ಜನಾಶೀರ್ವಾದ ಜನಪರ ಆಡಳಿತವಾಗಿ ಪರಿವರ್ತನೆ

ಮನಪಾ ಚುನಾಯಿತ ಬಿಜೆಪಿ ಪ್ರತಿನಿಧಿಗಳ ಅಭಿನಂದನೆ, ವಿಜಯೋತ್ಸವದಲ್ಲಿ ನಳಿನ್‌

Team Udayavani, Nov 17, 2019, 4:16 AM IST

nn-41

ಮಂಗಳೂರು: ಜನಪ್ರತಿನಿಧಿಗಳ ಅಭಿನಂದನ ಸಭೆ ಹಾಗೂ ವಿಜಯೋತ್ಸವವನ್ನು ನಳಿನ್‌ ಕುಮಾರ್‌ ಕಟೀಲು ಉದ್ಘಾಟಿಸಿದರು.

ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಹಾಜನತೆ ಅಭೂತಪೂರ್ವ ಆಶೀರ್ವಾದ ಮಾಡಿದ್ದಾರೆ. ಪಕ್ಷದ ಮೇಲೆ ಇನ್ನಷ್ಟು ಜವಾಬ್ದಾರಿಯನ್ನು ಹೊರಿಸಿದ್ದಾರೆ. ಜನತೆಯ ಈ ಆಶೀರ್ವಾದವನ್ನು ಜನಪರ ಆಡಳಿತವಾಗಿ ಪರಿವರ್ತಿಸುತ್ತೇವೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ಕಟೀಲು ಹೇಳಿದ್ದಾರೆ.

ನಗರದಲ್ಲಿ ಶನಿವಾರ ಆಯೋಜಿಸಿದ್ದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯ ಗಳಿಸಿದ ಪಕ್ಷದ ಜನಪ್ರತಿ ನಿಧಿಗಳ ಅಭಿನಂದನೆ ಸಭೆ ಹಾಗೂ ವಿಜಯೋತ್ಸವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನತೆ ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕಾರ್ಯವೆಸಗುತ್ತೇವೆ. ಇಂದು ಆಯೋಜನೆಗೊಂಡಿರುವುದು ಅಭಿನಂದನಾ ಸಮಾರಂಭವಲ್ಲ. ಚುನಾಯಿತರು ಮುಂದಿನ ಅಭಿವೃದ್ಧಿಗೆ ಪ್ರತಿಜ್ಞೆ ಕೈಗೊಳ್ಳುವ ಸಭೆ ಎಂದರು.

ಪರಿವರ್ತನೆಯ ಗಾಳಿ
ರಾಜ್ಯದಲ್ಲಿ ಪರಿವರ್ತನೆ ಗಾಳಿ ಬೀಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯ ಎಲ್ಲ 15 ಸ್ಥಾನಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಬಿಎಸ್‌ವೈ ನೇತೃತ್ವದ ಬಿಜೆಪಿ ಸರಕಾರ ಇನ್ನಷ್ಟು ಭದ್ರವಾಗುತ್ತದೆ ಎಂದರು. ಜೋಡೆತ್ತುಗಳಿವರು ರಾಜ್ಯದಲ್ಲಿ ಪಕ್ಷ ಸಂಘಟಿಸುವಲ್ಲಿ ಯಡಿಯೂರಪ್ಪ-ನಳಿನ್‌ ಕುಮಾರ್‌ ಜೋಡೆತ್ತುಗಳಂತೆ ಕೆಲಸ ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ವೇದವ್ಯಾಸ ಕಾಮತ್‌-ಡಾ| ಭರತ್‌ ಶೆಟ್ಟಿ ಜೋಡೆತ್ತುಗಳಂತೆ ಕಾರ್ಯನಿರ್ವಹಿಸಿ ಮನಪಾ ದಲ್ಲಿ ಪಕ್ಷಕ್ಕೆ ಭಾರೀ ಗೆಲುವು ದೊರಕಿಸಿಕೊಟ್ಟಿದ್ದಾರೆ ಎಂದರು.

ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ರಾಜೇಶ್‌ ನಾೖಕ್‌, ಉಮಾನಾಥ ಕೋಟ್ಯಾನ್‌, ಮಾಜಿ ಸಚಿವರಾದ ಬಿ. ನಾಗರಾಜ ಶೆಟ್ಟಿ , ಕೃಷ್ಣ ಪಾಲೆಮಾರ್‌, ಮಾಜಿ ಶಾಸಕರಾದ ಎನ್‌. ಯೋಗೀಶ್‌ ಭಟ್‌, ಪದ್ಮನಾಭ ಕೊಟ್ಟಾರಿ, ವಿಧಾನಪರಿಷತ್‌ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಬಾಲಕೃಷ್ಣ ಭಟ್‌, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಪ್ರಭಾರಿಗಳಾದ ಉದಯ ಕುಮಾರ್‌ ಶೆಟ್ಟಿ, ಗೋಪಾಲಕೃಷ್ಣ ಹೇರಳೆ, ಮುಖಂಡರಾದ ನಿತಿನ್‌ ಕುಮಾರ್‌, ರವಿಶಂಕರ ಮಿಜಾರು, ಕಿಶೋರ್‌ ರೈ, ಕ್ಯಾ| ಬೃಜೇಶ್‌ ಚೌಟ, ಭಾಸ್ಕರಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಶಾಸಕ ಡಾ| ಭರತ್‌ ಶೆಟ್ಟಿ ಸ್ವಾಗತಿಸಿ, ಸುದರ್ಶನ್‌ ಎಂ. ನಿರೂಪಿಸಿದರು.

ಕಾಂಗ್ರೆಸ್‌ಗೆ ತಕ್ಕ ಉತ್ತರ: ನಳಿನ್‌
ಕಾಂಗ್ರೆಸ್‌ನ ಕೆಟ್ಟ ರಾಜಕಾರಣಕ್ಕೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜನತೆ ತಕ್ಕ ಉತ್ತರ ನೀಡಿದ್ದಾರೆ. ಕಾಂಗ್ರೆಸ್‌ ಮೀಸಲಾತಿಯಲ್ಲಿ ರಾಜಕಾರಣ ಮಾಡಿತು. ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಹಾಗೂ ಅದರಲ್ಲಿ ದುಡಿದವರನ್ನು ಕೆಟ್ಟದಾಗಿ ನಡೆಸಿಕೊಂಡಿತು. ಪೂಜಾರಿ ಅವರ ಶಾಪ ನಮಗೆ ವರದಾನವಾಗಿ ಪರಿಣಮಿಸಿತು ಎಂದು ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಅಭೂತಪೂರ್ವ ಗೆಲುವು
ಶಾಸಕ ವೇದವ್ಯಾಸ ಕಾಮತ್‌ ಪ್ರಸ್ತಾವನೆಗೈದು ಮನಪಾದ ಇತಿಹಾಸದಲ್ಲಿ ಹಿಂದೆಂದೂ ಯಾವುದೇ ಪಕ್ಷಕ್ಕೆ ದೊರಕದ ಅಭೂತಪೂರ್ವ ಗೆಲುವು ಬಿಜೆಪಿಗೆ ಲಭಿಸಿದೆ. ಇದಕ್ಕೆ ಕಾರಣರಾದ ಮತದಾರರು ಹಾಗೂ ಕಾರ್ಯಕರ್ತ ದೇವರುಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.ಜನತೆ ಇಟ್ಟಿರುವ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.