ಗುತ್ತಿಗೆ ಆಧಾರಿತ KSRTC ಬಸ್ ಚಾಲಕರ ಸಂಬಳ ಕಡಿತ,ಅಸಮಾಧಾನ; ಕರ್ತವ್ಯಕ್ಕೆ ಗೈರಾದ ಚಾಲಕರು
Team Udayavani, Sep 14, 2024, 11:25 AM IST
ಸುಳ್ಯ: ಕೆ.ಎಸ್.ಆರ್.ಟಿ.ಸಿ.ಯಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿರುವ ಪುತ್ತೂರು ವಿಭಾಗದ ಕೆಲ ಚಾಲಕರಿಗೆ ಸಂಬಳದಲ್ಲಿ ಕಡಿತಗೊಳಿಸಿ ಪಾವತಿ ಮಾಡಿರುವ ಆರೋಪ ಕೇಳಿ ಬಂದಿತ್ತು. ಇದರಿಂದ ಅಸಮಾಧಾನಗೊಂಡಿರುವ ಗುತ್ತಿಗೆ ಆಧಾರಿತ ಚಾಲಕರು ಕರ್ತವ್ಯಕ್ಕೆ ಗೈರಾಗಿ ಸೆ.14ರ ಶನಿವಾರ ಪ್ರತಿಭಟಿಸುತ್ತಿದ್ದಾರೆ.
ಸುಳ್ಯ ಕೆ.ಎಸ್.ಆರ್.ಟಿ.ಸಿ. ಘಟಕದಲ್ಲಿ ಈ ಮೊದಲು ಪನ್ನಗ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 9 ಚಾಲಕರಿಗೆ 11 ತಿಂಗಳು ಸಮರ್ಪಕವಾಗಿ ಸಂಬಳ ನೀಡಲಾಗಿತ್ತು. ತಿಂಗಳ ಹಿಂದೆ ಆ ಸಂಸ್ಥೆಯ ಗುತ್ತಿಗೆ ಅವಧಿ ಮುಗಿದ ಬಳಿಕ ಇನ್ನೊಂದು ಸಂಸ್ಥೆ ಪೂಜ್ಯಾಯ ಸೆಕ್ಯೂರಿಟಿ ಸರ್ವಿಸ್ ಸಂಸ್ಥೆಯವರು ಗುತ್ತಿಗೆ ಪಡೆದು ಇವರನ್ನು ನೇಮಿಸಿಕೊಂಡಿದ್ದರು.
ಅವರು ನೇಮಿಸುವ ಸಂದರ್ಭದಲ್ಲಿ ಚಾಲಕರ ಬೇಡಿಕೆಯಂತೆ ಸಂಬಳ ಕಡಿತ ಮಾಡುವುದಿಲ್ಲ, ಮತ್ತಿತರ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ ಇದೀಗ ತಿಂಗಳ ಸಂಬಳದಲ್ಲಿ 5 ಸಾವಿರಕ್ಕೂ ಅಧಿಕ ಹಣ ಕಡಿತ ಮಾಡಲಾಗಿದ್ದು, ಕೆಲವರಿಗೆ 10 ಸಾವಿರದವರೆಗೆ ಕಡಿತ ಮಾಡಲಾಗಿದೆ. ಇನ್ನಿಬ್ಬರಿಗೆ ಸಂಬಳವೇ ಬಂದಿಲ್ಲ ಎಂದು ಚಾಲಕರು ಆರೋಪಿಸಿದ್ದಾರೆ.
ಸುಳ್ಯ ಘಟಕ ವ್ಯಾಪ್ತಿಯಲ್ಲಿ ಸುಮಾರು 9 ಚಾಲಕರಿಗೆ ಅನ್ಯಾಯ ಆಗಿದೆ ಎಂದು ಅವರು ಕೆಲಸಕ್ಕೆ ಗೈರಾಗಿ ಪ್ರತಿಭಟಿಸುತ್ತಿದ್ದಾರೆ. ಕೆ.ಎಸ್.ಆರ್.ಟಿಸಿ. ಅಧಿಕಾರಿಗಳು ಕೂಡ ಈ ಮೊದಲು ಭರವಸೆ ನೀಡಿದಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಇಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ. ಡಿಸಿ ಕಚೇರಿ ಮುಂಭಾಗ ಪ್ರತಿಭಟಿಸಲು ಮಡಿಕೇರಿ, ಸುಳ್ಯ, ಪುತ್ತೂರು ಘಟಕದ ಸಂತ್ರಸ್ತ ಚಾಲಕರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.