Mangaluru ತಾಲೂಕು ಮಟ್ಟದಲ್ಲಿ ಬಾಲಭವನ ಕಟ್ಟಡ ನಿರ್ಮಾಣ: ಜಿ.ಪಂ. ಸಿಇಒ
ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
Team Udayavani, Aug 10, 2024, 12:26 AM IST
ಮಂಗಳೂರು: ಮಕ್ಕಳ ಪ್ರತಿಭೆ ಯನ್ನು ಪ್ರೋತ್ಸಾಹಿಸಲು ಹಾಗೂ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲಿ ಬಾಲಭವನ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದು ದ.ಕ. ಜಿ.ಪಂ. ಮುಖ್ಯ ಕಾರ್ಯ ನಿರ್ವಾ ಹಣಾಧಿಕಾರಿ ಡಾ| ಆನಂದ್ ಕೆ. ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಜರಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಮಂಗಳೂರು ಗ್ರಾಮಾಂತರ, ಮಂಗಳೂರು ನಗರ ಮತ್ತು ಸುಳ್ಯದಲ್ಲಿ ಇದಕ್ಕಾಗಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಮಂಗಳೂರು ನಗರದಲ್ಲಿ ಬಾಲ ಭವನದ ಕಟ್ಟಡ ದುರಸ್ತಿ ನಡೆಯುತ್ತಿದೆ. ಸ್ಮಾರ್ಟ್ ಸಿಟಿ ವತಿಯಿಂದ ಉಳಿದಿರು ವ ಕಾಮಗಾರಿಯನ್ನು ಪೂರ್ಣಗೊಳಿ ಸಲು ಸೂಚಿಸಿದರು.
ನಗರದ ಕದ್ರಿ ಉದ್ಯಾನವನದಲ್ಲಿರುವ ಪುಟಾಣಿ ರೈಲು ದುರಸ್ತಿಗೊಂಡಿದ್ದು, ಮಳೆ ಕಡಿಮೆಯಾದ ಬಳಿಕ ಮತ್ತೆ ಓಡಾಟ ನಡೆಸಲಿದೆ ಎಂದರು.
ಗ್ರಾಮೀಣ ಹಂತದಲ್ಲಿ ನಡೆಯುವ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಭೆಗಳಲ್ಲಿ ಅತ್ಯಾಚಾರ, ವರ ದಕ್ಷಿಣೆ, ಬಾಲ್ಯ ವಿವಾಹ, ಕೌಟುಂಬಿಕ ಕಲಹ, ಮಹಿಳಾ ಶೋಷಣೆ ಮುಂತಾದ ಸಾಮಾಜಿಕ ಪಿಡುಗುಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಇಲಾಖೆ ಉಪನಿರ್ದೇಶಕ ಉಸ್ಮಾನ್ ಮಾತ ನಾಡಿ, 2024 ಎಪ್ರಿಲ್‌ನಿಂದ ಜೂನ್‌ವರೆಗೆ ಮಂಗಳೂರು ನಗರ ಮತ್ತು ಮಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ತಲಾ ಒಂದೊಂದು ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿದೆ. ಒಂದು ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿ ಒಂದು ವರ್ಷ ಜೈಲು ಶಿಕ್ಷೆ ವಿ ಧಿಸಲಾಗಿದೆ ಎಂದು ಹೇಳಿದರು.
ತಾಯಂದಿರ ಸಭೆ ಹಾಗೂ ಮಕ್ಕಳ ರಕ್ಷಣ ಸಮಿತಿ ಸಭೆಗಳಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಜೂ.21ರಿಂದ ಅ.4ರ ವರೆಗೆ 100 ದಿನಗಳ ವಿಶೇಷ ಕಾರ್ಯಕ್ರಮದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದರು.
ಬಾಲ್ಯ ವಿವಾಹದ ದುಷ್ಪರಿಣಾಮ: ಅರಿವು ಕಾರ್ಯಾಗಾರ
ಬಾಲ್ಯ ವಿವಾಹದ ದುಷ್ಪರಿಣಾಮಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಎಲ್ಲ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ, ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ತಾಯಂದಿರ ಸಭೆ, ಸ್ತ್ರೀಶಕ್ತಿ ಸಭೆ, ಬಾಲವಿಕಾಸ ಸಮಿತಿ ಸಭೆಗಳಲ್ಲಿ ಹಾಗೂ ಶಾಲಾ ಶಿಕ್ಷಕರಿಗೆ ಪಿಯುಸಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪನಿರ್ದೇಶಕ ಉಸ್ಮಾನ್ ಹೇಳಿದರು.
ಗೌರವಧನ ಹೆಚ್ಚಳಕ್ಕೆ ಮನವಿ
ಜಿಲ್ಲೆಯಲ್ಲಿರುವ ಸಾಂತ್ವನ ಕೇಂದ್ರಗಳ ಸಿಬಂದಿ ಪಾಳಿಯಲ್ಲಿ ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದು, ಹಲವಾರು ವರ್ಷಗಳಿಂದ ಗೌರವಧನ ಹೆಚ್ಚಾಗದ ಕಾರಣ ಸಿಬಂದಿ ಗೌರವಧನವನ್ನು ಹೆಚ್ಚಿಸುವಂತೆ ಸಭೆಯಲ್ಲಿ ಮನವಿ ಸಲ್ಲಿಸಿದರು. ಮಹಿಳೆಯರ ಸಬಲೀಕರಣಕ್ಕಾಗಿ ಹುಟ್ಟಿಕೊಂಡಿರುವ ಸ್ತ್ರೀಶಕ್ತಿ ಸಂಘಗಳಲ್ಲಿ ಸ್ತ್ರೀಶಕ್ತಿ ಸಹಕಾರಿ ಬ್ಯಾಂಕ್‌ಗಳಿಗೆ ಸರಕಾರದಿಂದ ಕಡಿಮೆ ಬಡ್ಡಿಯಲ್ಲಿ ಠೇವಣಿ ನೀಡಬೇಕು. ಇದರಿಂದ ಹಲವಾರು ಮಹಿಳೆಯರಿಗೆ ಹೆಚ್ಚಿನ ಸಾಲವನ್ನು ನೀಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಸ್ತ್ರೀಶಕ್ತಿ ಸಂಘದ ಪದಾ ಧಿಕಾರಿಗಳು ಸಭೆಯಲ್ಲಿ ಅಧ್ಯಕ್ಷರ ಮೂಲಕ ಸರಕಾರಕ್ಕೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.