ಮಾ.9: ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
Team Udayavani, Mar 7, 2023, 6:12 AM IST
ಮಂಗಳೂರು: ಕೆಎಸ್‌ಡಿಎಲ್ ಟೆಂಡರ್ ಲಂಚ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು, ಭ್ರಷ್ಟಾಚಾರ ಆರೋಪಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾ. 9ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ಇಂತಹ ಭ್ರಷ್ಟ ಸರಕಾರವನ್ನು ನೋಡಿಯೇ ಇರಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲರನ್ನೂ ಮೀರಿಸುವಷ್ಟು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯವರು ಸುಳ್ಳಿನ ಫ್ಯಾಕ್ಟರಿಯನ್ನೇ ಸ್ಥಾಪನೆ ಮಾಡಿಕೊಂಡಿದ್ದಾರೆ. ಪ್ರತೀ ಬಾರಿಯೂ ಬೊಮ್ಮಾಯಿ, ಹಿಂದೆಯೂ ಭ್ರಷ್ಟಾಚಾರ ನಡೆದಿದೆ ಎಂದು ಹೇಳುವ ಮೂಲಕ ತಮ್ಮನ್ನು ತಾವು ಸಮರ್ಥನೆ ಮಾಡಿಕೊಳ್ಳುತ್ತಾರೆ. ಇಷ್ಟು ದಿನ ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಏನು ಮಾಡುತ್ತಿದ್ದರು, ಭ್ರಷ್ಟಾಚಾರ ನಡೆದಿದ್ದರೆ ಅದನ್ನು ತನಿಖೆ ನಡೆಸಬಹುದಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಭ್ರಷ್ಟಾಚಾರಕ್ಕೆ ದಾಖಲೆ ಕೊಡಿ ಎಂದು ಸಿಎಂ ಈವರೆಗೂ ಕೇಳುತ್ತಿದ್ದರು. ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ 8 ಕೋ.ರೂ.ಗೂ ಅಧಿಕ ಮೊತ್ತ ವಶಪಡಿಸಿಕೊಂಡಿರುವುದು, ಪ್ರಶಾಂತ್‌ನನ್ನು ಬಂಧಿಸಿರುವುದು ಕಣ್ಣೆದುರೇ ಇದೆ. ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಸಾಕ್ಷ್ಯ ಬೇಕೇ? ಮುಖ್ಯಮಂತ್ರಿ ಬೊಮ್ಮಾಯಿ ತತ್‌ಕ್ಷಣವೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಹರೀಶ್ ಕುಮಾರ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.