ಲೈಂಗಿಕ ದೌರ್ಜನ್ಯ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ


Team Udayavani, Sep 24, 2022, 12:20 AM IST

ಲೈಂಗಿಕ ದೌರ್ಜನ್ಯ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೊ) ಎಫ್ಟಿಎಸ್‌ಸಿ-1 ನ್ಯಾಯಾಲಯ 3 ವರ್ಷಗಳ ಸಜೆ ವಿಧಿಸಿ ತೀರ್ಪು ನೀಡಿದೆ.

ಕೊಕ್ಕಡದ ಪದ್ಮನಾಭ ಶಿಕ್ಷೆಗೊಳಗಾದವ. 2019ರ ಆ. 17ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ತನ್ನ ಗೆಳತಿಯೊಂದಿಗೆ ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದಳು. ಗೆಳತಿ ಆಕೆಯ ಮನೆಯ ಕಡೆಗೆ ತೆರಳಿದ್ದಳು. ಈ ಸಂದರ್ಭ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿದ ಆರೋಪಿ ಲೈಂಗಿಕ ಉದ್ದೇಶದಿಂದ ಆಕೆಯ ಮಾನಕ್ಕೆ ಕುಂದುಂಟಾಗುವಂತೆ ಆಕೆಯ ಕೈ ಹಿಡಿದು ಎಳೆದಿದ್ದ. ಆಕೆ ಬಿಡಿಸಿಕೊಂಡು ಗೆಳತಿಯ ಮನೆಯ ಕಡೆಗೆ ಹೋಗಿ ಗೆಳತಿಯನ್ನು ಕೂಗಿ ಕರೆದಿದ್ದಳು. ಆಕೆಯ ಗೆಳತಿ ಆಕೆಯ ತಂದೆಗೆ ವಿಷಯ ತಿಳಿಸಿದ್ದಳು.

ಆರೋಪಿ ಆಕೆಯ ಮನೆಗೂ ಬಂದು ಆಕೆಯ ತಂದೆಗೆ ಅವಾಚ್ಯವಾಗಿ ಬೈದಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಚಂದ್ರಶೇಖರ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕೊÕà) ಎಫ್ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಆರೋಪಿ ತಪ್ಪಿತಸ್ಥನೆಂದು ರುಜುವಾತಾಗಿದೆ ಎಂದು ತೀರ್ಪು ನೀಡಿದ್ದಾರೆ. ಅಪರಾಧಿಗೆ ಪೋಕೊÕà ಕಾಯ್ದೆಯ ಕಲಂ 12ರಡಿ 3 ವರ್ಷ ಸಾದಾ ಸಜೆ ಮತ್ತು 500 ರೂ. ದಂಡ, ಐಪಿಸಿ ಸೆಕ್ಷನ್‌ 354(ಡಿ)ಪ್ರಕಾರ ಮೂರು ವರ್ಷ ಸಾದಾ ಸಜೆ ಮತ್ತು 500 ರೂ. ದಂಡ ಹಾಗೂ ಐಪಿಸಿ 341ರಂತೆ 1 ವರ್ಷ ಸಜೆ ವಿಧಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿದ್ದಾರೆ. ಪ್ರಾಸಿಕ್ಯೂಷನ್‌ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಅವರು ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.