ಕೋವಿಡ್ : ಜೀವಹಾನಿ ತಡೆಗೆ ಮುನ್ನೆಚ್ಚರಿಕೆಯೊಂದೇ ಪರಿಹಾರ
Team Udayavani, May 28, 2021, 6:30 AM IST
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಕೊರೊನಾ ದೈನಂದಿನ ಪ್ರಕರಣ ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜೀವಹಾನಿ ತಡೆಯಲು ಜನರು ಮುನ್ನೆಚ್ಚರಿಕೆ ವಹಿಸುವುದೊಂದೇ ಮಾರ್ಗವಾಗಿದೆ.
ಉಭಯ ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳಿನಲ್ಲಿ 259 ಮಂದಿ ಕೋವಿಡ್ ನಿಂದ ಸಾವಿಗೀಡಾಗಿದ್ದಾರೆ. ದ.ಕ.ದಲ್ಲಿ 137, ಉಡುಪಿ ಜಿಲ್ಲೆಯಲ್ಲಿ 122 ಮಂದಿ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದಂತೂ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಮೇ 26ರಂದು ಒಂದೇ ದಿನ ದ.ಕ. ಜಿಲ್ಲೆಯಲ್ಲಿ ಬರೋಬ್ಬರಿ 11 ಮಂದಿ ಸಾವನ್ನಪ್ಪಿದ್ದಾರೆ.
ದ.ಕ.ದಲ್ಲಿ 2021ರ ಮಾರ್ಚ್ 1ರಿಂದ ಮೇ 16ರ ವರೆಗೆ ಮೃತಪಟ್ಟ 75 ಮಂದಿಯಲ್ಲಿ 61ರಿಂದ 70 ವರ್ಷದೊಳಗಿನ 29 ಮಂದಿ, 31-40 ವರ್ಷದೊಳಗಿನ ಒಬ್ಬರು, 41ರಿಂದ 50 ವರ್ಷದೊಳಗಿನ 7 ಮಂದಿ, 51ರಿಂದ 60ರೊಳಗಿನ 19 ಮಂದಿ, 71ರಿಂದ 80 ವರ್ಷದೊಳಗಿನ 15 ಮಂದಿ ಮತ್ತು 81ರಿಂದ 90 ವರ್ಷದೊಳಗಿನ ನಾಲ್ವರು ಸೇರಿದಂತೆ 25 ಮಂದಿ ಮಹಿಳೆಯರು, 50 ಮಂದಿ ಪುರುಷರು ಸೇರಿದ್ದಾರೆ.
ಬ್ಲ್ಯಾಕ್ ಫಂಗಸ್ ಕಾಟ :
ಕೋವಿಡ್ ಏರಿಳಿತದ ನಡುವೆಯೇ ಬ್ಲ್ಯಾಕ್ ಫಂಗಸ್ ಮತ್ತಷ್ಟು ಆತಂಕ ಹುಟ್ಟಿಸಿದೆ. ದ.ಕ.ದಲ್ಲಿ ಈಗಾಗಲೇ 25 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಇದರಲ್ಲಿ 18 ಮಂದಿ ಹೊರಜಿಲ್ಲೆಯವರು. ಕೆಲವರಿಗೆ ಈಗಾಗಲೇ ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿದೆ. ಇಬ್ಬರು ಈಗಾಗಲೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 12 ಮಂದಿಗೆ ಬ್ಲ್ಯಾಕ್ ಫಂಗಸ್ ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. ಈ ರೋಗಕ್ಕೆ ಆಸ್ಪತ್ರೆಗಳಲ್ಲಿ ಔಷಧದ ಕೊರತೆ ಕಾಣುತ್ತಿದೆ. ಔಷಧಕ್ಕಾಗಿ ಖಾಸಗಿ ಆಸ್ಪತ್ರೆಗಳು ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಬೇಕು. ಆದರೂ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ.
