ದ.ಕ.: ಮತ್ತೆ ದಾಖಲೆಯ ಕೊರೊನಾ; ರಾಜ್ಯದಲ್ಲೇ ಅಧಿಕ
Team Udayavani, Aug 9, 2021, 6:21 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಕಳೆದ ಕೆಲವು ದಿನಗಳಿಂದ ದಿನಂಪ್ರತಿ ಸುಮಾರು 300ರಿಂದ 400 ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ರವಿವಾರ 438 ಮಂದಿಗೆ ಕೊರೊನಾ ದೃಢಪಟ್ಟಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ರಾಜ್ಯದಲ್ಲೇ ಅತೀ ಹೆಚ್ಚಿನ ಪ್ರಕರಣ ಮತ್ತು ಸಾವು ದ.ಕ. ಜಿಲ್ಲೆಯಲ್ಲಿ ದಾಖಲಾಗಿದೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ. 4.57ಕ್ಕೇರಿದೆ. ಸಾವನ್ನಪ್ಪಿದವರು ಮಂಗಳೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ತಲಾ ಒಬ್ಬರು ಮತ್ತು ಮೂವರು ಹೊರ ಜಿಲ್ಲೆಯವರು.
ದ.ಕ. ಜಿಲ್ಲೆಯಲ್ಲಿ ರವಿವಾರ 311 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 1,466 ಮಂದಿ ಮೃತಪಟ್ಟಿದ್ದಾರೆ. ಸದ್ಯ 3,415 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿನ 2 ಕಡೆ ಕಂಟೈನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.
ಉಡುಪಿ: 129 ಪಾಸಿಟಿವ್ ಪತ್ತೆ:
ಉಡುಪಿ: ಜಿಲ್ಲೆಯಲ್ಲಿ ರವಿವಾರ 129ಮಂದಿಗೆ ಸೋಂಕು ದೃಢಪಟ್ಟಿದೆ. 97 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ 1,403 ಸಕ್ರಿಯ ಪ್ರಕರಣಗಳಿವೆ.
ಕೊಡಗು: 11 ಪಾಸಿಟಿವ್ ಪತ್ತೆ:
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರವಿವಾರ 112 ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ. 65 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸಾವಿನ ಪ್ರಕರಣ ದಾಖಲಾಗಿಲ್ಲ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ. 3.76ರಷ್ಟಿದೆ. 657 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.