ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, Oct 13, 2017, 1:40 PM IST
ಬಂಟ್ವಾಳ: ರೈತರಿಗೆ ಸ್ವಾಭಿಮಾನದ ಬದುಕು ನೀಡಿದ್ದು ಕಾಂಗ್ರೆಸ್. ರಾಜ್ಯದಲ್ಲಿ ಭೂಮಿಯ ಒಡೆತನ ನೀಡಿದವರು ಇಂದಿರಾ ಗಾಂಧಿಯವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಅ. 12ರಂದು ಬಿ.ಸಿ.ರೋಡ್ನಲ್ಲಿ ಕಿಸಾನ್ ಕಾಂಗ್ರೆಸ್ ಘಟಕ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕೇಂದ್ರ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ಸಂಘಟಿಸಲಾದ ಪ್ರತಿಭಟನೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಆಶ್ರಯ ಯೋಜನೆ ಮೂಲಕ ಕನಿಷ್ಠ ಐದು ಸೆಂಟ್ಸ್ ಜಮೀನು ನೀಡಿದ್ದು ಕಾಂಗ್ರೆಸ್. ಇಂದು 94ಸಿ ಅಡಿಯಲ್ಲಿ ಬಂಟ್ವಾಳ ತಾಲೂಕಿನಲ್ಲಿ 18 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು ಇದು ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು. ಅದರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಅರ್ಜಿಗಳಿಗೆ ಮಂಜೂರಾತಿ ನೀಡಿದೆ. ಇನ್ನುಳಿದ ಅರ್ಜಿಗಳಿಗೆ ರಾಜ್ಯ ಮುಖ್ಯಮಂತ್ರಿಯವರು ಬಂಟ್ವಾಳಕ್ಕೆ ಆಗಮಿಸುವ ಸಂದರ್ಭದಲ್ಲಿ ವಿತರಿಸಲಾಗುವುದು ಎಂದು ಅವರು ಹೇಳಿದರು.
ಬೆಂಬಲ ಬೆಲೆ ಏನಾಯಿತು?
ಜೀತ ಪದ್ಧತಿ ರದ್ದತಿ, ಋಣ ಪರಿಹಾರ ಕಾಯ್ದೆ, ಬ್ಯಾಂಕ್ ರಾಷ್ಟ್ರೀಕರಣ ಮಾಡಿದ್ದು ಕಾಂಗ್ರೆಸ್. ರೈತರ ಪರವಾಗಿ ಇರುವವರು ಎಂದು ಹೇಳಿಕೊಂಡ ಕೇಂದ್ರ ಸರಕಾರ ಇತ್ತೀಚೆಗೆ ಅಡಿಕೆಗೆ ಬೆಂಬಲ ಬೆಲೆ ಘೋಷಿಸಿತ್ತು. ಆದರೆ ಅದು ಯಾರಿಗೆ ಸಿಕ್ಕಿದೆ, ಎಲ್ಲಿ ಹೋಯಿತು. ಅದು ಬಿಜೆಪಿಯವರ ಕಿಸೆಗೆ ಸೇರಿದೆಯೇ ಎಂದು ಸಚಿವರು ಪ್ರಶ್ನಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.