ಸಾವಿನ ಲೆಕ್ಕ ಕೆಲವು ಮಾತ್ರ! :
ಬೇರೆ ಕಾಯಿಲೆ ಇದ್ದು, ಕೋವಿಡ್ ದೃಢ ಪಟ್ಟು ಮೃತಪಟ್ಟರೆ ಅಂತಹ ಸಾವನ್ನು ಕೊರೊನಾದಿಂದಾದದ್ದು ಎಂದು ಪರಿಗಣಿಸಲಾ ಗುವುದಿಲ್ಲ. ಬದಲಾಗಿ ಆ ಸಮಯದಲ್ಲಿ ಆತನಿಗೆ ಬೇರೆ ಕಾಯಿಲೆ ಇದ್ದರೆ, ಸಾವಿನ ನಿಖರತೆ ಪತ್ತೆ ಮಾಡಿದ ಬಳಿಕವೇ ಕಾರಣವನ್ನು ನಿರ್ಧರಿಸಲಾಗುತ್ತದೆ. ಇದಕ್ಕಾಗಿಯೇ 13 ಮಂದಿ ವೈದ್ಯಾಧಿಕಾರಿಗಳ ತಂಡವನ್ನು ಹಿಂದಿನ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ರಚಿಸಿದ್ದರು.
ನಿರ್ಲಕ್ಷ್ಯ ಸಲ್ಲದು :
ಸಾರ್ವಜನಿಕರು ಕೋವಿಡ್ ನಿರ್ಲಕ್ಷಿಸದೆ ನಿಯಮ ಪಾಲಿಸಬೇಕು. ರೋಗ ಲಕ್ಷಣ ಕಂಡುಬಂದರೆ ಕೂಡಲೇ ಕೊರೊನಾ ಪರೀಕ್ಷೆಗೆ ಒಳಗಾಗಿ. ಆಸ್ಪತ್ರೆ ಬಗ್ಗೆ ನಿರ್ಲಕ್ಷ್ಯ ಮನೋಭಾವ, ಸುಳ್ಳು ಸುದ್ದಿಗಳನ್ನು ನಂಬಬೇಡಿ. ಎರಡನೇ ಅಲೆಯಲ್ಲಿ ವೈರಸ್ ತೀವ್ರಗತಿಯಲ್ಲಿ ಹರಡುತ್ತಿದೆ.–ಡಾ| ಸುಧೀರ್ ಚಂದ್ರ ಸೂಡ, ಉಡುಪಿ ಡಿಎಚ್ಒ
ನಿಯಮ ಪಾಲಿಸಿ :
ಕೋವಿಡ್ ಲಕ್ಷಣ ಇದ್ದರೂ ಕೆಲವರು ಹತ್ತಿರದ ಮೆಡಿಕಲ್, ವೈದ್ಯರಿಂದ ಜ್ವರದ ಮಾತ್ರೆಗಳನ್ನು ತೆಗೆದುಕೊಂಡು ತಾತ್ಕಾಲಿಕವಾಗಿ ಸುಧಾರಿಸಿಕೊಳ್ಳುತ್ತಾರೆ. ಉಲ್ಬಣಗೊಂಡ ಬಳಿಕ ಕೊರೊನಾ ಪರೀಕ್ಷೆ ನಡೆಸುತ್ತಿದ್ದಾರೆ. ಮೊದಲ ಅಲೆಯಲ್ಲಿ 70 ವರ್ಷ ಮೇಲ್ಪಟ್ಟವರ ಸಾವಿನ ಸಂಖ್ಯೆ ಹೆಚ್ಚು ಇತ್ತು. ಈಗ 45-65 ವರ್ಷದೊಳಗಿನವರೇ ಹೆಚ್ಚಾಗಿ ಸಾವಿಗೀಡಾಗುತ್ತಿದ್ದಾರೆ. ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಂಡಿದ್ದಾರೆ. ಎಲ್ಲರೂ ನಿಯಮ ಪಾಲನೆ ಮಾಡಬೇಕು. – ಡಾ| ಅಣ್ಣಯ್ಯ ಕುಲಾಲ್, ಡೆತ್ ಆಡಿಟ್ ಕಮಿಟಿ ಸದಸ್ಯ, ದ.ಕ. ಜಿಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.