ಜಪ್ಪು ಮಾರ್ಕೆಟ್ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ
Team Udayavani, Jan 4, 2018, 9:55 AM IST
ಮಹಾನಗರ: ತೀರಾ ಹದಗೆಟ್ಟಿದ್ದ ಜಪ್ಪು ಮಾರ್ಕೆಟ್ ರಸ್ತೆಗೆ ಈ ಹಿಂದೆ 40 ಲಕ್ಷ ರೂ.ಗಳ ಕಾಂಕ್ರೀಟ್ ಕಾಮಗಾರಿ
ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಪ್ರಸ್ತುತ 45 ಲಕ್ಷ ರೂ.ಗಳಲ್ಲಿ ಕಾಮಗಾರಿ ನಡೆಯಲಿದೆ. ಇದೇ ರೀತಿ ಮನಪಾ ವ್ಯಾಪ್ತಿಯ ಇತರ ರಸ್ತೆಗಳ ಅಭಿವೃದ್ಧಿಗೂ ಗಮನ ಹರಿಸಲಾಗಿದೆ ಎಂದು ಮೇಯರ್ ಕವಿತಾ ಸನಿಲ್
ಹೇಳಿದರು. ಬುಧವಾರ ನಗರದ ಜಪ್ಪು ಮಾರ್ಕೆಟ್ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಈ ಹಿಂದೆ ರಸ್ತೆಗೆ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಅವರಿಗೆ ನೀಡಿದ ಭರವಸೆಯಂತೆ ಕಾಮಗಾರಿ ನಡೆಯಲಿದೆ ಎಂದರು. ಮನಪಾ ಉಪಮೇಯರ್ ರಜನೀಶ್ ಕಾಪಿಕಾಡ್, ಮುಖ್ಯಸಚೇತಕ ಎಂ. ಶಶಿಧರ್ ಹೆಗ್ಡೆ, ಸ್ಥಾಯೀ ಸಮಿತಿ ಅಧ್ಯಕ್ಷ ಅಬ್ದುಲ್ ರವೂಫ್, ರತಿಕಲಾ, ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.