ನಿರಂತರ ಮಳೆ : ಕಡಿತದ ಭೀತಿಯಲ್ಲಿ ಮುನ್ನೂರು-ಅಂಬ್ಲಿಮೊಗರು ರಸ್ತೆ 

Team Udayavani, Jun 22, 2018, 1:08 PM IST

22-june-12.jpg

ಉಳ್ಳಾಲ: ಅಂಬ್ಲಿಮೊಗರು – ಮುನ್ನೂರು ಸಂಪರ್ಕಿಸುವ ಅಂಬ್ಲಿ ಮೊಗರು ಅಡು (ಬಸ್ತಿಪಡ್ಪು ) ಬಳಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಮಂದಗತಿಯಲ್ಲಿ ಮುಂದುವರಿದಿದೆ. ಕಾಮಗಾರಿಯ ಹಿನ್ನೆಲೆಯಲ್ಲಿ ಈ ಪ್ರದೇಶದ ಜನರಿಗೆ ನಿರ್ಮಿಸಿರುವ ಪರ್ಯಾಯ ರಸ್ತೆ ಕಳೆದೆರಡು ದಿನಗಳಿಂದ ಸುರಿಯು ತ್ತಿರುವ ಮಳೆಗೆ ಎರಡನೇ ಬಾರಿಗೆ ಮುಚ್ಚುವ ಭೀತಿಯಲ್ಲಿದ್ದು, ಸೇತುವೆ ಕಾಮಗಾರಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಂಚಾರಕ್ಕೆ ಮುಕ್ತವಾಗಲು ಇನ್ನೂ ವಾರ ಕಾಯಬೇಕಾಗಿದೆ.

ಸಂಚಾರ ಸ್ಥಗಿತ
ಸೇತುವೆ ನಿರ್ಮಾಣ ಕಾಮಗಾರಿಗೆ ಟೆಂಡರ್‌ ನಡೆದು ತಿಂಗಳು ಕಳೆದರೂ ಕಾಮಗಾರಿಯನ್ನು ಮಳೆಗಾಲ ಪ್ರಾರಂಭಕ್ಕೆ ತಿಂಗಳ ಮೊದಲು ಪ್ರಾರಂಭಿಸಿ ದ್ದರಿಂದ ಸಮಸ್ಯೆ ಉದ್ಭವಿಸಿದೆ. ಎರಡು ವಾರಗಳ ಹಿಂದೆ ಸುರಿದ ಭಾರೀ ಮಳೆಗೆ ಎರಡು ದಿನಗಳ ಕಾಲ ಸಂಚಾರ ಸ್ಥಗಿತಗೊಂಡು ಈ ಪ್ರದೇಶದ ಜನರು 7 ಕಿ.ಮೀ. ದೂರದ ರಸ್ತೆಯಾಗಿರುವ ರೆಂಜಾಡಿ, ದೇರಳಕಟ್ಟೆ ಮಾರ್ಗವಾಗಿ ಸಂಚರಿಸುವಂತಾಗಿತ್ತು.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಬ್ಲಿಮೊಗರು ಅಡುವಿನ ತಗ್ಗು ಪ್ರದೇಶ ಸಂಪೂರ್ಣ ನೀರಿನಿಂದ ಮುಳುಗಿದ್ದು, ಈ ನೀರು ನೇತ್ರಾವತಿ ನದಿಗೆ ಹರಿಯುವ ಮಧ್ಯೆ ನಿರ್ಮಾಣಗೊಂಡಿರುವ ಪರ್ಯಾಯ ರಸ್ತೆ ಕೊಚ್ಚಿ ಹೋಗುವ ಭಯದಿಂದ ರಸ್ತೆಯಲ್ಲಿ ವಾಹನ ಸಂಚಾರ ನಡೆಸುತ್ತಿದ್ದಾರೆ.

ಸೇತುವೆ ಬಳಿ ನಿರ್ಮಾಣಗೊಂಡಿರುವ ಕೃತಕ ನೆರೆಯನ್ನು ಮಣ್ಣು ಹಾಕಿ ತಡೆಹಿಡಿದಿದ್ದರೂ ಎರಡು ದಿನಗಳಲ್ಲಿ ನಿರಂತರ
ಮಳೆ ಸುರಿಯುತ್ತಿರುವುದರಿಂದ ಮಳೆ ನೀರು ಪರ್ಯಾಯ ರಸ್ತೆಯ ಮಟ್ಟಕ್ಕೆ ನೀರು ನಿಂತಿದ್ದು, ಯಾವ ಕ್ಷಣದಲ್ಲಾದರೂ
ರಸ್ತೆ ಕೊಚ್ಚಿಹೋಗುವ ಭೀತಿಯಲ್ಲಿದೆ.  ಮಣ್ಣು ಹಾಕಿ ನೀರನ್ನು ತಡೆದಿದ್ದರಿಂದ ಇನ್ನೊಂದು ಕಡೆ ಗದ್ದೆಗಳೆಲ್ಲಾ ನೀರು ತುಂಬಿ ನದಿಯಂತಾಗಿದೆ.

ಪತ್ರಿಕೆ ಎಚ್ಚರಿಸಿತ್ತು 
ನಿಧಾನಗತಿಯ ಕಾಮಗಾರಿಯ ವಿಚಾರದಲ್ಲಿ ಮಳೆಗಾಲ ಆರಂಭವಾದಾಗ ಪರ್ಯಾಯ ರಸ್ತೆ ಸಂಚಾರ ಸ್ಥಗಿತಗೊಳ್ಳುವ ಕುರಿತು ಉದಯವಾಣಿಯಲ್ಲಿ ವಿಸ್ತ್ರತ ವರದಿ ಪ್ರಕಟಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸೇತುವೆಯಲ್ಲಿ ತಾತ್ಕಾಲಿಕ ಸಂಚಾರ ಮುಕ್ತಕ್ಕೆ 10 ದಿನಗಳ ಗಡುವು ನೀಡಿದ್ದರೂ. ಕಾಮಗಾರಿ ಮಂದಗತಿಯಲ್ಲಿ ನಡೆದಿದ್ದು, 15 ದಿನ ಕಳೆದರೂ ಸಂಚಾರಕ್ಕೆ ಮುಕ್ತವಾಗಿಲ್ಲ.

ಒಂದೂವರೆ ತಿಂಗಳು ಅಗತ್ಯ
ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಬೇಕಾದರೆ ಇನ್ನೂ ಒಂದೂವರೆ ತಿಂಗಳು ಅಗತ್ಯವಿದೆ. ಆದರೆ ನಿರಂತರ ಮಳೆ ಸುರಿದರೆ ಸಂಚಾರ ಸ್ಥಗಿತಗೊಳ್ಳುವ ಹಿನ್ನಲೆಯಲ್ಲಿ ಸೇತುವೆಯ ಎರಡೂ ಬದಿಗೂ ಮಣ್ಣನ್ನು ತುಂಬಿಸಿ ತಾತ್ಕಾಲಿಕವಾಗಿ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಮಳೆ ಕಳೆದ ಬಳಿಕ ಕಾಮಗಾರಿ ಪೂರ್ಣಗೊಳಿಸಲಾಗುವುದು.
– ದಾಸ್‌ ಪ್ರಕಾಸ್‌
ಕಾಮಗಾರಿಯ ಸಹಾಯಕ ಅಭಿಯಂತರರು

ಟಾಪ್ ನ್ಯೂಸ್

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.