‘ಮಂಗಳೂರನ್ನು ಸೌಹಾರ್ದ ತಾಣವಾಗಿಸಲು ಸಿಪಿಎಂ ಬದ್ಧ’
Team Udayavani, Oct 21, 2017, 3:06 PM IST
ಮಹಾನಗರ: ಇತ್ತೀಚಿನ ವರ್ಷಗಳಲ್ಲಿ ಕೆಲವು ಕೋಮುವಾದಿ ಶಕ್ತಿಗಳು ಮಂಗಳೂರನ್ನು ಪ್ರಯೋಗ ಶಾಲೆಯನ್ನಾಗಿಸಿ, ಕೋಮುಜ್ವಾಲೆಯನ್ನು ಹಬ್ಬಿಸಿ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿದ್ದು, ತುಳುನಾಡಿನ ಸಂಸ್ಕೃತಿಯನ್ನೇ ನಾಶಪಡಿಸುವ ಮೂಲಕ ಭಯದ ವಾತಾವರಣವನ್ನು ನಿರ್ಮಿಸಿದ್ದಾರೆ. ಸೌಹಾರ್ದವನ್ನು ನೆಲೆಗೊಳಿಸಲು ಹಾಗೂ ಮಂಗಳೂರನ್ನು ಸೌಹಾರ್ದ ತಾಣ ವನ್ನಾಗಿಸಲು ಪಕ್ಷ ಕಂಕಣಬದ್ಧವಾಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ವಾಸುದೇವ ಉಚ್ಚಿಲ್ ಹೇಳಿದರು.
ಅವರು ಪಕ್ಷದ ನೇತೃತ್ವದಲ್ಲಿ ಸೌಹಾರ್ದದಿಂದ ಅಭಿವೃದ್ಧಿಯೆಡೆಗೆ ಎಂಬ ಘೋಷಣೆಯೊಂದಿಗೆ ಡಿಸೆಂಬರ್ನಲ್ಲಿ ಜರಗಲಿರುವ ಜನತೆಯೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಸೌಹಾರ್ದ ನಿರ್ಮಾಣ
ಅಧ್ಯಕ್ಷತೆ ವಹಿಸಿದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಸ್ವಚ್ಚ, ಸುಂದರ, ಸಮೃದ್ಧ, ಸೌಹಾರ್ದ ಮಂಗಳೂರಿನ ನಿರ್ಮಾಣ ನಮ್ಮ ಕನಸಾಗಿದ್ದು, ಅದನ್ನು ಸಾಕಾರಗೊಳಿಸಲು ಸ್ಪಷ್ಟ ಹಾಗೂ ವೈಜ್ಞಾನಿಕ ವಾದ ದೃಷ್ಟಿಯನ್ನು ಹೊಂದಿದೆ ಎಂದರು.
ನಗರ ದಕ್ಷಿಣ ಸಮಿತಿ ಸದಸ್ಯರಾದ ಯೋಗೀಶ್ ಜಪ್ಪಿನಮೊಗರು, ಸಂತೋಷ್ ಶಕ್ತಿನಗರ, ದಿನೇಶ್ ಶೆಟ್ಟಿ, ಪ್ರೇಮನಾಥ ಜಲ್ಲಿಗುಡ್ಡೆ, ಭಾರತಿ ಬೋಳಾರ ಮತ್ತಿತರರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.