರವಸೆ ಈಡೇರಿಕೆ: ಖಾದರ್‌


Team Udayavani, Oct 31, 2017, 11:56 AM IST

31-Mng–8.jpg

ಬಾಳೆಪುಣಿ: ವಿಟ್ಲ ಕ್ಷೇತ್ರದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳು ಪ್ರಸ್ತುತ ಮಂಗಳೂರು ಕ್ಷೇತ್ರಕ್ಕೊಳಪಟ್ಟಿದ್ದು, ಈ ಗ್ರಾಮಗಳ ಜನರ ಬೇಡಿಕೆಯಂತೆ ಹಂತ ಹಂತ ವಾಗಿ ರಸ್ತೆಯ ಅಭಿವೃದ್ಧಿಯನ್ನು ನಡೆಸುವ ಮೂಲಕ ಚುನಾವಣೆ ಸಂದರ್ಭ ನೀಡಿದ ಭರವಸೆ ಈಡೇರಿಸುವ ಕಾರ್ಯ ಆಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಅಭಿಪ್ರಾಯಪಟ್ಟರು.

ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮ ಪಂಚಾಯತ್‌ನ ಕೈರಂಗಳ ಗ್ರಾಮದ ಮೋಂಟುಗೋಳಿ- ಬಾಕಿ ಮಾರ್‌ ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ ಶನಿವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಲ್ಲಿ ರಾಜ್ಯ ಸರಕಾರ ಯಶಸ್ವಿಯಾಗಿದೆ. ಆದರೆ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಅದರ ಗುಣಮಟ್ಟವನ್ನು ಅವಲೋಕಿಸುವ ಕಾರ್ಯ ಸ್ಥಳೀಯರಿಂದ ಆಗಬೇಕಾಗಿದೆ ಎಂದರು. ಈ ನಿಟ್ಟಿನಲ್ಲಿ ಜನರು ಕಾಮಗಾರಿಯ ಸಂದರ್ಭದಲ್ಲಿ ಸಂಯಮದಿಂದ ವರ್ತಿಸಿ ಕಾಮಗಾರಿಯ ಗುಣಮಟ್ಟವನ್ನು ಪರೀಕ್ಷಿಸುವ ಕಾರ್ಯ ಮಾಡಬೇಕು ಎಂದರು. ಹಿರಿಯರಾದ ಇಬ್ರಾಹಿಂ ಶಂಕುಸ್ಥಾಪನೆಗೈದರು. 

ಜಿಲ್ಲಾ ಪಂಚಾಯತ್‌ ಸದಸ್ಯೆ ಮಮತಾ ಗಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್‌ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮಾಜಿ ಸದಸ್ಯ ಉಮ್ಮರ್‌ ಪಜೀರ್‌, ಮುಡಿಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ ಕಾಜವ, ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಜಲೀಲ್‌ ಮೋಂಟುಗೋಳಿ, ಕಾಂಗ್ರೆಸ್‌ ಕಾರ್ಮಿಕ ಘಟಕಾಧ್ಯಕ್ಷ ನಾಸೀರ್‌ ನಡುಪದವು, ಯುವ ಕಾಂಗ್ರೆಸ್‌ ಕಾರ್ಯದರ್ಶಿ ಸಮೀರ್‌ ಪಜೀರ್‌, ಕೈರಂಗಳ ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಆಸಿಫ್‌, ನಝರ್‌ ಷಾ ಪಟ್ಟೋರಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು. ತಾ.ಪಂ. ಸದಸ್ಯ ಹೈದರ್‌ ಕೈರಂಗಳ ಸ್ವಾಗತಿಸಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.