Mangaluru ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ: ಭಂಡಾರಿ ಮನವಿ
Team Udayavani, Sep 2, 2024, 11:42 PM IST
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಕಠಿನ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಅವರಿಗೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮನವಿ ಮಾಡಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಡ್ರಗ್ ಮಾಫಿಯಾ ಹೆಚ್ಚಾಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ಡ್ರಗ್ ಮಾಫಿಯಾ ಪಾತ್ರ ಸ್ಪಷ್ಟವಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ, ಕೊಲೆ, ದರೋಡೆ ಇತ್ಯಾದಿ ಪ್ರಕರಣಗಳು ಹೆಚ್ಚಾಗಿವೆ.
ಮಾದಕ ವ್ಯಸನದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯುವಕರು, ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಇಸ್ಪೀಟು, ಮಟ್ಕಾ ಹಾವಳಿ ಹೆಚ್ಚಾಗುತ್ತಿದೆ.
ಇವುಗಳನ್ನು ನಿಯಂತ್ರಿಸುವಂತೆ ಪೊಲೀಸ್ ಇಲಾಖೆ ಕಠಿನ ಕಾನೂನು ಕ್ರಮ ಕೈಗೊಳ್ಳುವಂತೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.