ಕರಾವಳಿ: ನಿರೀಕ್ಷೆಯಂತೆ ಟಿಕೆಟ್‌ ಹಂಚಿಕೆ


Team Udayavani, Apr 16, 2018, 7:45 AM IST

Congress-Party-Logo-650.jpg

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್‌ ತನ್ನ ಎಲ್ಲ ಹಾಲಿ ಶಾಸಕರನ್ನು ಮತ್ತೆ ಟಿಕೆಟ್‌ ನೀಡಿ ಕಣಕ್ಕಿಳಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿ ಜಿಲ್ಲೆಗಳ ಪ್ರವಾಸ ಸಂದರ್ಭ ನೀಡಿದ್ದ ಭರವಸೆ ಈಡೇರಿದೆ. ಉಭಯ ಜಿಲ್ಲೆಗಳಲ್ಲಿ ಕುಂದಾಪುರ ಕ್ಷೇತ್ರ ಬಿಟ್ಟು ಹೊಸ ಮುಖಗಳಿಗೆ ಟಿಕೆಟ್‌ ಲಭಿಸಿಲ್ಲ.

ಮಂಗಳೂರು ಕ್ಷೇತ್ರದಲ್ಲಿ ಯು.ಟಿ. ಖಾದರ್‌, ಮಂಗಳೂರು ದಕ್ಷಿಣದಲ್ಲಿ ಜೆ.ಆರ್‌. ಲೋಬೊ, ಮಂಗಳೂರು ಉತ್ತರದಲ್ಲಿ ಬಿ.ಎ. ಮೊದಿನ್‌ ಬಾವಾ, ಬಂಟ್ವಾಳದಲ್ಲಿ ಬಿ. ರಮಾನಾಥ ರೈ, ಮೂಡಬಿದಿರೆಯಲ್ಲಿ ಕೆ. ಅಭಯಚಂದ್ರ ಜೈನ್‌, ಬೆಳ್ತಂಗಡಿಯಲ್ಲಿ ಕೆ. ವಸಂತ ಬಂಗೇರ, ಪುತ್ತೂರಿನಲ್ಲಿ ಶಕುಂತಳಾ ಶೆಟ್ಟಿ ಅವರಿಗೆ ನಿರೀಕ್ಷೆಯಂತೆಯೇ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಸುಳ್ಯದಲ್ಲಿ ಡಾ| ರಘು ಅವರನ್ನು ಈ ಬಾರಿಯೂ ಕಣಕ್ಕಿಳಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲೂ ನಿರೀಕ್ಷೆಯಂತೆಯೇ ಎಲ್ಲ ಹಾಲಿ ಶಾಸಕರನ್ನು ಕಾಂಗ್ರೆಸ್‌ ಮರಳಿ ಕಣಕ್ಕಿಳಿಸಿದೆ. ಉಡುಪಿಯಲ್ಲಿ ಪ್ರಮೋದ್‌ ಮಧ್ವರಾಜ್‌, ಕಾಪು ಕ್ಷೇತ್ರದಲ್ಲಿ ವಿನಯ ಕುಮಾರ್‌ ಸೊರಕೆ, ಬೈಂದೂರಿನಲ್ಲಿ ಗೋಪಾಲ ಪೂಜಾರಿ ಅವರಿಗೆ ಟಿಕೆಟ್‌ ಲಭಿಸಿದೆ. ಕುಂದಾಪುರದಲ್ಲಿ ರಾಜ್ಯ ಇಂಟಕ್‌ ನಾಯಕ ರಾಕೇಶ್‌ ಮಲ್ಲಿ ಟಿಕೆಟ್‌ ಪಡೆದಿದ್ದಾರೆ.

ಮೂಡಬಿದಿರೆ, ಪುತ್ತೂರು, ಕಾರ್ಕಳ: ಕುತೂಹಲಕ್ಕೆ ತೆರೆ
ಕಾರ್ಕಳ ಕ್ಷೇತ್ರದಲ್ಲಿ ಮಾಜಿ ಶಾಸಕ, ಕಳೆದ ಬಾರಿಯ ಸ್ಪರ್ಧಿ ಗೋಪಾಲ ಭಂಡಾರಿ ಅವರಿಗೆ ಟಿಕೆಟ್‌ ನೀಡಿ ಕುತೂಹಲಕ್ಕೆ ತೆರೆ ಎಳೆಯಲಾಗಿದೆ. ಇಲ್ಲಿ ಗೋಪಾಲ ಭಂಡಾರಿ, ವೀರಪ್ಪ ಮೊಯಿಲಿ ಪುತ್ರ ಹರ್ಷ ಮೊಯಿಲಿ, ಜಿಲ್ಲಾ ಉಪಾಧ್ಯಕ್ಷ ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಹೆಸರುಗಳಿದ್ದವು. ಮೂಡಬಿದಿರೆ, ಪುತ್ತೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕುರಿತು ಕುತೂಹಲ ಮೂಡಿತ್ತು. ಮೂಡಬಿದಿರೆಯಲ್ಲಿ ಹಾಲಿ ಶಾಸಕ ಅಭಯಚಂದ್ರ ಸ್ಥಾನ ಬಿಟ್ಟು ಕೊಡಲು ಸಿದ್ಧ ಎಂಬ ವರದಿ ಹಿನ್ನೆಲೆಯಲ್ಲಿ ಐವನ್‌ ಡಿ’ಸೋಜಾ, ಮಿಥುನ್‌ ರೈ, ಕವಿತಾ ಸನಿಲ್‌  ಅತ್ತ ಗಮನ ಹರಿಸಿದ್ದರು. ಪುತ್ತೂರಿನಲ್ಲಿ ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್‌ ನೀಡುವುದಕ್ಕೆ ಒಂದು ಬಣದಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ಪಕ್ಷ ಶಕುಂತಳಾ ಶೆಟ್ಟಿ ಅವರ ಮೇಲೆ ವಿಶ್ವಾಸ ಇರಿಸಿ ಅವರನ್ನು ಆಯ್ಕೆ ಮಾಡಿದೆ.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.