ಕೊರೊನಾ ಆತಂಕ: ವರನ ಪ್ರಯಾಣಕ್ಕೆ ತಡೆ

ಪ್ರವಾಸಿ ಹಡಗಿನಲ್ಲಿರುವ ಉಳ್ಳಾಲದ ಯುವಕ; ನಿಗದಿಯಾಗಿದ್ದ ಮದುವೆ ಮುಂದೂಡಿಕೆ

Team Udayavani, Feb 8, 2020, 5:48 AM IST

coronavirus

ಉಳ್ಳಾಲ: ಪ್ರವಾಸಿ ಹಡಗಿನ ಸಿಬಂದಿ, ಇಲ್ಲಿನ ಮದುಮಗನಿಗೆ ರಜೆ ಸಿಗದೆ ಸೋಮವಾರಕ್ಕೆ ನಿಗದಿಯಾಗಿದ್ದ ಮದುವೆ ಮುಂದೂಡಲ್ಪಟ್ಟಿದೆ. ಇದಕ್ಕೆ ಜಗತ್ತಿನಾದ್ಯಂತ ಕಾಡುತ್ತಿರುವ ಕೊರೊನಾ ವೈರಸ್‌ ಭೀತಿ ಕಾರಣವಾಗಿದೆ.

ಚೀನ ಮೂಲದ “ವರ್ಲ್ಡ್ ಡ್ರೀಮ್‌’ ಐಷಾರಾಮಿ ಪ್ರವಾಸಿ ಹಡಗಿನಲ್ಲಿ ಸಿಬಂದಿಯಾಗಿರುವ ಕುಂಪಲದ ಮಾಧವ ಬಂಗೇರ ಅವರ ಪುತ್ರ ಗೌರವ್‌ ಅವರ ಮದುವೆ ಮಂಗಳೂರಿನಲ್ಲಿ ಸೋಮವಾರ ನಡೆಯುವುದೆಂದು ನಿಗದಿಯಾಗಿತ್ತು. ಪೂರ್ವ ಕಾರ್ಯಸೂಚಿಯಂತೆ ಗೌರವ್‌ ಅವರು ಶುಕ್ರವಾರ ಬೆಳಗ್ಗೆ ಮಂಗಳೂರು ತಲುಪಬೇಕಿತ್ತು. ಆದರೆ ಅವರ ಹಡಗಿಗೆ ನಿಗದಿತ ತಾಣದಲ್ಲಿ ಪ್ರವಾಸವನ್ನು ಕೊನೆಗೊಳಿಸಲು ಅವಕಾಶ ನಿರಾಕರಿಸಿದ್ದರಿಂದ ಇಕ್ಕಟ್ಟಿಗೆ ಸಿಲುಕಿದರು. ಈಗ ಅವರ ಹಡಗು ಹಾಂಕಾಂಗ್‌ ತಲುಪಿದ್ದು, ಕೊರೊನಾ ಭೀತಿಯಿಂದಾಗಿ ಎಲ್ಲರನ್ನೂ ಹಡಗಿನಲ್ಲಿಯೇ ಉಳಿಸಿಕೊಂಡು ನಿಗಾ ಇರಿಸಲಾಗಿದೆ. ಆದುದರಿಂದ ಹಡಗಿನಲ್ಲಿರುವ ಸಾವಿರಾರು ಮಂದಿ ಎಲ್ಲಿಯೂ ಹೋಗಲಾರದೆ ಸಿಲುಕಿಕೊಂಡಿದ್ದಾರೆ.

ಜ. 26ರಂದು ಪ್ರವಾಸ ಆರಂಭ
ಗೌರವ್‌ ಅವರಿದ್ದ ಹಡಗು ಜ. 26ರಂದು ಚೀನದಿಂದ ಪ್ರವಾಸ ಬೆಳೆಸಿ ತೈವಾನ್‌ನಲ್ಲಿ ಫೆ. 5ರಂದು ಪ್ರವಾಸ ಕೊನೆಗೊಳಿಸಬೇಕಿತ್ತು. ಆದರೆ ಈ ನಡುವೆ ಕೊರೊನಾ ವೈರಸ್‌ ಜಗತ್ತಿನ ವಿವಿಧ ದೇಶಗಳಿಗೆ ಹಬ್ಬಿದ್ದರಿಂದ ಚೀನದಿಂದ ಹೊರಟಿರುವ ಈ ನೌಕೆಯ ಮೇಲೂ ಸಂಶಯ ತಾಳಿ ತೈವಾನ್‌ನಲ್ಲಿ ಜನರನ್ನು ಇಳಿಸಲು ಅವಕಾಶ ನೀಡಿರಲಿಲ್ಲ. ಅನಂತರ ಹಡಗು ಹಾಂಕಾಂಗ್‌ಗೆ ಪ್ರಯಾಣಿಸಿತು. ಅಲ್ಲಿಯೂ ನಿರ್ಬಂಧ ವಿಧಿಸಿದ್ದರಿಂದ ಪ್ರಸ್ತುತ ಹಡಗು ಬಂದರು ಪ್ರದೇಶದಲ್ಲಿ ಲಂಗರು ಹಾಕಿದೆ. ಹಡಗಿನಲ್ಲಿರುವ ಸಿಬಂದಿ ಸಹಿತ ಎಲ್ಲ ಪ್ರಯಾಣಿಕರನ್ನು ಈಗಾಗಲೇ ಒಂದು ಬಾರಿ ತಪಾಸಣೆ ನಡೆಸಲಾಗಿದೆ. ಅದರಲ್ಲಿ ಯಾರಿಗೂ ಕೊರೊನಾ ಇರುವ ಅಂಶ ಪತ್ತೆಯಾಗಿಲ್ಲ. ಹಡಗಿನಲ್ಲಿ 1,600 ಮಂದಿ ಪ್ರಯಾಣಿಕರಿದ್ದು, ನೂರಾರು ಮಂದಿ ಸಿಬಂದಿ ಇದ್ದಾರೆ. ಈ ಹಡಗಿನಲ್ಲಿ ಒಟ್ಟು 80 ಮಂದಿ ಭಾರತೀಯರು ಇದ್ದಾರೆ.

ಎಲ್ಲ ತಯಾರಿ ನಡೆದಿತ್ತು
ಗೌರವ್‌ ಮದುವೆಗಾಗಿ ಎಲ್ಲ ತಯಾರಿ ನಡೆದಿತ್ತು. ಮದುವೆ ಆಮಂತ್ರಣ ಪತ್ರಿಕೆಯನ್ನು ಹಂಚಿ, ಅವಶ್ಯ ವಸ್ತುಗಳ ಖರೀದಿ ನಡೆದು, ರವಿವಾರ ಮೆಹಂದಿ ಎಂದು ನಿರ್ಧರಿಸಲಾಗಿತ್ತು. ಆದರೆ ಗೌರವ್‌ಗೆ ಪ್ರಯಾಣ ಬೆಳೆಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಮದುವೆಯನ್ನು ಮುಂದೂಡಲಾಗಿದೆ.

ಟಾಪ್ ನ್ಯೂಸ್

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.