ಸೊತ್ತು ಕಳವು ಪ್ರಕರಣ: ಮೂವರ ಸೆರೆ


Team Udayavani, Feb 8, 2020, 5:30 AM IST

7UPPKALAVU

ಉಪ್ಪಿನಂಗಡಿ: ಇಲ್ಲಿನ ಹಳೆಗೇಟಿಲ್ಲಿರುವ “ಜಿ.ಕೆ. ಗುಜಿರಿ ಅಂಗಡಿಯ ಗೋದಾಮಿನಿಂದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಸೊತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇಳಂತಿಲ ಗ್ರಾಮದ ಜೋಗಿಬೆಟ್ಟು ನಿವಾಸಿ ರವಿ ಶೆಟ್ಟಿ ಎಂಬವರ ಪುತ್ರ ಹರ್ಷಿತ್‌ (18), 34 ನೆಕ್ಕಿಲಾಡಿಯ ಆದರ್ಶನಗರದ ಅಬ್ದುಲ್‌ ಖಾದರ್‌ ಎಂಬವರ ಪುತ್ರ ಮುಹಮ್ಮದ್‌ ಸಿನಾನ್‌ (19) ಹಾಗೂ ಬಾರ್ಯ ಗ್ರಾಮದ ಪಿಲಿಗೂಡು ನಿವಾಸಿ ಮುಹಮ್ಮದ್‌ ಎಂಬವರ ಪುತ್ರ ಇಸ್ಮಾಯೀಲ್‌ ಜೆ. (18) ಬಂಧಿತ ಆರೋಪಿಗಳು. ಇವರಿಂದ ಸುಮಾರು 65 ಸಾವಿರ ರೂ. ಮೌಲ್ಯದ ಕಳವು ಮಾಡಿದ ಗುಜರಿ ಸಾಮಾನು ಹಾಗೂ ಸಾಗಾಟಕ್ಕೆ ಬಳಸಿದ ಸುಮಾರು 50 ಸಾವಿರ ರೂ. ಮೌಲ್ಯದ ಅಟೋ ರಿûಾವನ್ನು ವಶಕ್ಕೆ ಪಡೆಯಲಾಗಿದೆ.

ಘಟನೆಯ ವಿವರ: ಹಳೆಗೇಟು ಬಳಿಯಿರುವ “ಜಿ.ಕೆ. ಸ್ಕಾ$›ಪ್‌ ಗುಜಿರಿ ಅಂಗಡಿಯ ಗೋದಾಮಿನಲ್ಲಿರಿಸಲಾಗಿದ್ದ ತಾಮ್ರ, ಹಿತ್ತಾಳೆ, ಬ್ಯಾಟರಿ ಸೇರಿದಂತೆ ಸುಮಾರು ಒಂದು ಲಕ್ಷ ರೂ. ಮೌಲ್ಯದ ಗುಜರಿ ಸಾಮನುಗಳನ್ನು 15 ದಿನಗಳ ಹಿಂದೆ ಕಳವುಗೈಯಲಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಉಪ್ಪಿನಂಗಡಿ ಪೊಲೀಸರಿಗೆ ಇವರ ಬಗ್ಗೆ ಸುಳಿವು ಸಿಕ್ಕಿದ್ದು, ಫೆ.7ರಂದು ಬೆಳಗ್ಗೆ ಈ ಮೂವರು ಆರೋಪಿಗಳು ಬೆಳ್ತಂಗಡಿ ಕಡೆಯಿಂದ ಅಟೋ ರಿûಾದಲ್ಲಿ ಉಪ್ಪಿನಂಗಡಿಗೆ ಬರುತ್ತಿದ್ದಾಗ ಇವರಿಗಾಗಿ ಹೊಂಚು ಹಾಕಿದ್ದ ಪೊಲೀಸರು ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯ ಬಳಿ ಮೂವರನ್ನು ಬಂಧಿಸಿ, ಸೊತ್ತು ವಶಕ್ಕೆ ಪಡೆದಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪುತ್ತೂರು ಗ್ರಾಮಾಂತರ ಪ್ರಭಾರ ವೃತ್ತ ನಿರೀಕ್ಷಕ ಸಿಪಿಐ ತಿಮ್ಮಪ್ಪ ನಾಯ್ಕ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ ಈರಯ್ಯ ಡಿ. ಎನ್‌., ಉಪ್ಪಿನಂಗಡಿ ಠಾಣಾ ಪೊ›ಬೆಷನರಿ ಪಿಎಸ್‌ಐ ಪವನ ನಾಯಕ್‌, ಎಎಸ್‌ಐ ಚೋಮ ಎಂ.ಪಿ., ಸಿಬ್ಬಂದಿಗಳಾದ ಶೇಖರ ಗೌಡ, ದೇವದಾಸ್‌, ಇರ್ಷಾದ್‌ ಪಿ., ಶ್ರೀಧರ್‌ ಸಿ.ಎಸ್‌., ಜಗದೀಶ್‌ ರೇವಣ್ಣ, ಜಿಲ್ಲಾ ಗಣಕಯಂತ್ರದ ಸಿಬ್ಬಂದಿ ದಿವಾಕರ ಮತ್ತು ಸಂಪತ್‌, ಚಾಲಕ ನಾರಾಯಣ ಅವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-aranthodu

Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ

6-kambala

Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

2-vitla

Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bellary; BJP protests demanding Priyank Kharge’s resignation

Bellary; ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

20-water-price

Water Price Hike: ಬಸ್‌ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

17-bng

Bengaluru: ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.