ಕಪ್ಪು ಹಣ ನಿಯಂತ್ರಣ: 2018ರಲ್ಲಿ ಸ್ವಿಸ್ ಖಾತೆಗಳ ವಿವರ
Team Udayavani, Jan 13, 2017, 3:45 AM IST
ಮಂಗಳೂರು: ಕೆಲವು ಹೊರದೇಶಗಳಲ್ಲಿದ್ದ ಕಪ್ಪು ಹಣ ಪುನಃ “ರೌಂಡ್ ಟ್ರಿಪ್ಪಿಂಗ್’ನಂತೆ ಬಂಡವಾಳ ರೂಪದಲ್ಲಿ ಭಾರತಕ್ಕೆ ಬಂದು ಬಿಳಿಯಾಗುತ್ತಿತ್ತು. ಇದನ್ನು ನಿಯಂತ್ರಿಸಲು ಸೈಪ್ರಸ್, ಮಾರಿಷಸ್ ಹಾಗೂ ಸಿಂಗಾಪುರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದೀಗ ಸ್ವಿಟ್ಜರ್ಲೆಂಡ್ ಜತೆಯೂ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಅಲ್ಲಿನ ಭಾರತೀಯರ ಖಾತೆಯ ಪೂರ್ಣ ಮಾಹಿತಿ 2018ರಿಂದ ದೊರೆಯಲಿದೆ ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ನಗರದ ಓಶಿಯನ್ ಪರ್ಲ್ ಹೋಟೆಲ್ನ ಸಭಾಂಗಣದಲ್ಲಿ ಗುರುವಾರ ಕೇಂದ್ರ ಸರಕಾರದ ನಗದು ಅಪಮೌಲಿÂàಕರಣ ಕುರಿತು ಅವರು ಉಪನ್ಯಾಸ ನೀಡಿದರು. ಈ ಒಪ್ಪಂದಗಳಿಂದ ಅವರ ಬಳಿ ಕಪ್ಪು ಹಣ ಇದೆಯೇ? ಅಥವಾ ನಿಯಮಾನುಸಾರ ಗಳಿಸಿದ ಹಣವೇ ಎನ್ನುವ ಪೂರ್ಣ ಮಾಹಿತಿ ತಿಳಿದು ಬರಲಿದೆ. ಒಂದು ವೇಳೆ ಕಪ್ಪು ಹಣ ಇದ್ದಲ್ಲಿ ಈ ಹಣ ಎತ್ತ ಸಾಗುತ್ತದೆ ಎನ್ನುವುದು ಕೂಡ ತಿಳಿಯಲು ಸಾಧ್ಯ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು, ಕೇಂದ್ರ ಸರಕಾರ ದೇಶದ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಹಣ ವ್ಯಯಿಸಿದೆ ಎಂದರು.
ಈ ಸಂದರ್ಭ ಅಪಮೌಲಿÂàಕರಣ ಹಾಗೂ ಡಿಜಿಟಲ್ ಪೇಮೆಂಟ್ ಮಾಹಿತಿ ಕುರಿತು ಕೈಪಿಡಿಯನ್ನು ಸಚಿವೆ ಬಿಡುಗಡೆಗೊಳಿಸಿದರು.
ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ದ.ಕ. ಜಿಲ್ಲಾ ಬಿಜೆಪಿ ಪ್ರಭಾರಿ ಉದಯಕುಮಾರ್ ಶೆಟ್ಟಿ ಹಾಜರಿದ್ದರು. ಉಮಾನಾಥ ಕೋಟ್ಯಾನ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.