‘ಕಾಂಗ್ರೆಸ್ ಸರಕಾರ ಕಿತ್ತೂಗೆಯಲು ನವಕರ್ನಾಟಕ ಯಾತ್ರೆ ಮುನ್ನುಡಿ’
Team Udayavani, Oct 28, 2017, 1:03 PM IST
ಉಳ್ಳಾಲ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಕುಂಠಿತಕ್ಕೆ ಕಾಂಗ್ರೆಸ್ ಸರಕಾರ ಕಾರಣವಾಗಿದ್ದು. ಈ ಸರಕಾರವನ್ನು ಕಿತ್ತೂಗೆದು, ಆ ಮೂಲಕ ನವ ಕರ್ನಾಟಕ ನಿರ್ಮಾಣಕ್ಕೆ ಮುನ್ನುಡಿಯಾಗಬೇಕು ಎಂದು ನವಕರ್ನಾಟಕ ಪರಿವರ್ತನಾ ಯಾತ್ರೆಯ ಜಿಲ್ಲಾ ಸಂಚಾಲಕ ಸತ್ಯಜಿತ್ ಸುರತ್ಕಲ್ ತಿಳಿಸಿದರು.
ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನ.2ರಂದು ಬೆಂಗಳೂರಿನ ನೆಲಮಂಗಲದಿಂದ ಹೊರಡಲಿರುವ ನವಕರ್ನಾಟಕ ಪರಿವರ್ತನಾ ಯಾತ್ರೆಯ ಕುರಿತು ಮಂಗಳೂರು ವಿಧಾನ ಸಭಾ ಕ್ಷೇತ್ರದ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ವಿಶೇಷ ಸಭೆ
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 75 ದಿನಗಳ ಕಾಲ ಸಂಚರಿಸಲಿರುವ ಈ ಯಾತ್ರೆಯು ರಾಜ್ಯದ ಅತೀ ದೊಡ್ಡ ಯಾತ್ರೆಯಾಗಲಿದೆ. ಕ್ಷೇತ್ರ ವ್ಯಾಪ್ತಿ ಯಾತ್ರೆ ಯಶಸ್ವಿಗೊಳಿಸುವ ಬಗ್ಗೆ ಶಕ್ತಿಕೇಂದ್ರವಾರು ವಿಶೇಷ ಸಭೆ ನಡೆಸಲು ಸೂಚಿಸಿದರು.
ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಾತನಾಡಿ, ಕ್ಷೇತ್ರದ 197 ಬೂತ್‌ನಿಂದ ತಲಾ
ಮೂವರಂತೆ ಸುಮಾರು 600 ಯುವ ಕಾರ್ಯಕರ್ತರು ಬೆಂಗಳೂರಿನಲ್ಲಿ ನಡೆಯುವ ಬೈಕ್ ರ‍್ಯಾಲಿಯಲ್ಲಿ
ಭಾಗವಹಿಸಲಿದ್ದಾರೆ ಎಂದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರ. ಕಾರ್ಯದರ್ಶಿಗಳಾದ ಮೋಹನ್ ರಾಜ್ ಕೆ.ಆರ್., ಮನೋಜ್ ಆಚಾರ್ಯ ಉಪಸ್ಥಿತರಿದ್ದರು.
ಕ್ಷೇತ್ರ, ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾದ ಪ್ರಮುಖರು, ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಪ್ರಮುಖ
ಕಾರ್ಯಕರ್ತರು ಭಾಗವಹಿಸಿದ್ದರು.
ಮೋದಿ ಕಾರ್ಯಕ್ರಮಕ್ಕೆ 3000 ಕಾರ್ಯಕರ್ತರು
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಮಂಗಳೂರು
ವಿಧಾನಸಭಾ ಕ್ಷೇತ್ರದಿಂದ 3 ಸಾವಿರಕ್ಕೂ ಅಧಿಕ ಬಿ.ಜೆ.ಪಿ. ಕಾರ್ಯಕರ್ತರು ಭಾಗವಹಿಸಲಿದ್ದಾರೆ.
– ಸಂತೋಷ್ ಕುಮಾರ್ ಕ್ಷೇತ್ರಾಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.