ಪಿಎಫ್ಐ ಒಳಗೆ “ಶಾಹೀನ್ ಗ್ಯಾಂಗ್’! ಲವ್ ಜೆಹಾದ್ಗೆ ಮಹಿಳಾ ತಂಡದ ನೆರವು: ಎನ್ಐಎ
Team Udayavani, Oct 20, 2022, 7:55 AM IST
ಮಂಗಳೂರು: ಹಿಂದೂ ಯುವತಿಯರನ್ನು ಲವ್ ಜೆಹಾದ್ಗೆ ಒಳಪಡಿಸುವುದಕ್ಕಾಗಿ ನಿಷೇಧಿತ ಪಿಎಫ್ಐ ಸಂಘಟನೆಯಲ್ಲಿ “ಶಾಹೀನ್ ಗ್ಯಾಂಗ್’ ಎಂಬ ಮಹಿಳಾ ಗುಂಪು ಸಕ್ರಿಯವಾಗಿತ್ತು ಎಂಬುದು ಎನ್ಐಎ ವಿಚಾರಣೆ ವೇಳೆ ಗೊತ್ತಾಗಿದೆ ಎಂದು ತಿಳಿದುಬಂದಿದೆ.
ಪಿಎಫ್ಐಯ ವಿದ್ಯಾರ್ಥಿ ಸಂಘಟನೆಯಾಗಿದ್ದ ಸಿಎಫ್ಐ (ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಜತೆಗೆ ಕಾರ್ಯನಿರ್ವಹಿಸುತ್ತಿದ್ದ ಶಾಹೀನ್ ಗ್ಯಾಂಗ್ ಹಿಂದೂ ವಿದ್ಯಾರ್ಥಿನಿಯರನ್ನು ಮುಸ್ಲಿಂ ಯುವಕರಿಗೆ ಪರಿಚಯಿಸಿ ವಿದ್ಯಾರ್ಥಿನಿಯರು ಪ್ರೀತಿಯ ಬಲೆಗೆ ಬೀಳುವಂತೆ ಮಾಡುತ್ತಿತ್ತು. ಅನಂತರ ಲವ್ ಜೆಹಾದ್ಗೆ ಸಹಕರಿಸುತ್ತಿತ್ತು. ಶಾಹೀನ್ ಗ್ರೂಪ್ಗೆ ಕೂಡ ಪಿಎಫ್ಐನಿಂದ ತರಬೇತಿ ನೀಡಲಾಗುತ್ತಿತ್ತು. ಈ ಗುಂಪು ದ.ಕ., ಉಡುಪಿ, ಕೊಡಗು, ಶಿವಮೊಗ್ಗ ಮೊದಲಾದೆಡೆ ಹೆಚ್ಚು ಕ್ರಿಯಾಶೀಲವಾಗಿತ್ತು ಎಂದು ಮೂಲಗಳು ತಿಳಿಸಿವೆ.
ಸಾಕ್ಷ್ಯ ಸಂಗ್ರಹ
ಡಿಜೆ ಹಳ್ಳಿ ಮಾದರಿಯಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಮಂಗಳೂರು ಸಹಿತ ದ.ಕ. ಜಿಲ್ಲೆಯ ವಿವಿಧೆಡೆ ಎನ್ಐಎ ಜತೆ ದಾಳಿ ನಡೆಸಿದ್ದ ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಮತ್ತು ಎಸ್ಪಿ ಕಚೇರಿಗೆ ಆಗಮಿಸಿ ಸಾಕ್ಷ್ಯ ಸಂಗ್ರಹ ಪ್ರಕ್ರಿಯೆ ನಡೆಸಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆ, ಗಲಭೆಗಳ ಬಗ್ಗೆ, ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಸೇರಿದಂತೆ ಹಲವೆಡೆ ನಡೆದ ಚಟುವಟಿಕೆಗಳ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ನಲ್ಲಿ ಅಪರಿಚಿತ ಶವ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.