ಭವ್ಯ ರಾಮ ಮಂದಿರ ನಿರ್ಮಾಣ: ಪೇಜಾವರ ಶ್ರೀ
Team Udayavani, Feb 22, 2020, 6:28 AM IST
ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮ ಮಂದಿರವು ಶತ ಶತಮಾನಗಳ ಕಾಲ ಶಾಶ್ವತವಾಗಿ ಉಳಿಯಬೇಕೆಂಬ ಹಿನ್ನೆಲೆಯಲ್ಲಿ ಕಟ್ಟಡವನ್ನು ಯೋಜನಾಬದ್ಧವಾಗಿ, ಸದೃಢವಾಗಿ, ಭವ್ಯವಾಗಿ ನಿರ್ಮಿಸಲಾಗುವುದು ಎಂದು ರಾಮ ಮಂದಿರ ಟ್ರಸ್ಟ್‌ನ ಸದಸ್ಯರಾಗಿರುವ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.
ಹೊಸದಿಲ್ಲಿಯಲ್ಲಿ ಬುಧವಾರ ನಡೆದ ರಾಮ ಮಂದಿನ ಟ್ರಸ್ಟ್‌ನ ಮೊದಲ ಸಭೆಯಲ್ಲಿ ಭಾಗವಹಿಸಿ ವಾಪಸಾದ ಶ್ರೀಗಳು, ಗುರುವಾರ ಪೇಜಾವರದ ಮೂಲ ಮಠ ಮತ್ತು ಶುಕ್ರವಾರ ಬೆಳಗ್ಗೆ ಕಣ್ವತೀರ್ಥದಲ್ಲಿರುವ ಉಪ ಮಠಕ್ಕೆ ಭೇಟಿ ನೀಡಿದರು. ಬಳಿಕ ಮಧ್ಯಾಹ್ನ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ರಾಮ ಮಂದಿರ ಟ್ರಸ್ಟ್‌ನಲ್ಲಿ
ನಾನು ದಕ್ಷಿಣ ಭಾರತ ಪ್ರತಿನಿಧಿಯಾಗಿ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ದಕ್ಷಿಣ ಭಾರತದ ಎಲ್ಲ ಆಸ್ತಿಕರ ಸಹಕಾರ ಬೇಕು ಎಂದು ಶ್ರೀಗಳು ಹೇಳಿದರು.
ಮಂದಿರ ನಿರ್ಮಾಣಕ್ಕೆ ಬೇಕಾಗಿರುವ ನಿಧಿ ಸಂಚಯನಕ್ಕಾಗಿ ಅಯೋಧ್ಯೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಖಾತೆಯನ್ನು ತೆರೆಯಲಾಗುವುದು. ಬಳಿಕ ಖಾತೆ ಸಂಖ್ಯೆಯನ್ನು ಸಾರ್ವಜನಿಕರಿಗೆ ನೀಡಲಾಗುವುದು. ಸಾರ್ವಜನಿಕರು ತಮ್ಮ ದೇಣಿಗೆಯನ್ನು ಈ ಖಾತೆಗೆ ಸಂದಾಯ ಮಾಡಬಹುದಾಗಿದೆ. ಪೇಜಾವರ ಮಠದ ಹೆಸರಿನಲ್ಲಿ 5 ಲಕ್ಷ ರೂ. ಗಳನ್ನು ತಾನು ದಿಲ್ಲಿಯಲ್ಲಿ ಹಸ್ತಾಂತರಿಸಿದ್ದೇನೆ ಎಂದು ಸ್ವಾಮೀಜಿ ವಿವರಿಸಿದರು.
ರಾಮನವಮಿ ದಿನ ಶಿಲಾನ್ಯಾಸ ನೆರವೇರಿಸಲು ಉದ್ದೇಶಿಸಿದ್ದರೂ ಅಂದು 15ರಿಂದ 20 ಲಕ್ಷ ಜನರು ಅಯೋಧ್ಯೆಯಲ್ಲಿ ಸೇರುವ ನಿರೀಕ್ಷೆ ಇರುವುದರಿಂದ ಅಂದು ಶಂಕುಸ್ಥಾಪನೆ ಬೇಡವೆಂದು ಅಭಿಪ್ರಾಯ ಪಡಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.
ರಾಮನವಮಿ ದಿನದಂದು ಪ್ರತಿ ಜಿಲ್ಲೆಯಲ್ಲಿ ರಾಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ವಿಶ್ವ ಹಿಂದೂ ಪರಿಷತ್ತಿನ ಪ್ರಾಂತೀಯ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್ ತಿಳಿಸಿದರು. ಪ್ರದೀಪ್ ಕುಮಾರ್ ಕಲ್ಕೂರ, ಕಾರ್ಪೊರೇಟರ್ ಶಕೀಲಾ ಕಾವ ಉಪಸ್ಥಿತರಿದ್ದರು.
ರಾಮ ನಾಮ ಜಪ, ಭಜನೆ
ಹಿಂದೂ ಸಂಸ್ಕೃತಿಯ ಪುನರುಜ್ಜೀವನ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ರಾಮ ಮಂದಿರ ನಿರ್ಮಾಣ ಸಾಂಕೇತಿಕ ಮಾತ್ರ. ಸಾತ್ವಿಕ ಬಲವಾಗಿ ಮನೆ ಮನೆಗಳಲ್ಲಿ 108 ರಾಮ ನಾಮ ಜಪ, ಭಜನೆ, ರಾಮಾಯಣ ವಾಚನ ಮತ್ತು ಪ್ರವಚನ ನಡೆಯಬೇಕು. ಈ ವಿಷಯವನ್ನು ಸಭೆಯಲ್ಲಿ ನಾನೇ ಪ್ರಸ್ತಾವಿಸಿದ್ದು, ಅದಕ್ಕೆ ಒಪ್ಪಿಗೆ ಲಭಿಸಿದೆ ಎಂದರು. ಅಯೋಧ್ಯೆಯಲ್ಲಿ ಪ್ರಸ್ತುತ 67 ಎಕರೆ ಜಮೀನು ಲಭ್ಯವಿದ್ದು, ಮುಂದೆ ಸುತ್ತಮುತ್ತಲಿನ ಹೆಚ್ಚುವರಿ ಜಮೀನನ್ನು ಪಡೆಯವುದಕ್ಕೆ ಟ್ರಸ್ಟ್ ಪ್ರಯತ್ನಿಸಲಿದೆ ಎಂದು ಪೇಜಾವರ ಸ್ವಾಮೀಜಿ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.