ಕರಾವಳಿ ಅಪರಾಧ ಸುದ್ದಿಗಳು


Team Udayavani, Jun 28, 2019, 9:27 AM IST

crime-news-symbolic-750

ಮಂಗಳೂರಿನವರು ಕೇರಳದ ಕಣ್ಣೂರಿನ ಮನೆಯಲ್ಲಿ ಬಚ್ಚಿಟ್ಟಿದ್ದರು
ದರೋಡೆ ತಂಡದ 13 ಲ. ರೂ., 4 ಪಾಸ್‌ಪೋರ್ಟ್‌ ಪತ್ತೆ
ಕಾಸರಗೋಡು: ಮಂಗಳೂರಿನ ದರೋಡೆ ತಂಡ ಕಣ್ಣೂರಿನ ಮನೆಯೊಂದರಲ್ಲಿ ಬಚ್ಚಿಟ್ಟಿದ್ದ 13,45,000 ರೂ. ಮತ್ತು ನಾಲ್ಕು ಪಾಸ್‌ಪೋರ್ಟ್‌ಗಳನ್ನು ಕಣ್ಣೂರು ಡಿವೈಎಸ್‌ಪಿ ಪಿ. ಸದಾನಂದನ್‌ ನೇತೃತ್ವದ ಪೊಲೀಸರು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಮೂಲ್ಕಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ದರೋಡೆ ಪ್ರಕರಣವೊಂದರ ಆರು ಮಂದಿ ಆರೋಪಿಗಳ ಪೈಕಿ ತಲೆಮರೆಸಿ ಕೊಂಡಿರುವ ಮಂಗಳೂರು ನಿವಾಸಿಗಳಾದ ಮುನೀರ್‌ ಮತ್ತು ಆತನ ಪುತ್ರ ಸಿಯಾಸ್‌ ಈ ಹಣ ಮತ್ತು ಪಾಸ್‌ಪೋರ್ಟ್‌ನ್ನು ಕಣ್ಣೂರು ಅಳಿಕ್ಕೋಡಿನಲ್ಲಿರುವ ಸಂಬಂಧಿಕರೋರ್ವರ ಮನೆಯಲ್ಲಿ ಅವರಿಗೆ ತಿಳಿಯದೆ ಬಚ್ಚಿಟ್ಟಿದ್ದರು. ಅದನ್ನು ಪರಿಶೀಲಿಸಲು ಪದೇಪದೆ ಆ ಮನೆಗೆ ಬರುತ್ತಿದ್ದರು. ಈ ಬಗ್ಗೆ ರಹಸ್ಯ ಮಾಹಿತಿ ಲಭಿಸಿದ ಆಧಾರದಲ್ಲಿ ಕಣ್ಣೂರು ಡಿವೈಎಸ್‌ಪಿ ಸದಾನಂದನ್‌ ನೇತೃತ್ವದ ಪೊಲೀಸರು ದಾಳಿ ನಡೆಸಿ ಮಾಲುಗಳನ್ನು ವಶಪಡಿಸಿಕೊಂಡರು. ಮೂಲ್ಕಿ ಪೊಲೀಸರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ.

*
ಮೂಲ್ಕಿ: ಕುಖ್ಯಾತ ಕಳ್ಳರು ಗೋವಾ ಪೊಲೀಸರ ವಶಕ್ಕೆ

ಮೂಲ್ಕಿ: ಇಲ್ಲಿನ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕುಖ್ಯಾತ ಅಂತಾರಾಜ್ಯ ಮಟ್ಟದ ಕಳವು ತಂಡದ ಮಹಮ್ಮದ್‌ ಸಿನಾನ್‌ ಮತ್ತು ಸವಾದ್‌ ಯಾನೆ ಕರಿಮಣಿಯನ್ನು ಹಾಗೂ ಅವರು ಅಪಹರಿಸಿದ್ದ ಪೋರ್ಚುನರ್‌ ಕಾರನ್ನು ಗೋವಾ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಆರೋಪಿಗಳನ್ನು ಹಾಗೂ ಅವರು ಕದ್ದಿದ್ದ ವಸ್ತುಗಳನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಗೋವಾ ಪೊಲೀಸರು ಮೂಡುಬಿದಿರೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದನ್ನು ಕೋರ್ಟ್‌ ಪುರಸ್ಕರಿಸಿದೆ.

