Congress ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ: ಡಾ| ನಾಸಿರ್ ಹುಸೇನ್
Team Udayavani, Oct 20, 2023, 11:52 PM IST
ಮಂಗಳೂರು: ಪಕ್ಷದಿಂದ ನಡೆಸಿರುವ ಆಂತರಿಕ ಸಮೀಕ್ಷೆ ಪ್ರಕಾರ ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದ್ದು, ಇದು 2024ರ ಲೋಕಸಭೆ ಚುನಾವಣೆಗೂ ದೊಡ್ಡ ಉತ್ತೇಜನ ನೀಡಲಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ರಾಜ್ಯಸಭಾ ಸದಸ್ಯ ಡಾ| ಸೈಯದ್ ನಾಸಿರ್ ಹುಸೇನ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿ, ಬಿಜೆಪಿಯವರು ದ್ವೇಷ ರಾಜಕಾರಣ ನಡೆಸಿದರೂ ನಾವು ನಿರುದ್ಯೋಗ, ಬಡತನ, ಬೆಲೆಏರಿಕೆ, ಭ್ರಷ್ಟಾಚಾರ ವಿರುದ್ಧದ ನಿಲುವು, ಮಣಿಪುರ ಹಿಂಸಾಚಾರ, ಅದಾನಿ ವಿಷಯಗಳ ಆಧಾರದಲ್ಲಿ ವಿಚಾರ ಪ್ರಸ್ತುತಪಡಿಸುತ್ತೇವೆ. ಇದು ಮುಂದಿನ ಚುನಾವಣೆಗಳಲ್ಲಿ ಸಕಾರಾತ್ಮಕ ಪರಿಣಾಮ ಬೀರಲಿದೆ. ಭಾರತ್ ಜೋಡೊ ಯಾತ್ರೆಯ ಫಲವಾಗಿ ಹಿಮಾಚಲ ಪ್ರದೇಶ, ಕರ್ನಾಟಕದಲ್ಲಿ ಗೆದ್ದಿದೇವೆ. ಅದೇ ರೀತಿ ಮಿಜೋರಾಂ ಸಹಿತ ಎಲ್ಲ ಐದೂ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಪಡೆಯುವುದು ನಿಶ್ಚಿತ ಎಂದು ಪ್ರತಿಪಾದಿಸಿದರು.
ಕರಾವಳಿಯಲ್ಲಿ ಕೋಮು ಆಧಾರದ ಧ್ರುವೀಕರಣವನ್ನು ಕಾಂಗ್ರೆಸ್ ಸರಕಾರ ಸಹಿಸುವುದಿಲ್ಲ. ಕಾನೂನನ್ನು ಕಠಿನವಾಗಿ ಕಾರ್ಯರೂಪಕ್ಕೆ ತರಲಿದ್ದೇವೆ. ಅನೈತಿಕ ಪೊಲೀಸ್‌ಗಿರಿ, ದ್ವೇಷ ಭಾಷಣ, ದ್ವೇಷದ ಕೃತ್ಯಗಳನ್ನು ನಿಲ್ಲಿಸದಿದ್ದರೆ ಕರಾವಳಿ ಪ್ರದೇಶ ಈ ಹಿಂದಿನಂತೆ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಇಲ್ಲಿ ಹೂಡಿಕೆಗೂ ಯಾರೂ ಬರುವುದಿಲ್ಲ. ಅದಕ್ಕಾಗಿ ಈ ಭಾಗದಲ್ಲಿ ಶಾಂತಿ ಸ್ಥಾಪನೆಯ ಉದ್ದೇಶ ಹೊಂದಿದ್ದು ಕಾಂಗ್ರೆಸ್ ಪಕ್ಷವನ್ನೂ ಮತ್ತೆ ಕಟ್ಟುವ ಕಾರ್ಯ ಮಾಡುತ್ತಿದ್ದೇವೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಅಬ್ದುಲ್ ಜಬ್ಟಾರ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಐವನ್ ಡಿ’ಸೋಜಾ, ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಇನಾಯತ್ ಆಲಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Train; ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ?
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.