ಮಾದರಿ ಬ್ಯಾಂಕ್ ಆಗಿ ಕಾರ್ಪ್ ಬ್ಯಾಂಕ್: ಜೈಕುಮಾರ್ ಗರ್ಗ್
Team Udayavani, Jun 29, 2017, 3:05 AM IST
ಮಂಗಳೂರು: ಕಾರ್ಪೊರೇಶನ್ ಬ್ಯಾಂಕ್ ಸಮಗ್ರ ಬೆಳವಣಿಗೆ ಹಾಗೂ ತನ್ನ ವಿನೂ ತನ ಬ್ಯಾಂಕಿಂಗ್ ಸೇವೆಯ ಮೂಲಕ ಮಾದರಿ ಬ್ಯಾಂಕ್ ಎಂಬ ಕೀರ್ತಿಗೆ ಪಾತ್ರವಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೈಕುಮಾರ್ ಗರ್ಗ್ ಹೇಳಿದರು. ಅವರು ಬುಧವಾರ ನಡೆದ ಬ್ಯಾಂಕಿನ 20ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶದ ಆರ್ಥಿಕತೆಯನ್ನು ನಗದು ಆಧಾರಿತ ವ್ಯವಸ್ಥೆಯಿಂದ ನಗದು ರಹಿತ ವ್ಯವಸ್ಥೆಯ ಕಡೆಗೆ ಕೊಂಡೊಯ್ಯಲು ಕೇಂದ್ರ ಸರಕಾರ ಹಮ್ಮಿಕೊಂಡಿರುವ ಜನಧನ್ ಯೋಜನೆ, ಎಲ್ಲರಿಗೂ ಬ್ಯಾಂಕ್ ಖಾತೆ ತೆರೆಯಲು ಅವಕಾಶ, ಸಬ್ಸಿಡಿ ಮತ್ತು ಇತರ ಸವಲತ್ತುಗಳನ್ನು ಹಾಗೂ ಹೊಸ ಉತ್ಪನ್ನಗಳನ್ನು ಒದಗಿಸುವ ಮೂಲಕ ನೆರವಾಗಿದೆ ಎಂದು ವಿವರಿಸಿದರು.
ತಂತ್ರಜ್ಞಾನ ಅಳವಡಿಕೆ: ಭದ್ರತಾ ವ್ಯವಸ್ಥೆಯನ್ನು ಸುಧಾರಿಸಲು ಹಾಗೂ ವ್ಯವಹಾರವನ್ನು ಸರಳೀಕರಿಸಲು ಹೊಸ ತಂತ್ರಜ್ಞಾನವನ್ನು ಅಳವಡಿಸುವ ನಿಟ್ಟಿನಲ್ಲಿ ಸಾಕಷ್ಟು ಹೂಡಿಕೆ ಮಾಡಿದೆ. ಕೋರ್ ಬ್ಯಾಂಕ್ ಸೊಲ್ಯೂಶನ್ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಿ ಹೊಸ ಜನಾಂಗದ ಗ್ರಾಹಕರ ಆಶೆ ಆಕಾಂಕ್ಷೆಗಳನ್ನು ಈಡೇರಿಸಲು ಯತ್ನಿಸಿದೆ ಎಂದರು. ಎಸ್‌ಎಂಎಸ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸರಳೀಕರಿಸಲು ಏಳು ಭಾಷೆಗಳಲ್ಲಿ ಕಾರ್ಪ್ ಅಪ್ನಾ ಆ್ಯಪ್ ಉತ್ಪನ್ನವನ್ನು ಪರಿಚಯಿಸಿದೆ ಎಂದರು. ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಮುರಳಿ ಭಗತ್, ಇತರ ನಿರ್ದೇಶಕರು, ಅಧಿಕಾರಿಗಳು, ಷೇರುದಾರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.