*
ಮಲ್ಲೂರು: ಕೊಲೆ ಯತ್ನ ಪ್ರಕರಣದ ಆರೋಪಿ ಬಂಧನ
ಮಂಗಳೂರು: ಮಲ್ಲೂರಿನಲ್ಲಿ 2 ತಿಂಗಳ ಹಿಂದೆ ನಡೆದ ಕೊಲೆ ಯತ್ನ ಪ್ರಕರಣದ ಆರೋಪಿ ಉಳಾಯಿಬೆಟ್ಟು ನಿವಾಸಿ ಅನ್ಸಾರ್‌ (20)ನನ್ನು ದಕ್ಷಿಣ ಉಪವಿಭಾಗ ರೌಡಿ ನಿಗ್ರಹದಳ ಮತ್ತು ಗ್ರಾಮಾಂತರ ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಈತ ಮಲ್ಲೂರಿನಲ್ಲಿ ಎರಡು ತಿಂಗಳ ಹಿಂದೆ ವ್ಯಕ್ತಿಯೊಬ್ಬರ ಮೇಲೆ ಮರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಅನ್ಸಾರ್‌ ಮೇಲೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಈ ಹಿಂದೆ ಕೋಮುಗಲಭೆ, ದನಕಳ್ಳತನ, ಕೊಲೆಯತ್ನ ಸಹಿತ 7 ಪ್ರಕರಣಗಳು ದಾಖಲಾಗಿವೆ. 2012ರಿಂದ ತಲೆಮರೆಸಿಕೊಂಡಿದ್ದ ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ನಗರದ ಕಣ್ಣೂರು ಬಳಿಯಿರುವ ಬಗ್ಗೆ ಮಾಹಿತಿ ನಡೆದ ಗ್ರಾಮಾಂತರ ಪೊಲೀಸರು ರೌಡಿ ನಿಗ್ರಹದಳದ ಜತೆ ಗೂಡಿ ಕಾರ್ಯಾಚರಣೆ ನಡೆಸಿ ಬುಧವಾರ ಬಂಧಿಸಿದರು. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ಇನ್‌ಸ್ಪೆಕ್ಟರ್‌ ಭಜಂತ್ರಿ ಮತ್ತು ಸಿಬಂದಿ ಕಾರ್ಯಚರಣೆ ನಡೆಸಿದ್ದರು.

*
ಪುಂಜಾಲಕಟ್ಟೆ: ಪುತ್ರಿ ಮೇಲೆ ಅತ್ಯಾಚಾರ; ತಂದೆ ಬಂಧನ
ಪುಂಜಾಲಕಟ್ಟೆ: ಠಾಣಾ ವ್ಯಾಪ್ತಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ತಂದೆಯನ್ನು ಬಂಧಿಸಲಾಗಿದೆ.
ಸಂತ್ರಸ್ತ ಬಾಲಕಿಯು ತಂದೆ- ತಾಯಿ, ತಮ್ಮ ಹಾಗೂ ತಂಗಿಯೊಂದಿಗೆ ಮನೆಯಲ್ಲಿ ವಾಸವಾಗಿದ್ದು, ಫೆ. 8ರಂದು ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದ ಸಂದರ್ಭ ತಂದೆ ಅತ್ಯಾಚಾರ ಎಸಗಿದ್ದಾನೆ. ಬಳಿಕವೂ ಹಲವು ಬಾರಿ ಅತ್ಯಾಚಾರ ಎಸಗಿದ್ದು, ಈಗ ತಾನು ಗರ್ಭಿಣಿಯಾಗಿರುವುದಾಗಿ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಳು. ಪೋಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪುಂಜಾಲ ಕಟ್ಟೆ ಪೊಲೀಸರು ಆರೋಪಿಯನ್ನು ಬುಧವಾರ ರಾತ್ರಿ ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.